Sunday, November 27, 2022

ಮಂಗಳೂರು ಆಟೋ ಬಾಂಬ್ ಸ್ಫೋಟ ಪ್ರಕರಣದ ತನಿಖೆ NIA : ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು : ಮಂಗಳೂರಿನ ಕಂಕನಾಡಿ ಕಪಿತಾನಿಯೋ ಬಳಿ ಆಟೋದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು  ಕೇಂದ್ರ ತನಿಖಾ ಸಂಸ್ಥೆNIA ಗೆ ವರ್ಗಾಯಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಈ ಸಂಬಂಧ ಆದೇಶ ಹೊರಡಿಸಿದೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ‘ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ, ಸಂಗ್ರಹಿಸಲಾದ, ಎಲ್ಲ ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ, ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡಿದೆ’ ಎಂದು ಹೇಳಿದ್ದಾರೆ.

‘ಕಾನೂನುಬಾಹಿರ ಚಟುವಟಿಕೆ ತಡೆ(ಯುಎಪಿಎ) ಕಾಯಿದೆ ಅನ್ವಯ ತನಿಖೆಯನ್ನು ನಡೆಸಲು, ರಾಜ್ಯ ಸರಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ’ ಎಂದು ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಆಟೋರಿಕ್ಷಾದಲ್ಲಿ ಪ್ರಯಾಣಿಕನೋರ್ವ ತೆರಳುತ್ತಿದ್ದ ವೇಳೆ ಏಕಾಏಕಿ ಕುಕ್ಕರ್ ಸ್ಫೋಟಗೊಂಡು ಚಾಲಕ ಹಾಗೂ ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿದ್ದರು.

ಈ ಪ್ರಕರಣದಲ್ಲಿ ಶಂಕಿತ ಆರೋಪಿ ಶಾರೀಕ್ ಹಾಗೂ ರಿಕ್ಷಾ ಚಾಲಕ ಪುರುಷೋತ್ತಮ್ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...