Connect with us

    DAKSHINA KANNADA

    ಮಂಗಳೂರು: ಕಾಂಗ್ರೆಸ್ ಬೆಂಬಲಕ್ಕೆ ನಿಂತ ಹಿಂದುಳಿದ ವರ್ಗ- ವಿಶ್ವಾಸ್‌ ಕುಮಾರ್ ದಾಸ್

    Published

    on

    ಪ್ರಸ್ತುತ ಚುನಾವಣೆಯ ಈ ಸಂದರ್ಭದಲ್ಲಿ ಎಲ್ಲಾ ಹಿಂದುಳಿದ ವರ್ಗದ ಸಮಾಜದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಒಂದು ಸನ್ನಿವೇಶ ಎಲ್ಲೆಡೆ ಕಂಡು ಬರುತ್ತಿದೆ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್‌ ಹೇಳಿದ್ದಾರೆ.

    ಮಂಗಳೂರು: ಪ್ರಸ್ತುತ ಚುನಾವಣೆಯ ಈ ಸಂದರ್ಭದಲ್ಲಿ ಎಲ್ಲಾ ಹಿಂದುಳಿದ ವರ್ಗದ ಸಮಾಜದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಒಂದು ಸನ್ನಿವೇಶ ಎಲ್ಲೆಡೆ ಕಂಡು ಬರುತ್ತಿದೆ ದಕ್ಷಿಣ ಕನ್ನಡ ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್‌ ಹೇಳಿದ್ದಾರೆ.

    ಸುದ್ದಿಗಾರರ ಜೊತೆ ಮಾತನಾಡಿದ ಅವರು ಬಿಜೆಪಿ ಸರಕಾರದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಆದ ಅವಮಾನವನ್ನು ಮತದಾರರು ಮರೆಯಲಾರರು.

    ಹಿಂದುಳಿದ ವರ್ಗದ ಪ್ರದೇಶಕ್ಕೆ ನಾವು ಮತಯಾಚನೆಗೆ ಹೋದ ವೇಳೆ ಬಿಜೆಪಿ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

    ಬೆಲೆ ಏರಿಕೆ, ಸರಕಾರದ ಕಮಿಷನ್‌ ದಂಧೆ ನೋಡಿ ಜನ ಬೇಸತ್ತು ಹೋಗಿದ್ದು, ಕಾಂಗ್ರೆಸ್ ಪಕ್ಷ ಪರ ಒಲವು ತೋರಿಸುತ್ತಿದ್ದಾರೆ.

    ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಬಿಜೆಪಿ ಮೇಲೆ ತೀವ್ರ ಆಕ್ರೋಶ ಭರಿತರಾಗಿದ್ದಾರೆ.

    ಗಣರಾಜ್ಯೋತ್ಸವ ಸಂದರ್ಭದಲ್ಲಿ ಪರೇಡ್‌ನಲ್ಲಿ ಅದಕ್ಕೆ ಅವಕಾಶ ನೀಡದೇ ನಾರಾಯಣ ಗುರುಗಳಿಗೆ ಅವಮಾನ ಮಾಡಿದ್ದಾರೆ.

    ಇದಲ್ಲದೇ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರಧಾರೆ ಪಠ್ಯಪುಸ್ತಕದಿಂದಲೂ ಕೈ ಬಿಟ್ಟಿದ್ದಾರೆ. ಆದರೆ ಯಾವುದೇ ರೀತಿಯ ಗೌರವ ಕೊಡುವ ಕೆಲಸವನ್ನು ಸ್ಥಳೀಯ ಶಾಸಕ ವೇದವ್ಯಾಸ ಮಾಡಿಲ್ಲ.

    ಇದು ಬ್ರಹ್ಮಶ್ರೀ ನಾರಾಯಣ ಗುರು ಅನುಯಾಯಿಗಳಿಗೆ ನೋವನ್ನುಂಟು ಮಾಡಿದೆ ಎಂದರು.

    ಮಂಗಳೂರು ವಿವಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ವಿದ್ಯಾಪೀಠ ಸ್ಥಾಪನೆ ಮಾಡಿದ್ದು ಕಾಂಗ್ರೆಸ್ ಪಕ್ಷ. ಆದರೆ ಬಿಜೆಪಿ ಜನರಿಗೆ ಮೋಸ ಮಾಡಲು ನಿಗಮ ಸ್ಥಾಪನೆ ಮಾಡಿದ್ದಾರೆ.

    ಆದರೆ ಏನೂ ಅನುದಾನ ಘೋಷಣೆ ಮಾಡಿಲ್ಲ. ಕರಾವಳಿಯ ಮೀನುಗಾರರಿಗೆ ಸಬ್ಸಿಡಿ ಸೇರಿದಂತೆ ಯಾವುದೇ ಸವಲತ್ತು ನೀಡಿಲ್ಲ. ಮಂಗಳೂರಿನ ಏರ್ಪೋರ್ಟ್‌ ಅದಾನಿಗೆ ಕೊಟ್ಟಿದ್ದಾರೆ.

    ಬ್ಯಾಂಕುಗಳ ಖಾಸಗೀಕರಣ ಹೀಗೆ ಎಲ್ಲಾ ವಿಚಾರಗಳಲ್ಲೂ ಹಿಂದುಳಿದ ವರ್ಗದವ ಜನತೆ ಬಿಜೆಪಿ ಸರಕಾರದಿಂದ ಬೇಸತ್ತು ಹೋಗಿದ್ದು, ಈ ಬಾರಿ ಕಾಂಗ್ರೆಸ್ಸನ್ನು ಬೆಂಬಲಿಸಲಿದ್ದಾರೆ ಎಂದರು.

    ಕಾರ್ಯಕರ್ತರಾದ ಚೇತನ್‌ ಬೆಂಗ್ರೆ, ಉದಯ ಆಚಾರ್‌, ರಮಾನಂದ ಪೂಜಾರಿ ಮೊದಲಾದವರಿದ್ದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಗಾಳಿಗೆ ಹಾರಿದ ಶಾಲೆಯ ಹೆಂಚು..! ರಜಾ ದಿನವಾದ ಕಾರಣ ತಪ್ಪಿದ ಅನಾಹುತ..!

    Published

    on

    ಮಂಗಳೂರು ( ಕಡಬ ) : ಕಡಬ ತಾಲೂಕಿನಲ್ಲಿ ಭಾನುವಾರ ಮದ್ಯಾಹ್ನ ಜೋರಾಗಿ ಬೀಸಿದ ಗಾಳಿಗೆ ಶಾಲೆಯೊಂದರ ಹೆಂಚುಗಳು ಹಾರಿ ಹೋದ ಘಟನೆ ನಡೆದಿದೆ. ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಜಾ ದಿನವಾದ ಕಾರಣ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.


    ಭಾನುವಾರ ಜೋರಾದ ಗಾಳಿಯ ಜೊತೆ ಮಳೆ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಮದ್ಯಾಹ್ನದ ವೇಳೆಗೆ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಜೋರಾದ ಗಾಳಿ ಬೀಸಿದೆ. ಇದರ ಪರಿಣಾಮವಾಗಿ ಬಲ್ಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಂಚುಗಳು ಹಾರಿ ಹೋಗಿದೆ. ಒಂದಷ್ಟು ಹೆಂಚುಗಳು ಶಾಲೆಯ ಹೊರಾಂಗಣದಲ್ಲಿ ಬಿದ್ದಿದ್ದರೆ, ಇನ್ನೂ ಕೆಲವು ಹೆಂಚುಗಳು ಶಾಲೆಯ ಕೊಠಡಿಯ ಒಳಗೆ ಬಿದ್ದಿದೆ. ಶಾಲೆಗೆ ಬಹುತೇಕ ಎಲ್ಲಾ ಕೊಠಡಿಯ ಹೆಂಚುಗಳು ಗಾಳಿಗೆ ಹಾರಿ ಹೋಗಿದೆ. ಅದೃಷ್ಟವಶಾತ್ ಭಾನುವಾರವಾದ ಕಾರಣ ಶಾಲೆಯಲ್ಲಿ ಮಕ್ಕಳು ಇರದ ಕಾರಣ ಯಾವುದೇ ಅನಾಹುತ ನಡೆದಿಲ್ಲ.


    ಬೀಸಿದ ಗಾಳಿಗೆ ಶಾಲೆಯ ಹೆಂಚಿನ ಜೊತೆಗೆ ಗ್ರಾಮದ ಕೃಷಿಕರ ಅಡಿಕೆ ತೋಟಕ್ಕೂ ಹಾನಿಯಾಗಿದೆ. ಹಲವು ಅಡಿಕೆ ಮರಗಳು ತುಂಡಾಗಿ ಬಿದ್ದಿದ್ದು, ಕೆಲವೆಡೆ ವಿದ್ಯುತ್ ತಂತಿಯ ಮೇಲೆ ಬಿದ್ದ ಕಾರಣ ವಿದ್ಯುತ್ ಕಂಬಕ್ಕೂ ಕೂಡಾ ಹಾನಿ ಸಂಭವಿಸಿದೆ.
    ಜುಲೈ 15 ಮತ್ತು 16 ರಂದು ಕೂಡಾ ಜೋರಾದ ಗಾಳಿಯ ಜೊತೆ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    Continue Reading

    DAKSHINA KANNADA

    ನಾಳೆ, ನಾಡಿದ್ದು ದ.ಕ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

    Published

    on

    ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಇಂದು, ನಾಳೆ ಮತ್ತು ನಾಡಿದ್ದು(ಜು.15,16,17) ಈ ಮೂರು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಿದೆ.

    ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಮಟ್ಟ ಹೆಚ್ಚಳ

    ಜುಲೈ 17 ರಿಂದ 19 ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ದಿನವಿಡೀ ಉತ್ತಮ ಮಳೆ ಬಂದಿದೆ. ಮಳೆಯ ಜತೆಗೆ ಬಲವಾದ ಗಾಳಿಯೂ ಬೀಸುತ್ತಿದೆ. ಸಮುದ್ರದಲ್ಲಿ ಅಬ್ಬರದ ಅಲೆಗಳು ಕಂಡು ಬರುತ್ತಿವೆ. ಗಾಳಿಯ ರಭಸಕ್ಕೆ ಅಲ್ಲಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ, ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇಂದು ಬೆಳಗ್ಗೆ ಬೀಸಿದ ಬಲವಾದ ಗಾಳಿಗೆ ಉಳ್ಳಾಲ ತಾಲೂಕಿನ ಕೋಟೆಕಾರು ಬಳಿ ಬೀರಿ- ಪ್ರವಾಸಿ ಬಂಗ್ಲೆ ಕ್ರಾಸ್‌ ಸರ್ವೀಸ್‌ ರಸ್ತೆಯಲ್ಲಿ ಭಾರೀ ಗಾತ್ರದ ಮೇ ಫ್ಲವರ್‌ ಮರವೊಂದು ಉರುಳಿ ಬಿದ್ದ ಘಟನೆ ಸಂಭವಿಸಿದೆ. ಇದರಿಂದಾಗಿ ಈ ರಸ್ತೆಯಲ್ಲಿ ಕೆಲವು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರಸ್ತೆ ಬದಿ ನಿಲ್ಲಿಸಿದ್ದ ಎರಡು ಲಾರಿಗಳ ಮಧ್ಯೆಮರ ಬಿದ್ದ ಕಾರಣ ಅಪಾಯ ತಪ್ಪಿದೆ. ಅಲ್ಲದೆ ಇಂದು ಭಾನುವಾರ ಆಗಿದ್ದ ಕಾರಣ ಈ ರಸ್ತೆಯಲ್ಲಿ ವಾಹನ ಮತ್ತು ಜನ ಸಂಚಾರ ಕಡಿಮೆ ಇತ್ತು.

    Continue Reading

    DAKSHINA KANNADA

    ಎಂಎಸ್‌ಇಝೆಡ್‌ ನಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ಭಾರಿ ಅ*ಗ್ನಿ ಅವಘಡ

    Published

    on

    ಮಂಗಳೂರು : ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ಭಾರಿ ಅ*ಗ್ನಿ ಅನಾಹುತ ಸಂಭವಿಸಿದೆ. ಹೊತ್ತಿ ಉರಿದ ಘಟಕದಲ್ಲಿ ಭಾರಿ ಪ್ರಮಾಣದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು ದಟ್ಟ ಹೊಗೆ ಆಕಾಶದೆತ್ತರಕ್ಕೆ ಏರಿದೆ. ಘಟನೆ ಸ್ಥಳೀಯ ಜನರ ಗಮನಕ್ಕೆ ಬಂದ ತಕ್ಷಣ ಸಮೀಪದ ಗ್ರಾಮದ ಜನರು ಆತಂಕಗೊಂಡಿದ್ದಾರೆ.


    ಎಂಎಸ್‌ಇಝೆಡ್‌ ವ್ಯಾಪ್ತಿಯಲ್ಲಿ ಅನೇಕ ಕೆಮಿಕಲ್ ಫ್ಯಾಕ್ಟರಿ, ಪೆಟ್ರೋಲಿಯಂ ಉತ್ಪನ್ನಗಳ ಫ್ಯಾಕ್ಟರಿ ಇರುವುದು ಈ ಆತಂಕಕ್ಕೆ ಕಾರಣವಾಗಿದೆ. ಫ್ಯಾಕ್ಟರಿಯಲ್ಲಿ ಬೆಂ*ಕಿ ಅವಘ*ಡ ಸಂಭವಿಸಿದ ತಕ್ಷಣ ಅಲರ್ಟ್ ಆದ ಅ*ಗ್ನಿಶಾಮಕ ತಂಡ ಬೆಂ*ಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದೆ.

    ಇದನ್ನೂ ಓದಿ :  ಜಗತ್ತಿನ ದೊಡ್ಡಣ್ಣನಲ್ಲಿ ಹ*ತ್ಯೆಯಾದ ಅಧ್ಯಕ್ಷರುಗಳು ಇವರು..!

    ಎಂಎಸ್ಇಝೆಡ್‌, ಎಂಆರ್‌ಪಿಎಲ್ ಹಾಗೂ ಜಿಎಂಪಿಎಲ್‌ನ ಅ*ಗ್ನಿ ಶಾಮಕ ವಾಹನಗಳು ಫ್ಯಾಕ್ಟರಿಯಲ್ಲಿನ ಬೆಂ*ಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಎಸ್‌ಇಝೆಡ್‌ ವ್ಯಾಪ್ತಿಯಲ್ಲಿ ಸಣ್ಣ ಪುಟ್ಟ ಅ*ಗ್ನಿ ಅವಘಡಗಳು ನಡಿತಾ ಇದ್ರೂ ಇದೊಂದು ಭಾರಿ ಅ*ಗ್ನಿ ಅವಘ*ಡವಾಗಿದೆ. ಆದ್ರೆ ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಅಥವಾ ಗಾಯಗಳು ಸಂಭವಿಸಿಲ್ಲ ಎಂದು ಮಾಹಿತಿ ಲಭ್ಯವಾಗಿದೆ.

    Continue Reading

    LATEST NEWS

    Trending