DAKSHINA KANNADA
ಮಂಗಳೂರಿನಲ್ಲಿ ವಿಜೃಂಭಣೆಯ ವಿಶೇಷ ಬಿಜೆಪಿ ಕಾರ್ಯಕಾರಿಣಿ ಸಭೆ
ಮಂಗಳೂರಿನಲ್ಲಿ ವಿಜೃಂಭಣೆಯ ವಿಶೇಷ ಬಿಜೆಪಿ ಕಾರ್ಯಕಾರಿಣಿ ಸಭೆ
ಮಂಗಳೂರು: ಮಂಗಳೂರಿನ ಟಿ ವಿ ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಕಾರ್ಯ ಕಾರಿಣಿ ಸಭೆ ಬೆಳಗ್ಗೆ 10ಗಂಟೆಗೆ ಆರಂಭವಾಯಿತು. ಈ ಸಂದರ್ಭ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಿಯ ಚಿತ್ರ ಸ್ಮರಣಿಕೆ ಕೊಟ್ಟು ಗಣ್ಯರನ್ನು ಗೌರವಿಸಲಾಯಿತು.
ಸಭೆಯಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಗಣ್ಯರನ್ನು ಪರಿಚಯಿಸಿ ಸ್ವಾಗತ ಭಾಷಣ ಮಾಡಿದರು. ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಗದೀಶ್ ಶೆಟ್ಟರ್, ಸಿಟಿ ರವಿ, ಅರವಿಂದ ಲಿಂಬಾವಳಿ ಆರ್ ಅಶೋಕ್ ಸೇರಿದಂತೆ ಬಹಳಷ್ಟು ಸಚಿವರು ಗಣ್ಯರು ಆಗಮಿಸಿದ್ದರು. ಮಂಗಳೂರಿನ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿಎಸ್ ವೈ ಕೊಡುಗೆಯನ್ನು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಶ್ಲಾಘಿಸಿದರು..ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ದೀಪ ಬೆಳಗಿ ಉದ್ಘಾಟಿಸಿದರು.
ಸಭೆಯಲ್ಲಿ ಪ್ರಧಾನಿ ಮೋದಿಗೆ ಜಯಘೋಷ ಮೊಳಗಿಸುತ್ತಾ ಪುಷ್ಪಾರ್ಚನೆ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟನಾ ಭಾಷಣ ಮಾಡಿದರು.
ಪಕ್ಷವನ್ನು ಬಲಪಡಿಸುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಶ್ರಮವನ್ನು ಕೊಂಡಾಡಿದರು.18 ಪಕ್ಷೇತರರು ಬಿಜೆಪಿಗೆ ಸೇರ್ಪಡೆಗೊಂಡದ್ದು ಪಕ್ಷ ಆಡಳಿತ ನಡೆಸುವಲ್ಲಿ ಸಾಧ್ಯವಾಗಿದೆ. ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಪಕ್ಷ ಸಂಘಟನೆಯೊಂದಿಗೆ ಕಾರ್ಯ ನಿರತರಾಗುವಂತೆ ಸಲಹೆ ನೀಡಿದರು.
ಡ್ರಗ್ಸ್ ವಿರುದ್ಧ ವಿಶೇಷ ಕ್ರಮ ಕೈಗೊಳ್ಳಲಾಗುವುದು ಲವ್ ಜಿಹಾದ್ ಮಟ್ಟ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಉದ್ಯೋಗಾವಕಾಶಕ್ಕೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಮಹಾನಗರ ಪಾಲಿಕೆಗೆ ವಿಶೇಷ ಅನುದಾನ ನೀಡಿರುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.
BELTHANGADY
ಬೆಳ್ತಂಗಡಿ : ನೇಣು ಬಿಗಿದು ದಂಪತಿ ಆತ್ಮ*ಹತ್ಯೆ
ಬೆಳ್ತಂಗಡಿ : ದಂಪತಿ ನೇ*ಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದುಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಹಾಗೂ ಬೇಬಿ (46) ಆತ್ಮ*ಹತ್ಯೆ ಮಾಡಿಕೊಂಡವರು.
ಮನೆ ಸಮೀಪ ಇರುವ ಕಾಡಿನಲ್ಲಿ ದಂಪತಿ ನೇ*ಣಿಗೆ ಶರಣಾಗಿದ್ದಾರೆ. ಕಳೆದ 5 ವರ್ಷಗಳಿಂದ ನೋಣಯ್ಯ ಪೂಜಾರಿ ತಲೆ ನೋವಿನಿಂದ ಬಳಲುತ್ತಿದ್ದು, ಬೇಬಿ ಅವರಿಗೆ ಮಕ್ಕಳಿಲ್ಲದ ಕೊರಗು ಇತ್ತು ಎಂದು ತಿಳಿದು ಬಂದಿದೆ.
ನೋಣಯ್ಯ ಪೂಜಾರಿಯವರಿಗೆ ಇದು ಎರಡನೇ ವಿವಾಹವಾಗಿದ್ದು , ಮೊದಲ ಪತ್ನಿ 10 ವರ್ಷದ ಹಿಂದೆಯೇ ಸಾವನ್ನಪ್ಪಿದ್ದು, ಮೊದಲ ಪತ್ನಿಗೆ 5 ಜನ ಗಂಡು ಮಕ್ಕಳು ಇದ್ದರು ಎಂದು ತಿಳಿದುಬಂದಿದೆ. ಆತ್ಮ*ಹತ್ಯೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಉದ್ಯಮಿ ಮನೆ ದರೋಡೆ ಪ್ರಕರಣ; ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರ ಬಂಧನ
ಮಂಗಳೂರು : ಉದ್ಯಮಿ ಐಕಳ ಹರೀಶ್ ಶೆಟ್ಟಿ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಹುಸೈನಬ್ಬ ಯಾನೆ ಸುಹೈಲ್ , ಕೊಲ್ನಾಡು ನಿವಾಸಿ ಝುಬೈರ್ ಹಾಗೂ ಕಾಸರಗೋಡು ನಿವಾಸಿ ಕಲಾಮ್ ಬಂಧಿತರು. ಈ ಪೈಕಿ ಸುಹೈಲ್ ಹಾಗೂ ಝುಬೈರ್ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಕಲಾಮ್ ಆರೋಪಿಗಳು ತಲೆ ಮರೆಸಿಕೊಳ್ಳಲು ನಕಲಿ ಪಾಸ್ ಪೋರ್ಟ್ ಮಾಡಿಸಿಕೊಟ್ಟ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತರಿಂದ ನಕಲಿ ಪಾಸ್ ಪೋರ್ಟ್, ಮೊಬೈಲ್ ಫೋನ್, ಪಿಸ್ತೂಲು, ಸಜೀವ ಮದ್ದುಗುಂಡುಗಳು, ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು 2023ರಲ್ಲಿ ಉದ್ಯಮಿ ಹರೀಶ್ ಶೆಟ್ಟಿ ಐಕಳ ಅವರ ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿ ಕಾಸರಗೋಡು ನಿವಾಸಿ ಕಲಾಮ್ನ ಸಹಕಾರದಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸಿಕೊಂಡು ವಿದೇಶಕ್ಕೆ ತೆರಳಿ ಅಲ್ಲಿ ತಲೆ ಮರೆಸಿಕೊಂಡಿದ್ದರು. ಇತ್ತೀಚೆಗೆ ಊರಿಗೆ ಬಂದಿದ್ದ ಆರೋಪಿಗಳು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಕೋರ್ದಬ್ಬು ದೈವಸ್ಥಾನ ಬಳಿ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಭವನದ ಬಳಿ ಇರುವುದನ್ನು ಖಚಿತ ಪಡಿಸಿಕೊಂಡ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ : ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು
ಈಗಾಗಲೇ ಮುಲ್ಕಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬುಧವಾರ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂದಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 5ಕ್ಕೇರಿದೆ.
DAKSHINA KANNADA
ಕಿನ್ನಿಗೋಳಿ : ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಅಧಿಕಾರಿಗಳು
ಕಿನ್ನಿಗೋಳಿ: ಕಿನ್ನಿಗೋಳಿ ಪಟ್ಟಣ ಪಂಚಾಯತಿ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಗುತ್ತಿಗೆದಾರರಿಂದ ಲಂಚ ಸ್ವೀಕರಿಸುತ್ತಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಮತ್ತು ಜೂನಿಯರ್ ಎಂಜಿನಿಯರ್ ನಾಗರಾಜ್ ಎಂಬುವವರನ್ನು ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಸೆರೆ ಹಿಡಿದಿದ್ದಾರೆ.
ಗುತ್ತಿಗೆದಾರರಿಂದ ಲಂಚ ಸ್ವೀಕಾರ:
ಪಿಡಬ್ಲ್ಯೂಡಿ ಕ್ಲಾಸ್ ವನ್ ಪಂಚಾಯತ್ ವ್ಯಾಪ್ತಿಯ ಎಸ್ ಕೋಡಿ ಸರಕಾರಿ ಕೆರೆ ಅಭಿವೃದ್ಧಿಪಡಿಸುವ ಕಾಮಗಾರಿಯ ಗುತ್ತಿಗೆ ವಹಿಸಿ ಕೆಲಸ ನಿರ್ವಹಿಸುತ್ತಿದ್ದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯವರು ದೂರು ನೀಡಿದ್ದಾರೆ. ಕಾಮಗಾರಿಯ ಮೊತ್ತ 9,77,154 ರೂಪಾಯಿಗಳ ಬಿಲ್ಲು ಮಂಜೂರಾತಿಯಾಗಿದ್ದು, ಜೂನಿಯರ್ ಎಂಜಿನಿಯರ್ ನಾಗರಾಜು ಅವರು 37,000 ರೂಪಾಯಿ ಹಾಗೂ ಪಟ್ಟಣ ಪಂಚಾಯತ್ನ ಮುಖ್ಯಾಧಿಕಾರಿ ಎಂ.ಆರ್ ಸ್ವಾಮಿ ಅವರು 15,000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಪ್ರಕರಣ ದಾಖಲಾಗಿದ್ದು, ಜೂನಿಯರ್ ಎಂಜಿನಿಯರ್ ನಾಗರಾಜು ಅವರು ಮುಂಗಡವಾಗಿ 7000 ರೂ. ಹಣವನ್ನು ಗುತ್ತಿಗೆದಾರರಿಂದ ಪಡೆದುಕೊಂಡಿದ್ದರು.
ಈ ದೂರಿನ ಹಿನ್ನೆಲೆಯಿಂದ ಕಿನ್ನಿಗೋಳಿ ಲೋಕಾಯುಕ್ತ ಪೊಲೀಸರು ಪಟ್ಟಣ ಪಂಚಾಯಿತಿ ದಾಳಿಗೆ ವ್ಯವಸ್ಥೆ ಮಾಡಿ ಆರೋಪಿಗಳಾದ ಜೂನಿಯರ್ ಎಂಜಿನಿಯರ್ ನಾಗರಾಜುರಿಂದ 30 ಸಾವಿರ ರೂಪಾಯಿ ಹಾಗೂ ಮುಖ್ಯಾಧಿಕಾರಿ ಎಂ.ಆರ್.ಸ್ವಾಮಿಯವರಿಂದ 15 ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಾಗಲೇ ಅವರನ್ನು ಸೆರೆ ಹಿಡಿಯಲಾಗಿದೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ.ನಟರಾಜ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಡಾ. ಉಪಾಧೀಕ್ಷಕರಾದ ಗಾನಾ ಪಿ. ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ.ಎ, ಸುರೇಶ್ ಕುಮಾರ್ ಪಿ, ಚಂದ್ರಶೇಖರ್ ಕೆ.ಎನ್, ಚಂದ್ರಶೇಖರ್ ಸಿ.ಎಲ್ ಮತ್ತು ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.
ವಿಡಿಯೋ ನೋಡಿ: