Monday, July 4, 2022

ಕಡಲ ನಗರಿ ಮಂಗಳೂರಿಗೆ ಆಗಮಿಸಿದ ಸಿಎಂ: ಶಿರಾ, ಚುನಾವಣೆ ಬಳಿಕ ಕಾಂಗ್ರೆಸ್‌ ಮೂಲೆಗುಂಪು ಎಂದ ಬಿಎಸ್‌ವೈ..! 

ಕಡಲ ನಗರಿ ಮಂಗಳೂರಿಗೆ ಆಗಮಿಸಿದ ಸಿಎಂ: ಶಿರಾ, ಚುನಾವಣೆ ಬಳಿಕ ಕಾಂಗ್ರೆಸ್‌ ಮೂಲೆಗುಂಪು ಎಂದ ಬಿಎಸ್‌ವೈ..! 

ಮಂಗಳೂರು: ವಿಪಕ್ಷ ನಾಯಕ ಸ್ಥಾನ ಹುದ್ದೆಯಿಂದ ಸಿದ್ದರಾಮಯ್ಯ ಬದಲಾವಣೆ ಆಗುತ್ತಾರೆ ಎಂಬ ಮಾಹಿತಿ ದೆಹಲಿಯಿಂದ ನಮಗೂ ಬಂದಿದೆ ಎಂದು ಕಾಂಗ್ರೆಸ್ ಮುಖಂಡ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಿಎಂ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.   

ಮಂಗಳೂರಿನಲ್ಲಿ ನಾಳೆ ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಉಪಚುನಾವಣೆಯ ನಂತರ ಯಡಿಯೂರಪ್ಪ ಬದಲಾಗುತ್ತಾರೆ ಎಂದು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯನವರನ್ನು ಕಟುವಾಗಿ ಕುಟುಕಿದ ಸಿಎಂ ಅವರು ಸಿದ್ದರಾಮಯ್ಯನವರ ಹೇಳಿಕೆಗೆ ನಾನು ರಿಯಾಕ್ಷನ್ ನೀಡುತ್ತಿರಲಿಲ್ಲ.

ಮಾಧ್ಯಮದವರು ಪ್ರಶ್ನಿಸಿದ್ದಕ್ಕಾಗಿ ಪ್ರತಿಕ್ರಿಯಿಸುತ್ತಿದ್ದೇನೆ. ಅವರು ದಿಲ್ಲಿಯಿಂದ ನನಗೆ ಸುದ್ದಿ ಬಂದಿದೆ ಎನ್ನುತ್ತಿದ್ದಾರೆ. ನಾನು ಇದೇ ರೀತಿ ಹೇಳಿಕೆ ನೀಡಲೇ? ನಮಗೂ ದೆಹಲಿಯಿಂದ ಮಾಹಿತಿ ಬಂದಿದೆ.

ವಿಪಕ್ಷ ನಾಯಕ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಆಗುತ್ತೆ ಎಂದು, ಈ ರೀತಿಯ ಹಗುರವಾದ ಹೇಳಿಕೆಯನ್ನು ನಾನು ಇಷ್ಟಪಡಲ್ಲ. ಜವಾಬ್ದಾರಿಯುತವಾಗಿ ಮಾತಾಡುವಂತೆ ವಿನಂತಿ ಮಾತಾಡುತ್ತೇನೆ.

ಶಿರಾ, ಆರ್.ಆರ್ ನಗರ ಉಪಚುನಾವಣೆಯನ್ನು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಎದುರಿಸಿದೆ. ನೂರಕ್ಕೆ ನೂರು ದಯಾನೀಯ ಸೋಲನ್ನು ಕಾಂಗ್ರೆಸ್ಸಿನವರು ಅನುಭವಿಸುತ್ತಾರೆ.

ಬೈ ಎಲೆಕ್ಷನ್, ಪದವೀಧರ ಚುನಾವಣೆಯಲ್ಲಿ ಸೋಲನ್ನು ಅಭವಿಸುತ್ತಾರೆ. ಬಿಜೆಪಿ ಗೆದ್ದ ಮೇಲೆ ಯಾರು ರಾಜೀನಾಮೆ ಕೊಡಬೇಕಾಗುತ್ತೆ? ಆಗ ಕ್ರಮ ಸಿದ್ದರಾಮಯ್ಯ ಮೇಲೋ ಅಥವಾ ಯಾರ ಮೇಲೆ ಎಂದು ಯಡಿಯೂರಪ್ಪ ಪ್ರಶ್ನೆ ಮಾಡಿದರು.

LEAVE A REPLY

Please enter your comment!
Please enter your name here

Hot Topics

ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಲ್ಲಿದ್ದ ಡೆಡ್‌ ಬಾಡಿ ಎರಡು ದಿನಗಳ ಬಳಿಕ ಪತ್ತೆ

ಉಡುಪಿ: ಎರಡು ದಿನಗಳ ಹಿಂದೆ ಮರವಂತೆ ಸಮುದ್ರಕ್ಕೆ ಬಿದ್ದ ಕಾರಿನಿಂದ ನಾಪತ್ತೆಯಾದ ಓರ್ವನ ಶವ ಇಂದು ಬೈಂದೂರಿನ ಕಂಚುಗೋಡು ಎಂಬಲ್ಲಿ ಪತ್ತೆಯಾಗಿದೆ.ಮೃತನನ್ನು ರೋಶನ್ ಆಚಾರ್ಯ ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ...

ಪೌರಕಾರ್ಮಿಕರ ಬೆಂಬಲಕ್ಕೆ ನಿಂತ ವಿರೋಧ ಪಕ್ಷದ ಉಪನಾಯಕ ಖಾದರ್

ಮಂಗಳೂರು: ರಾಜ್ಯದಾದ್ಯಂತ ನಡೆಯುತ್ತಿರುವ ಪೌರ ಕಾರ್ಮಿಕರ ಮುಷ್ಕರ ನಾಳೆ ಐದನೇ ದಿನಕ್ಕೆ ಕಾಲಿರಿಸಲಿದೆ. ರಾಜ್ಯ ಘಟಕದ ಸೂಚನೆಯನ್ವಯ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರತಿಭಟನೆ ಮುಂದುವರಿದಿದೆ.ಸ್ವಚ್ಛತಾ ಕೆಲಸವನ್ನು ಸಂಪೂರ್ಣ ಸ್ಥಗಿತಗೊಳಿಸಿ ಪೌರ ಕಾರ್ಮಿಕರು ಮಂಗಳೂರಿನಲ್ಲಿ...

ಪುತ್ತೂರಿನಲ್ಲಿ ಬೈಕ್‌ – ಕಾರು ಡಿಕ್ಕಿ: ಓರ್ವ ಜೀವಾಂತ್ಯ

ಪುತ್ತೂರು: ಬೈಕ್ ಮತ್ತು ಮಾರುತಿ ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹೊರ ವಲಯದ ಕುಂಬ್ರದಲ್ಲಿ ನಡೆದಿದೆ.ಕು೦ಬ್ರ...