Connect with us

DAKSHINA KANNADA

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ತನಿಖೆ NIA ಮಾಡುತ್ತೆ : ಪೋಲಿಸ್ ಕಮಿಷನರ್ ಶಶಿಕುಮಾರ್..

Published

on

ಮಂಗಳೂರು ನಗರದಲ್ಲಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕೃತವಾಗಿ ವಹಿಸಿಕೊಂಡಿದೆ.

ಮಂಗಳೂರು :ಮಂಗಳೂರು ನಗರದಲ್ಲಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕೃತವಾಗಿ ವಹಿಸಿಕೊಂಡಿದೆ.

ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಂಕಿತ ಉಗ್ರ ಶಾರೀಕ್ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ವಿಚಾರಣೆಯನ್ನು ಎನ್‌ ಐ ಎ ನಡೆಸಲಿದೆ.

ಈ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು ಇಂದು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಆಗಮಿಸಿ ಬಾಂಬ್ ಸ್ಪೋಟ ಪ್ರಕರಣದ ಮಾಹಿತಿಗಳಿರುವ ಕಡತಗಳನ್ನು ಪಡೆದುಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರೀಯೆ ನೀಡಿರುವ ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿ ಕುಮಾರ್ ಡಿಜಿಪಿ ಕಚೇರಿ ಸೂಚನೆಯಂತೆ ಮಂಗಳೂರು ಆಟೋ ಬಾಂಬ್ ಸ್ಪೋಟದ ಪ್ರಕರಣವನ್ನು ಎನ್ ಐ ಎ ಗೆ ವಹಿಸಲಾಗಿದ್ದು ಹಸ್ತಾಂತರಿಸುತ್ತಿದ್ದೇವೆ.

ಸ್ಪೋಟದ ಶಂಕಿತ ಆರೋಪಿ ಶಾರಿಕ್ ನ ಚಿಕಿತ್ಸೆ ಮುಂದುವರೆದಿದ್ದು ನಿನ್ನೆ ವೈದ್ಯರು ಶಾರೀಕ್ ಫಿಟ್ ಇದ್ದಾನೆ,ಪ್ರಶ್ನೆ ಮಾಡಬಹುದು ಅಂತಾ ಹೇಳಿದ್ದರು ಆದ್ದರಿಂದ ನಿನ್ನೆ ಶಾರೀಕ್ ನನ್ನು ಕೆಲ ಕಾಲ ವಿಚಾರಣೆ ಮಾಡಿದ್ದೇವೆ ಮತ್ತು ಹಲವು ಪ್ರಶ್ನೆಗಳನ್ನು ಶಾರೀಕ್ ಗೆ ಕೇಳಿದ್ದೇವೆ.

ಕೆಲವು ಪ್ರಶ್ನೆಗಳಿಗೆ ಶಾರೀಕ್ ಉತ್ತರ ನೀಡಿದ್ದಾನೆ. ಇನ್ಮುಂದೆ ಇನ್ನು ಪ್ರಕರಣ ವನ್ನು ಎನ್ ಐ ಎ ಅಧಿಕಾರಿಗಳು ನಡೆಸಲಿದ್ದಾರೆ.

ಅವರಿಗೆ ಸಹಾಯ ಮಾಡಲು ಅಗತ್ಯ ಇರುವ ಆಯ್ದ ಅಧಿಕಾರಿ,ಸಿಬ್ಬಂದಿಯನ್ನು ತನಿಖೆಗೆ ನೀಡಲಿದ್ದೇವೆ.

ಶಾರೀಕ್ ಗೆ ಶೇಕಡ 40 ರಷ್ಟು ಸುಟ್ಟ ಗಾಯ ಆಗಿರೋದರಿಂದ ಆರೋಗ್ಯ ಸೂಕ್ಷ್ಮ ವಾಗಿರುತ್ತದೆ ಮತ್ತು ಆರೋಗ್ಯದ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಶಶಿಕುಮಾರ್ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ,

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending