Connect with us

DAKSHINA KANNADA

ಮಂಗಳೂರು : ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡ್ತೀರಾ ಹುಷಾರ್..!

Published

on

ಮಂಗಳೂರು : ಸ್ಮಾರ್ಟ್ ಸಿಟಿಯಾಗಿ ರೂಪುಗೊಳ್ಳುತಿರುವ ಮಂಗಳೂರು ನಗರದಲ್ಲಿ ವಾಹನ ದಟ್ಟನೆ ಹೆಚ್ಚಾಗುತ್ತಿದ್ದು ಇದರಿಂದ ಪಾರ್ಕಿಂಗ್ ಸಮಸ್ಯೆಯನ್ನು ನಗರದಲ್ಲಿ ತಂದೊಡಿದೆ.  

ಇದರಿಂದ ನಗರಕ್ಕೆ ಕಾರ್ಯ ನಿಮಿತ್ತ ಆಗಮಿಸುವ ವಾಹನ ಸವಾರರು ಎಲ್ಲೆಂದಲ್ಲಿ ವಾಹನಗಳನ್ನು ಪಾರ್ಕ್ ಮಾಡುವ ಪರಿಪಾಠ ಹೆಚ್ಚಾಗುತ್ತಿದೆ.

ಇದಕ್ಕೆ ಅಂಕುಶ ಹಾಕಲು ಸಂಚಾರಿ ಪೊಲೀಸರು ಮುಂದಾಗಿದ್ದು ನಗರದ ಪ್ರಮುಖ ಸ್ಥಳಗಳಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮುಖ್ಯವಾಗಿ ಪಾದಚಾರಿಗಳು ನಡೆದಾಡಲು ಸಾಧ್ಯವಾಗದ ರೀತಿಯಲ್ಲಿ ದ್ವಿಚಕ್ರ ವಾಹನಗಳನ್ನು ಫುಟ್ ಪಾತ್‌ ಗಳಲ್ಲಿ ಪಾರ್ಕ್ ಮಾಡುತ್ತಿರುವ ಪ್ರವೃತ್ತಿಗೆ ಕಡಿವಾಣ ಹಾಕಲು ಇಲಾಖೆ ಮುಂದಾಗಿದೆ,

ಫುಡ್ ಡೆಲಿವರಿ ಹುಡುಗರ ವಾಹಣಗಳಿಂದ ಹೆಚ್ಚು ಫುಟ್ ಪಾತ್ ಆಕ್ರಮಣವಾಗುತ್ತಿದೆ ಎಂದು ಮಂಗಳೂರು ನಗರ ವಾಸಿ ರವಿಚಂದ್ರ ಆರೋಪಿಸಿದ್ದಾರೆ.

ನಗರದ ಕೆ ಎಸ್ ರಾವ್ ರಸ್ತೆ, ನವಭಾರತ್ ಸರ್ಕಲ್, ಬಲ್ಮಠ, ಎಂಜಿ ರಸ್ತೆ ಮತ್ತಿತರ ಕಡೆಗಳಲ್ಲಿ ಫುಟ್ ಪಾತ್ ಗಳನ್ನು ಅಕ್ರಮಿಸಿ ಪಾರ್ಕ್ ಮಾಡಿದ ದ್ವಿಚಕ್ರ ವಾಹನಗಳಿಗೆ ಲಾಕ್ ಹಾಕುವ ಕಾರ್ಯ ಪೊಲೀಸರು ಆರಂಭಿಸಿದ್ದಾರೆ.

ಲಾಕ್ ಆಗಿರುವ ವಾಹನಗಳನ್ನು ಬಿಡಿಸಲು ಪೊಲೀಸ್ ಇಲಾಖೆಗೆ ದುಬಾರಿ ದಂಡವನ್ನು ಪಾವತಿಸಬೇಕಾದ ಅನಿವಾರ್ಯತೆ ವಾಹನ ಚಾಲಕರಿಗೆ ಒದಗಿದ್ದು. ಈ ಕಾರ್ಯಾಚರಣೆ ನಗರಾದ್ಯಂತ ಮುಂದುವರೆಯಲಿದೆ ಎಂದು ಸಂಚಾರಿ ವಿಭಾಗದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2 Comments

2 Comments

  1. Anudeep

    25/10/2022 at 2:53 PM

    ಕೇವಲ ರೋಡ್ ಮಾಡೋದಲ್ಲ ಸರಿ ಪ್ಲಾನ್ ಮಾಡಿ … ಫುಟ್ ಪಾತ್, ಪಾರ್ಕಿಂಗ್ ವ್ಯವಸ್ಥೆ ಮಾಡಿದರೆ ಎಲ್ಲನೂ ಸರಿ ಆಗುತ್ತೆ

  2. vicky amin

    26/10/2022 at 10:48 AM

    ಸ್ಮಾರ್ಟ್ ಸಿಟಿ ಕಾಲಿ ಬಾಯಿ ಮಾತಿಗೆ ವಾಹನ ದಟ್ಟಣೆಗೆ ಮೊದಲು ಪ್ಲಾನ್ ಮಾಡಿ. ಕೆಲವ್ ಕಡೆ ತುಂಬಾ ಜಾಗವನ್ನು ಪಾದಚಾರಿಗೆ ಬಿಟ್ಟು ಕೊಟ್ಟಿದ್ದಾರೆ ಅಗತ್ಯವಿಲ್ಲದಷ್ಟು. ಪಾರ್ಕಿಂಗ್ ಮಾಡುವುದು ಹೇಗೆ.

Leave a Reply

Your email address will not be published. Required fields are marked *

BELTHANGADY

ಪಂಚಭೂತಗಳಲ್ಲಿ ಲೀನವಾದ ಜನ ಮೆಚ್ಚಿದ ನಾಯಕ…!

Published

on

ಮಂಗಳೂರು : ಮೇಲ್ನೋಟಕ್ಕೆ ಕೋಪಿಷ್ಟನಂತೆ ಕಂಡರೂ ಒಳಗಡೆ ಮಗುವಿನಂತಹ ಮನಸ್ಸು…ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾದ್ರೆ ಬಡವರ ಪಾಲಿಗೆ ಇವರು ಬಂಗಾರದ ವ್ಯಕ್ತಿ. ಇದ್ದಿದ್ದು ಇದ್ದ ಹಾಗೆ ಖಡಕ್ ಆಗಿ ಮಾತನಾಡೋ ಕಾರಣ ಸಾಕಷ್ಟು ಜನರ ವಿರೋಧಿಯಾದ್ರೂ, ಒಳಗೊಳಗೆ ಅವರಿಂದಲೇ ಪ್ರೀತಿಯನ್ನು ಕೂಡಾ ಪಡಿತಾ ಇದ್ದ ಜನಪ್ರೀಯ ಜನನಾಯಕ. ಜನರನ್ನು ತನ್ನವರೆಂದೇ ಒಬ್ಬ ಜನಪ್ರತಿನಿಧಿಯಾಗಿ ಜನರ ಸಂಕಷ್ಟಕ್ಕೆ ಸ್ಪಂದಿಸ್ತಾ ಇದ್ದ ವಸಂತ ಬಂಗೇರ ಇನ್ನು ನೆನಪು ಮಾತ್ರ…

ಸದಾ ತನ್ನ ಮಾತಿನ ಮೂಲಕವೇ ಸುದ್ದಿಯಾಗುತ್ತಿದ್ದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಶಾಶ್ವತವಾಗಿ ಮಾತು ಮುಗಿಸಿ ಇಹಲೋಕದ ಯಾತ್ರೆ ಮುಗಿಸಿದ್ದಾರೆ. ತನ್ನ ಕ್ಷೇತ್ರದ ಜನರ ಸೇವೆಗಾಗಿ ತನ್ನ ಜೀವನ ಮುಡಿಪಾಗಿಟ್ಟ ವಸಂತ ಬಂಗೇರ ನಿಜವಾಗಿಯೂ ಒಬ್ಬ ಜನನಾಯಕರಾಗಿದ್ದರು. ತನ್ನ ಬಳಿ ಕಷ್ಟ ಹೇಳಿಕೊಂಡು ಯಾರೇ ಬಂದ್ರೂ ಹಿಂದೂ ಮುಂದು ನೋಡದೆ ಸಹಾಯ ಮಾಡ್ತಾ ಇದ್ರು. ತನ್ನ ಕೈ ಖಾಲಿ ಮಾಡಿ ಮತ್ತೊಬ್ಬರಿಗೆ ಕೈ ಎತ್ತಿ ದಾನ ಮಾಡ್ತಾ ಇದ್ದ ವಸಂತ ಬಂಗೇರ ಇದೇ ಕಾರಣಕ್ಕೆ ಜನಾನುರಾಗಿಯಾಗಿದ್ದರು.


ಇದೀಗ ಅವರಿಲ್ಲಾ ಅನ್ನೋ ಸುದ್ದಿ ಅವರ ಅಭಿಮಾನಿಗಳನ್ನ ಕಣ್ಣೀರಿನ ಕಡಲಿನಲ್ಲಿ ಮುಳುಗಿಸಿದೆ. ಅವರ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುತ್ತಿದ್ದಂತೆ ಅವರ ಮನೆಗೆ ಅಭಿಮಾನಿಗಳ ದಂಡೇ ಹರಿದು ಬಂದಿದೆ. ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದ ತಾಲೂಕು ಕ್ರೀಡಾಂಗಣಕ್ಕೂ ಸಾವಿರಾರು ಅಭಿಮಾನಿಗಳು ಆಗಮಿಸಿ ಅವರಿಗೆ ಅಂತಿನ ನಮನ ಸಲ್ಲಿಸಿದ್ದಾರೆ. ನೇರವಾಗಿ ನಿಷ್ಠೂರವಾಗಿ ತಪ್ಪುಗಳನ್ನು ಖಂಡಿಸುತ್ತಿದ್ದ ತಮ್ಮ ಪರ ಧ್ವನಿಯಾಗಿದ್ದ ನಾಯಕ ಇನ್ನಿಲ್ಲ ಅನ್ನೋದನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾದ್ಯವಾಗಿಲ್ಲ. ಬಡವರಿಗೆ ಅನ್ಯಾಯ ಆಗ್ತಾ ಇದೆ ಅಂತ ಗೊತ್ತಾದ್ರೆ ಮುಲಾಜಿಲ್ಲದೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ತಾ ಇದ್ದ ವಸಂತ ಬಂಗೇರ ಅವರ ಆ ಸ್ಟೈಲ್‌ ಯಾವತ್ತೂ ಮರೆಯಲು ಸಾದ್ಯವಿಲ್ಲ.


ರಾಜ್ಯ ರಾಜಕಾರಣದಲ್ಲಿ ಸರಿಸುಮಾರು 40 ವರ್ಷಗಳ ಕಾಲ ಚಾಲ್ತಿಯಲ್ಲಿದ್ದ ಹೆಸರು ವಸಂತ ಬಂಗೇರ. ಬೆಳ್ತಂಗಡಿ ಕ್ಷೇತ್ರದಲ್ಲಿ ಮೂರು ಪಕ್ಷಗಳಿಂದ ಶಾಸಕರಾಗಿದ್ದ ವಸಂತ ಬಂಗೇರ ಕೊನೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಭದ್ರವಾಗಿ ನೆಲೆಯೂರಿದ್ದರು. ಬಿಜೆಪಿಯಿಂದ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದ ವಸಂತ ಬಂಗೇರ ಬಳಿಕ ನಡೆದ ರಾಜಕೀಯ ದ್ರುವೀಕರಣದಲ್ಲಿ ಜೆಡಿಎಸ್‌ ಮತ್ತು ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಜಾತ್ಯಾತೀತ ನಾಯಕನಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಒಡನಾಡಿಯಾಗಿ ರಾಜ್ಯದ ಅಪಾರ ರಾಜಕೀಯ ನಾಯಕರು ಮೆಚ್ಚಿಕೊಂಡಿದ್ದ ವ್ಯಕ್ತಿ ಇವರು. ವಿಪರ್ಯಾಸ ಅಂದ್ರೆ ರಾಜಕೀಯದ ಉತ್ತುಂಗಕ್ಕೆ ಏರಿದ್ರೂ ಸಚಿವರಾಗುವ ಅವಕಾಶ ವಸಂತ ಬಂಗೇರ ಅವರಿಗೆ ಸಿಗಲೇ ಇಲ್ಲ ಅನ್ನೋದು. 2013 ರಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದಲ್ಲಿ ಅಧಿಕಾರಕ್ಕೆ ಬಂದಿದ್ರೂ ವಸಂತ ಬಂಗೇರ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದ್ರೆ ಯಾವೊಬ್ಬ ಸಚಿವನಿಗೂ ಸಾದ್ಯವಾಗದ ಕೆಲಸವನ್ನು ಸಿಎಂ ಆಗಿದ್ದ ಸಿದ್ಧರಾಮಯ್ಯ ಮೂಲಕ ಮಾಡಿಸೋ ತಾಕತ್ತು ಇದ್ದಿದ್ದು ವಸಂತ ಬಂಗೇರ ಅವರಿಗೆ ಮಾತ್ರ ಅನ್ನೋದನ್ನ ಮರೆಯುವ ಹಾಗಿಲ್ಲ.


ಮನಸ್ಸಿನಲ್ಲಿ ಏನನ್ನೂ ಇಟ್ಟುಕೊಳ್ಳದೆ ಇದ್ದಿದ್ದು ಇದ್ದಹಾಗೇ ಹೇಳೋ … ಬಡವರು ಅಂದ್ರೆ ನನ್ನವರು ಎಂದು ಪ್ರೀತಿ ಮಾಡೋ ಜನ ನಾಯಕ ಇಂದು ಎಲ್ಲರ ಪ್ರೀತಿಗೆ ವಿದಾಯ ಹೇಳಿ ಮೌನವಾಗಿದ್ದಾರೆ. ” ನನ್ನನ್ನು ಆರಿಸಿದವರು ನೀವು .. ನೀವು ನನ್ನನ್ನು ಆಯ್ಕೆ ಮಾಡಿದ್ದಕ್ಕೆ ನಾನು ಮೋಸ ಮಾಡಿಲ್ಲ. ಹಣ ಮಾಡದೆ ಸ್ವಚ್ಚವಾಗಿ ಜನ ಸೇವೆ ಮಾಡಿದ ತೃಪ್ತಿ ಇದೆ” ಅಂತಲೇ ರಾಜಕೀಯಕ್ಕೆ ವಿದಾಯ ಹೇಳಿದ್ದ ವಸಂತ ಬಂಗೇರ ಇಂದು ಎಲ್ಲವನ್ನೂ ಬಿಟ್ಟು ತಮ್ಮ ಅಂತಿಮಯಾತ್ರೆ ಮುಗಿಸಿದ್ದಾರೆ.


ವಸಂತ ಬಂಗೇರ ಅವರ ಅಂತ್ಯಕ್ರೀಯೆ ಅವರ ಕುವೆಟ್ಟು ಕೇದೆ ಮನೆಯಲ್ಲಿ ನಡೆಸಲಾಗಿದೆ. ತಂದೆಯ ಚಿತೆಗೆ ಮಗಳು ಅಗ್ನಿ ಸ್ಪರ್ಷ ಮಾಡುವ ಮೂಲಕ ಅಂತಿಮ ವಿಧಿಯನ್ನು ಪೂರೈಸಿದ್ದಾರೆ. ಪಂಚಭೂತಗಳಲ್ಲಿ ಲೀನವಾಗಿರುವ ಮಾಜಿ ಶಾಸಕ ವಸಂತ ಬಂಗೇರ ಇನ್ನು ನೆನಪು ಮಾತ್ರ. ಆದ್ರೆ ವಸಂತ ಬಂಗೇರ ಅವರು ಅವರ ಅಭಿಮಾನಿಗಳ ಹೃದಯದಲ್ಲಿ ಎಂದಿಗೂ ಜನನಾಯಕರಾಗಿರುತ್ತಾರೆ.

ವಿಡಿಯೋ ನೋಡಿ : ವಸಂತ ಬಂಗೇರ ಅವರ ರಾಜಕೀಯ ಜೀವನ ಕುರಿತಾದ ಸ್ಟೋರಿ

Continue Reading

DAKSHINA KANNADA

ನಿವೃತ್ತ ಶಿಕ್ಷಕ ರಸ್ತೆ ದುರಂತದಲ್ಲಿ ಸಾ*ವು

Published

on

ಪುತ್ತೂರು : ನಿವೃತ್ತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80) ಅವರು ರಸ್ತೆ ಅಪಘಾತಕ್ಕೆ ಬ*ಲಿಯಾಗಿದ್ದಾರೆ. ಪುತ್ತೂರಿನ ಸಂಪ್ಯ ಎಂಬಲ್ಲಿ ಗುರುವಾರ ರಸ್ತೆ ದಾಟುತ್ತಿದ್ದ ವೇಳೆ ಸೂರ್ಯನಾರಾಯಣ ಕಾರಂತ ಅವರಿಗೆ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದಿತ್ತು.

ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಮತ್ತೊಂದು ರಿಕ್ಷಾದಲ್ಲಿ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ. ಸೂರ್ಯನಾರಾಯಣ ಕಾರಂತ ಅವರು ಗಣಿತ ಶಿಕ್ಷಕರಾಗಿ ಪ್ರಸಿದ್ಧರಾಗಿದ್ದರು.

ಇದನ್ನೂ ಓದಿ : ಕಣಗಿಲೆ ಹೂ ತಿಂದು ಇಹಲೋಕ ತ್ಯಜಿಸಿದ ಯುವತಿ!

Continue Reading

DAKSHINA KANNADA

ಅಯ್ಯೋ… ಟೀ ಕುಡಿದರೆ ಕಪ್ಪಗಾಗ್ತಾರಾ?

Published

on

ಮಂಗಳೂರು: ಸಾಮಾನ್ಯವಾಗಿ ಭಾರತ ದೇಶದಲ್ಲಿ ಜಾಸ್ತಿಯಾಗಿ ಟೀ ಕುಡಿಯುತ್ತಾರೆ. ಅದರಲ್ಲೂ ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಟೀ ಕುಡಿದರೆ ಇನ್ನು ಕೆಲವರು ತಿಂಡಿ ತಿನ್ನುವಾಗ ಟೀ ಕುಡಿಯುತ್ತಾರೆ. ಕೆಲವರಿಗೆ ಟೀ ಕುಡಿಯದೇ ಇದ್ದರೆ ತಲೆನೋವು ಶುರುವಾಗಿ ಬಿಡುತ್ತದೆ. ಆದರೆ ಈಗ ಟೀ ಅಲ್ಲೂ ಗ್ರೀನ್ ಟೀ, ಬ್ಲೂ ಟೀ, ಲೆಮನ್ ಟೀ ಹೀಗೆ ವೆರೈಟಿ ವೆರೈಟಿ ಟೀಗಳಿದೆ.
ಆದರೆ ಅನೇಕ ಕಡೆ ವಿಚಿತ್ರ ನಂಬಿಕೆ ಇದೆ. ಟೀ ಕುಡಿದ್ರೆ ಕಪ್ಪಾಗುತ್ತಾರೆ ಎನ್ನುವ ಒಂದು ಸಂಗತಿ. ಹೌದು, ಟೀ ಕುಡಿದರೆ ಕಪ್ಪಾಗುತ್ತೇವೆ ಎಂದು ಅನೇಕರು ಹೇಳುವುದನ್ನು ಕೇಳಿರುತ್ತೇವೆ. ಅಲ್ಲದೇ ಇದೇ ಕಾರಣಕ್ಕೆ ಅದೆಷ್ಟೋ ಜನರು ಟೀ ಅನ್ನು ಕುಡಿಯುವುದಿಲ್ಲ ಎಂದು ಹೇಳಬಹುದು. ಆದರೆ ನಿಜವಾಗಿಯೂ ಟೀ ಕುಡಿದರೆ ಕಪ್ಪಾಗುತ್ತಾರಾ? ಇದು ಸತ್ಯವೇ? ಇದೇ ಪ್ರಶ್ನೆಗೆ ಇಲ್ಲಿದೆ ನೋಡಿ ಸರಿಯಾದ ಉತ್ತರ.

ಕೆಲ ಆಹಾರ ಚರ್ಮದ ಮೇಲೆ ಪರಿಣಾಮ ಬೀರುತ್ತದೆ:

ಆನುವಂಶಿಕ ಅಂಶಗಳ ಹೊರತಾಗಿ, ಚರ್ಮದ ಬಣ್ಣವು ನೀವು ಸೂರ್ಯನಲ್ಲಿ ಎಷ್ಟು ಹೊತ್ತು ಇರುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ನಾವು ತಿನ್ನುವುದು ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ಕೆಲ ಆಹಾರವು ಚರ್ಮದ ಮೇಲೆಯೂ ಸಹ ಪರಿಣಾಮ ಬೀರುತ್ತದೆ. ಆದರೆ ನ್ಯಾಯೋಚಿತ ಬಣ್ಣವು ಅಂದರೆ ದೇಹದ ಹುಟ್ಟಿನ ಬಣ್ಣವು ಆಹಾರ ಸೇವನೆಯಿಂದ ಕಪ್ಪು ಬಣ್ಣಕ್ಕೆ ತಿರುಗುವುದಿಲ್ಲ ಎನ್ನಲಾಗುತ್ತದೆ. ಹಾಲಿನ ಟೀ ಕುಡಿಯುವುದರಿಂದ ಹೃದಯದ ಮೇಲೆ ಪರಿಣಾಮ ಬೀರುತ್ತದೆ.
ಕಡಿಮೆ ಸಕ್ಕರೆಯೊಂದಿಗೆ ಕಪ್ಪು ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಟೀ ಕುಡಿಯುವುದರಿಂದ ಚರ್ಮ ಕಪ್ಪಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಇದಕ್ಕೆ ವಿರುದ್ಧವಾಗಿ, ಚಹಾವು ಚರ್ಮಕ್ಕೆ ಪ್ರಯೋಜನಕಾರಿ ಎಂದು ಸಂಶೋಧನೆ ತೋರಿಸಿದೆ.

ಅತಿಯಾದರೆ ಅಮೃತವೂ ವಿಷ :

ಅತಿಯಾದರೆ ಅಮೃತವೂ ವಿಷ ಎಂಬ ಮಾತಿದೆ. ಅದರಂತೆ ಟೀ ಅಥವಾ ಚಹಾ ಸೇವನೆ ಸಹ ಅತಿಯಾದರೆ ಅದೂ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮಬೀರುತ್ತದೆ. ಬಿಸಿ ಮಾಡಿದ್ದ ಟೀ ತಣ್ಣಗಾದ ಬಳಿಕ ಅದನ್ನು ಕುಡಿಯುವುದರಿಂದ ದೇಹಕ್ಕೆ ಹಾನಿಯುಂಟಾಗುತ್ತದೆ. ಮೂರ್ನಾಲ್ಕು ಗಂಟೆಗಳಿಗೂ ಮುನ್ನ ಬಿಸಿ ಮಾಡಿದ ಚಹಾವನ್ನು ಕುಡಿದರೆ, ನಿಮಗೆ ಗೊತ್ತಿಲ್ಲದ ರೀತಿ ಇದು ನಿಮ್ಮ ದೇಹದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಚಹಾವನ್ನು ಪದೇ ಪದೇ ಬಿಸಿ ಮಾಡಬಾರದು:

ಚಹಾವನ್ನು ಪದೇ-ಪದೇ ಬಿಸಿ ಮಾಡುವುದರಿಂದ ಅದರಲ್ಲಿರುವ ಎಲ್ಲಾ ಪೋಷಕಾಂಶಗಳು ಹೋಗುತ್ತವೆ. ಕೋಲ್ಡ್ ಟೀ ಬ್ಯಾಕ್ಟೀರಿಯಾವನ್ನು ಸೃಷ್ಟಿಸುತ್ತದೆ. ನೀವು ಚಹಾವನ್ನು ಎಷ್ಟು ಸಮಯ ಬೆಚ್ಚಗಾಗಿಸುತ್ತೀರೋ ಅಷ್ಟು ಹೆಚ್ಚು ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ. ಇದು ದೇಹಕ್ಕೆ ತುಂಬಾ ಹಾನಿಕಾರಕವಾಗಿದೆ.

Continue Reading

LATEST NEWS

Trending