Connect with us

DAKSHINA KANNADA

ಮಂಗಳೂರು ಆಟೋ ಬಾಂಬ್ ಸ್ಫೋಟ ಪ್ರಕರಣ-ಮೈಸೂರಿನ ಬಾಡಿಗೆ ಮನೆಯಲ್ಲಿ ಸ್ಫೋಟಕ ಸಾಮಗ್ರಿ ವಶ: ADGP

Published

on

ಮಂಗಳೂರು: ಮಂಗಳೂರಿನ ನಾಗುರಿಯಲ್ಲಿ ಕಂಕನಾಡಿ ನಗರ ಪೊಲೀಸ್‌ ಠಾಣೆಯ ಮುಂಭಾಗದಲ್ಲಿ ಶನಿವಾರ ಸಂಜೆ ರಿಕ್ಷಾ ಪ್ರಯಾಣಿಕನ ಚೀಲದಲ್ಲಿದ್ದ ವಸ್ತು ಸ್ಫೋಟಗೊಂಡ ಪ್ರಕರಣದಲ್ಲಿ ಶೇಕಡಾ 45 ರಷ್ಟು ಸುಟ್ಟ ಗಾಯಗೊಂಡಿದ್ದ ಪ್ರಯಾಣಿಕ ಶಿವಮೊಗ್ಗ ಜಿಲ್ಲೆಯ ಮೊಹಮ್ಮದ್‌ ಶಾರೀಕ್‌ (24) ಎಂಬುದಾಗಿ ಗುರುತಿಸಲಾಗಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ದೃಢ ಪಡಿಸಿದ್ದಾರೆ.


ಇಂದು ಗಾಯಾಳು ವ್ಯಕ್ತಿಯ ಸಂಬಂಧಿಕರು ಬಂದು ಆತನ ಗುರುತು ಪತ್ತೆ ಹಚ್ಚಿದ್ದಾರೆ. ಅರೋಪಿ ಮೊಹಮ್ಮದ್‌ ಶಾರೀಕ್‌ನ ಮೇಲೆ ಮಂಗಳೂರಿನಲ್ಲಿ ಈ ಹಿಂದೆ ನಡೆದ ಉಗ್ರರನ್ನು ಬೆಂಬಲಿಸಿದ ಗೋಡೆ ಬರಹ ಪ್ರಕರಣ ಕುರಿತಂತೆ ಮಂಗಳೂರಿನ ಕದ್ರಿ ಮತ್ತು ಬಂದರು ಪೊಲೀಸ್‌ ಠಾಣೆಗಳಲ್ಲಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ಸಂಬಂಧಿತ ಪ್ರಕರಣ ದಾಖಲಾಗಿರುತ್ತದೆ ಎಂದು ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಶಿವಮೊಗ್ಗದಲ್ಲಿ ಕಳೆದ ಸಪ್ಟೆಂಬರ್‌ 19 ರಂದು ನಡೆದ ಪ್ರಕರಣದಲ್ಲಿ ಈತ 1 ನೇ ಆರೋಪಿಯಾಗಿದ್ದು, ಪ್ರಕರಣದ ಬಳಿಕ ತಲೆಮರೆಸಿಕೊಂಡು ಮೈಸೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿದ್ದನು.

ಇದೇ ನವೆಂಬರ್‌ 19 ರಂದು ಮೈಸೂರಿನಿಂದ ಬಸ್ಸಿನಲ್ಲಿ ಹೊರಟು ಹುಣಸೂರು, ಮಡಿಕೇರಿ, ಪುತ್ತೂರು, ಬಿಸಿ ರೋಡ್‌ ಮೂಲಕ ಮಂಗಳೂರು ಹೊರ ವಲಯದಲ್ಲಿ ಬಸ್ಸಿನಿಂದ ಇಳಿದು ಬಳಿಕ ನಾಗುರಿಯಿಂದ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿತ್ತು.

ಆರೋಪಿ ಮೈಸೂರಿನಲ್ಲಿ ವಾಸವಿದ್ದ ಬಾಡಿಗೆ ಮನೆಯಿಂದ ಸಲ್ಫೆಕ್ಸ್ ಸಲ್ಫರ್‌ ಪೌಡರ್‌, ನಟ್‌, ಬೋಲ್ಟ್‌, ಸರ್ಕ್ಯೂಟ್‌ ಗಳು, ಮಲ್ಟಿ ಫಂಕ್ಷನ್‌ ಡಿಲೆ ಟೈಮರ್‌, ಗ್ರೈಂಡರ್‌, ಮಿಕ್ಸರ್‌, ಬೆಂಕಿ ಪೆಟ್ಟಿಗೆ, ಬ್ಯಾಟರಿ, ಮೆಕ್ಯಾನಿಕಲ್‌ ಟೈಮರ್‌, ಆಧಾರ್‌ ಕಾರ್ಡ್‌ ಮತ್ತಿತರ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದರು.

 

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending