Connect with us

LATEST NEWS

Mangalore: ಕರ್ನಾಟಕ ಕಂಡ ಶ್ರೇಷ್ಠ ಬಜೆಟ್ : ಮಾಜಿ ಸಚಿವ ರಮನಾಥ ರೈ

Published

on

ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್ ಗಳ ಪೈಕಿ ಶ್ರೇಷ್ಠ ಬಜೆಟ್ ಎಂದು ಮಾಜಿ ಸಚಿವ ರಮನಾಥ ರೈ ವ್ಯಕ್ತಪಡಿಸಿದರು.

ಮಂಗಳೂರು: ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್ ಗಳ ಪೈಕಿ ಶ್ರೇಷ್ಠ ಬಜೆಟ್ ಎಂದು ಮಾಜಿ ಸಚಿವ ರಮನಾಥ ರೈ ವ್ಯಕ್ತಪಡಿಸಿದರು.

ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ.

ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ ಆಗಿದ್ದು, ಸಮಾಜ ಸ್ನೇಹಿ, ಮಹಿಳಾ ಸ್ನೇಹಿ, ಯುವ ಸ್ನೇಹಿ, ರೈತ ಸ್ನೇಹಿ ಬಜೆಟ್ ಕೂಡ ಆಗಿರುತ್ತದೆ.

ಬಜೆಟ್ ನಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲನ್ನು ನೀಡಲಾಗಿದೆ. ಎಲ್ಲಾ ಇಲಾಖೆಯಗಳಿಗೂ ಎಲ್ಲಾ ಪ್ರದೇಶಗಳಿಗೂ ಎಲ್ಲಾ ಕ್ಷೇತ್ರಗಳಿಗೂ ಎಲ್ಲಾ ಜಿಲ್ಲೆಗಳಿಗೂ ಎಲ್ಲಾ ವರ್ಗಗಳಿಗೂ ಈ ಬಜೆಟ್ ನ್ಯಾಯ ಒದಗಿಸಿದೆ.

ಕರಾವಳಿ ಕರ್ನಾಟಕಕ್ಕೂ ಬಜೆಟ್ ನಲ್ಲಿ ಹೆಚ್ಚು ಆಧ್ಯತೆ ನೀಡಲಾಗಿದೆ. ಕರಾವಳಿಯ ಪ್ರವಾಸೋಧ್ಯಮ ಮತ್ತು ಮೀನುಗಾರ ಸಮುದಾಯಕ್ಕೆ ಬಲ ಕೊಟ್ಟಿದೆ.

ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆ ರಚನೆ, ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆ ತಯಾರಿ ಮತ್ತು ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಿರುವುದು ಕರಾವಳಿ ಕರ್ನಾಟಕವನ್ನು ಅಭಿವೃದ್ಧಿಯಲ್ಲಿ ಮುಂದಕ್ಕೆ ಕೊಂಡೊಯ್ಯಲಿದೆ.

ಮೀನುಗಾರ ಮಹಿಳೆಯರಿಗೆ ಬಡ್ಡಿರಹಿತವಾಗಿ ನೀಡುವ ಸಾಲವನ್ನು 50 ಸಾವಿರ ರೂಪಾಯಿಂದ 3 ಲಕ್ಷ ರೂಪಾಯಿಗೆ ಹೆಚ್ಚಿಸಿರುವುದರಿಂದ ಅವರ ಬದುಕು ಹಸನಾಗಲಿದೆ.

ಕರಾವಳಿಯ ಮೂರು ಜಿಲ್ಲೆಗಳಿಗೆ ನಾರಾಯಣ ಗುರು ವಸತಿ ಶಾಲೆ ಕೊಟ್ಟಿದ್ದಾರೆ.

ಕರಾವಳಿಗೆ ದೊಡ್ಡ ಯೋಜನೆಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರಿಗೆ ಕರಾವಳಿ ಕರ್ನಾಟಕದ ಜನರ ಪರವಾಗಿ ಧನ್ಯವಾದಗಳು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!

Published

on

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

LATEST NEWS

Trending