Connect with us

DAKSHINA KANNADA

ವಿದ್ಯಾರ್ಥಿಗಳಿಗೆ ಗಾಂಜಾ ಸಫ್ಲೈ ಮಾಡುತ್ತಿದ್ದ ಆರೋಪಿ ತಂಗಿದ್ದ ಫ್ಲ್ಯಾಟ್‌ಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಸಿಸಿಬಿ ಪೊಲೀಸರು..!

Published

on

ಮಂಗಳೂರು: ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಗಾಂಜಾವನ್ನು ಸಾರ್ವಜನಿಕರಿಗೆ ಹಾಗು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ಗಾಂಜಾ ಸೇರಿದಂತೆ ಅನೇಕ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.


ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಗರೋತ್ತರ ಭಾರತೀಯ ಪ್ರಜೆಯಾಗಿರುವ ನೀಲ್ ಕಿಶೋರಿಲಾಲ್ ರಾಮ್ ಜಿ. ಶಾ (38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಬಂಟ್ಸ್ ಹಾಸ್ಟೆಲ್ ಪರಿಸರದ ಫ್ಲಾಟ್ ವೊಂದರಲ್ಲಿ ವಾಸವಿದ್ದ ಈತ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನಿಂದ ಒಟ್ಟು 2 ಕೆ. ಜಿ ತೂಕದ 50 ಸಾವಿರ ರೂಪಾಯಿ ಮೌಲ್ಯದ ಗಾಂಜಾ, 2 ಮೊಬೈಲ್ ಫೋನ್, 7 ಸಾವಿರ ರೂಪಾಯಿ ನಗದು ಮತ್ತು ಡಿಜಿಟಲ್ ತೂಕ ಮಾಪನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈತನಿಂದ ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ಆಂದಾಜು 78 ಸಾವಿರ ರೂಪಾಯಿ ಆಗಿರಬಹುದು ಎಂದು ಅಂದಾಜು ಮಾಡಲಾಗಿದೆ.

ಇನ್ನು ಆರೋಪಿಯು ಅಕ್ರಮವಾಗಿ ಮಾದಕ ವಸ್ತುಗಳನ್ನು ವಿಶಾಖಪಟ್ಟಣದಿಂದ ಖರೀದಿಸಿಕೊಂಡು ಬಂದು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ತನಿಖೆ ಮುಂದುವರೆದಿದೆ. ಈ ಮಾದಕ ವಸ್ತು ಗಾಂಜಾ ಮಾರಾಟದ ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್. ಎಂ, ಪಿಎಸ್‌ಐ ಗಳಾದ ರಾಜೇಂದ್ರ ಬಿ, ಸುದೀಪ್ ಎಂ. ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

 

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

DAKSHINA KANNADA

ಉಪ್ಪಿನಂಗಡಿ:12 ಅಡಿ ಉದ್ದದ‌ ಕಾಳಿಂಗ ಸರ್ಪ ಹಿಡಿಯೋಕು ಮೀಟ್ರು ಬೇಕು

Published

on

ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ 12 ಅಡಿ ಉದ್ದದ‌ ಕಾಳಿಂಗ ಸರ್ಪ ಪ್ರತ್ಯಕ್ಷಗೊಂಡಿತು. ಇದನ್ನು ಸೆರೆ ಹಿಡಿದ ಉರಗ ತಜ್ಞ ಕೆ. ಝಕರಿಯ್ಯ ಎಂಬುವವರು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಸುತ್ತಾಡಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಕೆ. ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

Continue Reading

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

LATEST NEWS

Trending