Connect with us

DAKSHINA KANNADA

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಕ್ಕೆ 8 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ- ನಳಿನ್‌ ಕುಮಾರ್ ಕಟೀಲ್‌

Published

on

ರಾಜ್ಯದಲ್ಲಿ ಈ ಬಾರಿ ನೂರಕ್ಕೆ ನೂರು ಬಿಜೆಪಿಯ ಬಹುಮತದ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್ ಕಟೀಲ್‌ ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಮಂಗಳೂರು: ರಾಜ್ಯದಲ್ಲಿ ಈ ಬಾರಿ ನೂರಕ್ಕೆ ನೂರು ಬಿಜೆಪಿಯ ಬಹುಮತದ ಸರಕಾರ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್ ಕಟೀಲ್‌ ಅವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ವಿಧಾನ ಸಭಾ ಚುನಾವಣೆಯ ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇಡೀ ರಾಜ್ಯದಲ್ಲಿ ಬಿಜೆಪಿಗೆ ಅಭೂತ ಪೂರ್ವ ಜನ ಬೆಂಬಲ ವ್ಯಕ್ತವಾಗುತ್ತಿದೆ.

ಡಬಲ್‌ ಎಂಜಿನ್‌ ಸರಕಾರದ ಸಾಧನೆಗಳು, ಆಭಿವೃದ್ಧಿ ಕೆಲಸಗಳು ತಲುಪಿದ ಬಗ್ಗೆ ಜನರಿಗೆ ತೃಪ್ತಿ ಇದೆ.

ಹಳ್ಳಿಗಳಿಗೆ ಹೋದಾಗ ಫಲಾನುಭವಿಗಳಿಂದ ಬಿಜೆಪಿಗೆ ಬೆಂಬಲ ವ್ಯಕ್ತವಾಗುತ್ತಿದೆ.

ಮೂಲ ಸೌಕರ್ಯ, ಜನ ಕಲ್ಯಾಣ ಯೋಜನೆಗಳು, ಸಾಮಾಜಿಕ ನ್ಯಾಯ ಡಬಲ್‌ ಎಂಜಿನ್‌ ಸರಕಾರದಿಂದ ಒದಗಿಸಲಾಗಿದೆ.

ಇದರಿಂದ ಜನರಿಗೆ ಬಿಜೆಪಿ ಮೇಲೆ ಭರವಸೆ ಜಾಸ್ತಿಯಾಗಿದೆ.

ಕಾಂಗ್ರೆಸ್‌ ವಿರೋಧಿ ಅಲೆ ಕಂಡು ಬರುತ್ತಿದೆ. ದ.ಕ. ಜಿಲ್ಲೆಯಲ್ಲಿ 8 ಕ್ಕೆ 8 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತೇವೆ ಎಂದು ತಿಳಿಸಿದರು.

ರಾಜ್ಯ ಅಧ್ಯಕ್ಷನಾಗಿ ಕಳೆದ ಒಂದುವರೆ ತಿಂಗಳಲ್ಲಿ ಎಲ್ಲಾ 224 ಕ್ಷೇತ್ರಗಳ ದರ್ಶನ ಮಾಡಿದ್ದೇನೆ.

ಪ್ರಧಾನಿ ಮೋದಿ ಅವರು ಚುನಾವಣೆ ಘೋಷಣೆಗೆ ಮೊದಲು 16 ಬಾರಿ ಹಾಗೂ ಚುನಾವಣೆ ಘೋಷಣೆಯಾದ ಬಳಿಕ 20 ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.

ಅವರ ಭೇಟಿಯಿಂದಾಗಿ 15ರ ರಿಂದ 20 ಸೀಟುಗಳು ಹೆಚ್ಚು ಸಿಗಲಿವೆ ಎಂದರು.

34 ಒಬಿಸಿ, 32 ಪರಿಶಿಷ್ಟ ಜಾತಿ, 18 ಪರಿಶಿಷ್ಟ ಪಂಗಡ, ಓರ್ವ ಜೈನ, 134 ಸಾಮಾನ್ಯ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡುವ ಮೂಲಕ ಎಲ್ಲಾ ಸಮುದಾಯಗಳನ್ನು ಗೌರವಿಸುವ ಕೆಲಸ ಆಗಿದೆ.

ಪಕ್ಷದ ಕಾರ್ಯಕರ್ತರಿಗೂ ಪ್ರಾತಿನಿಧ್ಯ ನೀಡಲಾಗಿದೆ ಎಂದು ವಿವರಿಸಿದರು. ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸೋಲುತ್ತಾರೆ.

ಡಿಕೆಶಿ ಟೆನ್ಶನ್‌ ನಲ್ಲಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಕಾಂಗ್ರೆಸ್‌ ನಲ್ಲಿ ಗೊಂದಲ ಮತ್ತು ಒಳ ಜಗಳವಿದೆ ಎಂದರು.

ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ರೇಸ್‌ ನಲ್ಲೂ ಇಲ್ಲ. ರಾಜ್ಯ ರಾಜಕಾರಣದ ಇಚ್ಛೆಯೂ ನನಗಿಲ್ಲ.

ರಾಜ್ಯ ಆಧ್ಯಕ್ಷನಾಗಿ ನನ್ನ ಅವಧಿ ಮುಗಿಯುತ್ತಾ ಬರುತ್ತಿದೆ. ಅದನ್ನು ಉತ್ತಮ ರೀತಿಯಲ್ಲಿ ಮುಗಿಸುವ ಗುರಿ ಹೊಂದಿದ್ದೇನೆ ಎಂದು ನಳಿನ್‌ ತಿಳಿಸಿದರು.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending