DAKSHINA KANNADA
ಮಂಗಳೂರು: ಹ*ಲ್ಲೆ, ಲೈಂ*ಗಿಕ ಕಿರುಕುಳ ಪ್ರಕರಣ; ಆರೋಪಿಗಳ ಪಾಸ್‌ಪೋರ್ಟ್ ಕ್ಯಾನ್ಸಲ್
ಮಂಗಳೂರು: ಹ*ಲ್ಲೆ, ಲೈಂಗಿಕ ಕಿರುಕುಳ ಪ್ರಕರಣದ ಆರೋಪಿಗಳಿಗೆ ಪೊಲೀಸರು ಕ್ಲಿಯರೆನ್ಸ್ ನೀಡಿರುವ ವಿಚಾರದ ಕುರಿತು ವರದಿಯಾಗಿದೆ.
ಕುಲಶೇಖರದ ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಮಹಿಳೆ ಮತ್ತು ಆಕೆಯ ಸಂಬಂಧಿಕರೊಬ್ಬರಿಗೆ ಅ*ವಾಚ್ಯವಾಗಿ ನಿಂ*ದನೆ ಮಾಡಿ, ಕೆ*ನ್ನೆಗೆ ಹೊಡೆದು, ತಲೆಯ ಜುಟ್ಟನ್ನು ಎಳೆದು, ಬುರ್ಖಾ ಹರಿದು ಹಾಕಿ ಹ*ಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾವೂದ್ ಹಾಗೂ ಇತರ ನಾಲ್ವರ ವಿರುದ್ಧ 2023 ರ ಮೇ 13 ರಲ್ಲಿ ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯದಲ್ಲಿ ಎವಿಡೆನ್ಸ್ ಹಂತದಲ್ಲಿ ಇರುವಾಗಲೇ ಸಿದ್ದಿಕ್ ಮತ್ತು ಇನ್ನೋರ್ವ ಆರೋಪಿ ಪಾಸ್‌ಪೋರ್ಟ್‌ಗೆಂದು ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಪೊಲೀಸ್ ಪರಿಶೀಲನೆಗೆಂದು ಬಂದಾಗ ಅರ್ಜಿದಾರರ ಮೇಲೆ ಯಾವುದೇ ಪ್ರಕರಣಗಳು ಇಲ್ಲ ಎಂದು ಕ್ಲಿಯರೆನ್ಸ್ ನೀಡಿದ್ದರು. ನಂತರ ಅವರಿಗೆ ಪಾಸ್‌ಪೋರ್ಟ್ ಕಚೇರಿಯಿಂದ ಪಾಸ್‌ಪೋರ್ಟ್ ನೀಡಲಾಗಿತ್ತು. ಈ ಕುರಿತು ಆಕ್ಷೇಪ ವ್ಯಕ್ತವಾದ ನಂತರ, ಪೊಲೀಸರು ಪಾಸ್‌ಪೋರ್ಟ್ ಸೇವಾ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ.
ಅರ್ಜಿದಾರರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾದ ಮಾಹಿತಿ ಕುರಿತು ಅಪ್‌ಡೇಟ್ ಆಗಿರಲಿಲ್ಲ. ಹಾಗಾಗಿ ನಿರಕ್ಷೇಪಣ ಪತ್ರ ನೀಡುವಾಗ ಕ್ರಿಮಿನಲ್ ಕೇಸ್‌ನ ಮಾಹಿತಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದು, ನಂತರ ಕ್ರಿಮಿನಲ್ ಪ್ರಕರಣ ಇರುವ ಕುರಿತು ಮಾಹಿತಿ ಲಭ್ಯವಾಗಿದೆ, ಈ ಕುರಿತು ಪಾಸ್‌ಪೋರ್ಟ್ ಸೇವಾ ಕೇಂದ್ರಕ್ಕೆ ದಾಖಲೆ ಸಹಿತ ಮಾಹಿತಿ ನೀಡಲಾಗಿರುವ ಕುರಿತು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
DAKSHINA KANNADA
ಮಂಗಳೂರು: ಮೊಬೈಲ್ ಟವರ್, ಉಪಕರಣಗಳ ಕಳವು
ಮಂಗಳೂರು: ಮೊಬೈಲ್ ಟವರ್ ಅನ್ನು ಉಪಕರಣಗಳ ಸಹಿತ ಕಳವು ಮಾಡಿರುವ ಘಟನೆ ಮಂಗಳೂರು ತಾಲೂಕು ತಿರುವೈಲು ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಮುಂಬಯಿಯ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಜಿ.ಟಿ.ಎಲ್. ಇನ್‌ಫ್ರಾಸ್ಟ್ರಕ್ಚರ್ ಕಂಪೆನಿ ಲಿ.ನವರು ಮೊಬೈಲ್ ಟವರ್ ನಿರ್ಮಾಣ ಮಾಡಿದ್ದರು.
ಇತ್ತೀಚೆಗೆ ಟವರ್‌ನ ನಿರ್ವಹಣೆಯ ಉಸ್ತುವಾರಿ ವಹಿಸಿದ್ದ ಟೆಕ್ನೀಷಿಯನ್ ಪರಿಶೀಲನೆಗಾಗಿ ಸ್ಥಳಕ್ಕೆ ಭೇಟಿ ನೀಡಿದಾಗ ಮೊಬೈಲ್ ಟವರ್ ಮತ್ತು ಟವರ್‌ನ ಉಪಕರಣಗಳು ಸೇರಿದಂತೆ ಒಟ್ಟು ಸುಮಾರು 19 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ತನಿಖೆ ನಡೆಯುತ್ತಿದೆ.
DAKSHINA KANNADA
ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಸಂಚಾರಕ್ಕೆ ಅಡ್ಡಿ
ನೆಲ್ಯಾಡಿ: ಗ್ಯಾಸ್ ಟ್ಯಾಂಕರ್‌ವೊಂದು ರಸ್ತೆಗೆ ಅಡ್ಡವಾಗಿ ಪಲ್ಟಿಯಾದ ಘಟನೆ ಅ.29ರಂದು ರಾತ್ರಿ 9.30ರ ವೇಳೆಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ.
ಈ ಭೀಕದ ದರಂತದಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.
ಇದನ್ನೂ ಓದಿ : ಮಗ ಸಾ*ವನ್ನಪ್ಪಿದ್ದು ಗೊತ್ತಾಗದೇ 4 ದಿನಗಳ ಕಾಲ ಶವದೊಂದಿಗೆ ಕಳೆದ ಅಂಧ ದಂಪತಿ
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಗ್ಯಾಸ್ ಟ್ಯಾಂಕರ್ ನೀರಕಟ್ಟೆಯಲ್ಲಿ ಪಲ್ಟಿಯಾಗಿ ರಸ್ತೆಗೆ ಅಡ್ಡವಾಗಿ ಬಿದ್ದಿದೆ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ ಉಂಟಾಗಿದೆ ಎಂದು ವರದಿಯಾಗಿದೆ.
DAKSHINA KANNADA
ಸುಳ್ಯ: ರೋಗಿಯನ್ನು ಕರೆದೊಯ್ಯಲು 108 ಆ್ಯಂಬುಲೆನ್ಸ್ ನಿರಾಕರಣೆ
ಸುಳ್ಯ: ಸಾರ್ವಜನಿಕ ಆಸ್ಪತ್ರೆಯಲ್ಲಿ 108 ತುರ್ತು ಆ್ಯಂಬುಲೆನ್ಸ್ ವಾಹನವನ್ನು ಆಸ್ಪತ್ರೆಯ ಶೆಡ್‌ನಲ್ಲಿ ನಿಲುಗಡೆ ಮಾಡದಂತೆ ಸೂಚಿಸಿದ ಬಳಿಕ ಆರಂಭಗೊಂಡ ಗೊಂದಲ ಈಗ ಮತ್ತಷ್ಟು ತೀವ್ರತೆ ಪಡೆದುಕೊಂಡಿದೆ.
ಇದೇ ಕಾರಣ ಮುಂದಿಟ್ಟು 108 ಆ್ಯಂಬುಲೆನ್ಸ್, ಸೋಮವಾರ ರೋಗಿಯೋರ್ವರನ್ನು ಮಂಗಳೂರಿಗೆ ರವಾನಿಸಲು ನಿರಾಕರಿಸಲಾದ ಆರೋಪ ಕೇಳಿ ಬಂದಿದೆ.
ಸುಳ್ಯ ಆಸ್ಪತ್ರೆಗೆ ಹೆಚ್ಚುವರಿ ಹೊಸ ಆ್ಯಂಬುಲೆನ್ಸ್ ಬಂದ ಕಾರಣ ಅದರ ನಿಲುಗಡೆಗೆ ಆಸ್ಪತ್ರೆಯ ಶೆಡ್‌ನಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇದರಿಂದ 108 ಆ್ಯಂಬುಲೆನ್ಸ್ ವಾಹನಕ್ಕೆ ನಿಲುಗಡೆಗೆ ಜಾಗದ ಕೊರತೆ ಉಂಟಾಗಿ ರಸ್ತೆ ಬದಿಯಲ್ಲೂ ನಿಲ್ಲಿಸಲಾಗಿತ್ತು. ಬಳಿಕ ಆಸ್ಪತ್ರೆಯ ಕ್ಯಾಂಟೀನ್ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. 108 ಆ್ಯಂಬುಲೆನ್ಸ್‌ಗೆ ನಿಲುಗಡೆಗೆ ಸೂಕ್ತ ವ್ಯವಸ್ಥೆ, ತಮಗೆ ವಿಶ್ರಾಂತಿಗೆ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಸಿಬಂದಿ ವರ್ಗವು ಸಂಬಂಧಿಸಿದವರಿಗೆ ಮನವಿ ಸಲ್ಲಿಸಿತ್ತು.
ಈ ನಡುವೆ ಸೋಮವಾರ ಬೆಳಗ್ಗೆ ಸುಳ್ಯ ಆಸ್ಪತ್ರೆಯಿಂದ ಮಂಗಳೂರಿಗೆ ರೋಗಿಯೋರ್ವರನ್ನು ಕರೆದೊಯ್ಯಲು 108 ಆ್ಯಂಬುಲೆನ್ಸ್ ಗೆ ಕರೆ ಮಾಡಿದಾಗ, ಅದರ ಪ್ರಧಾನ ಕಚೇರಿಯಿಂದಲೇ ಸುಳ್ಯದ 108 ಆ್ಯಂಬುಲೆನ್ಸ್ ಒದಗಿಸಲು ನಿರಾಕರಿಸಲಾಗಿದೆ. ಇದರಿಂದ ಆಸ್ಪತ್ರೆಯ ಇನ್ನೊಂದು ಆ್ಯಂಬುಲೆನ್ಸ್‌ನಲ್ಲಿ ರೋಗಿಯನ್ನು ಮಂಗಳೂರಿಗೆ ಕೊಂಡೊಯ್ಯಲಾಯಿತು. ಪ್ರಕರಣ ತೀವ್ರತೆಯನ್ನು ಪಡೆಯುತ್ತಿದ್ದಂತೆ ಸಮಸ್ಯೆಯನ್ನು ಪರಿಹರಿಸುವಂತೆ ಪ್ರಮುಖರು ಸಂಬಂಧಿಸಿದವರಿಗೆ ಮನವಿ ಸಲ್ಲಿಸಿದ್ದಾರೆ. ಒಂದು ಹಂತದಲ್ಲಿ ಸಮಸ್ಯೆಯನ್ನು ಬಗೆಹರಿಸಲು ಮೇಲಿನಿಂದ ಆಸ್ಪತ್ರೆಗೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
- BIG BOSS3 days ago
BBK 11 : ಸೃಜನ್ ಲೊಕೇಶ್ ಜೊತೆ ಬಂದ ಹೊಸ ಕಾರಲ್ಲಿ ಹೊರ ಹೊಗೋದು ಯಾರು ಗೊತ್ತಾ ??
- BIG BOSS6 days ago
ಕಲರ್ಸ್ ಶೋಗೆ ಮರಳಿದ ಲಾಯರ್ ಜಗದೀಶ್; ಫ್ಯಾನ್ಸ್ಗೆ ಗುಡ್ ನ್ಯೂಸ್
- FILM6 days ago
ತುಳು ಚಿತ್ರರಂಗಕ್ಕೆ ಕಾಲಿಟ್ಟ ಗಣೇಶ್ ಪತ್ನಿ ಶಿಲ್ಪಾ ಗಣೇಶ್
- LATEST NEWS2 days ago
ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ ʼಡಿಜಿಟಲ್ ಕಾಂಡೋಮ್ʼ !! ಬಳಕೆ ಹೇಗೆ ?