Connect with us

DAKSHINA KANNADA

Mangalore: ‘ಸರ್ಕಸ್‌’ ತುಳು ಸಿನೆಮಾದ ಪ್ರೀಮಿಯರ್ ಶೋ- ವೀಕ್ಷಣೆಗೆ ಕಿಕ್ಕಿರಿದ ಜನ

Published

on

ರಾಕ್ ಸ್ಟಾರ್ ರೂಪೇಶ್‌ ಶೆಟ್ಟಿ ಚಿತ್ರಕಥೆ ಬರೆದು, ನಿರ್ದೇಶನ ಮಾಡಿರುವ ಸರ್ಕಸ್‌ ತುಳು ಸಿನೆಮಾದ ಪ್ರೀಮಿಯರ್ ಶೋ ಕಿಕ್ಕಿರಿದು ಸೇರಿದ ವೀಕ್ಷಕರ ನಡುವೆ ನಡೆಯಿತು.

ಮಂಗಳೂರು: ರಾಕ್ ಸ್ಟಾರ್ ರೂಪೇಶ್‌ ಶೆಟ್ಟಿ ಚಿತ್ರಕಥೆ ಬರೆದು, ನಿರ್ದೇಶನ ಮಾಡಿರುವ ಸರ್ಕಸ್‌ ತುಳು ಸಿನೆಮಾದ ಪ್ರೀಮಿಯರ್ ಶೋ ಕಿಕ್ಕಿರಿದು ಸೇರಿದ ವೀಕ್ಷಕರ ನಡುವೆ ನಡೆಯಿತು.

ಮಂಗಳೂರಿನ ಭಾರತ್‌ ಮಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀಪ ಬೆಳಗಿಸುವ ಮೂಲಕ ಪತ್ರಕರ್ತ ವಾಲ್ಟರ್ ನಂದಳಿಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಗಿರಿಗಿಟ್ ಚಿತ್ರದ ಬಳಿಕ ರೂಪೇಶ್‌ ಶೆಟ್ಟಿ ನಿರ್ದೇಶನದ ಎರಡನೇ ಚಿತ್ರ ಇದಾಗಿದ್ದು, ನಕ್ಕುನಗಿಸುವ ಹಾಸ್ಯವನ್ನು ಉಣಬಡಿಸಲಿದೆ.

ಈಗಾಗಲೇ ವಿದೇಶಗಳಲ್ಲಿ ಜನಮನ್ನಣೆ ಪಡೆದಿದೆ. ಮಂಗಳೂರಿನ ಜನ ಕೂಡಾ ಈ ಚಿತ್ರವನ್ನು ಸ್ವಾಗತಿಸುವುದು ಖಂಡಿತ ಎಂದರು. ಚಿತ್ರ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.

ಜೂನ್‌ 23ರಿಂದ ಚಿತ್ರ ಕರಾವಳಿಯಾದ್ಯಂತ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣಲಿದೆ.

ನಟ ರೂಪೇಶ್ ಶೆಟ್ಟಿ, ನಟಿ ರಚನಾ, ಕಲಾವಿದರಾದ ಚಂದ್ರಹಾಸ್‌ ಉಳ್ಳಾಲ್‌, ರೂಪಾ ವರ್ಕಾಡಿ, ಸಾಯಿ ಕೃಷ್ಣ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ, ಸರ್ಕಸ್‌ ಚಿತ್ರದ ಎಡಿಟರ್, ಕ್ಯಾಮೆರಾಮನ್‌, ಸಂಗೀತ ನಿರ್ದೇಶಕರು ಉಪಸ್ಥಿತರಿದ್ದರು.

ಇನ್ನು ಚಿತ್ರ ಪ್ರದರ್ಶನದ ಬಳಿಕ ನಮ್ಮ ಕುಡ್ಲವಾಹಿನಿ ವೀಕ್ಷಕರೊಂದಿಗೆ ಚಿಟ್‌ ಚಾಟ್ ಮಾಡಿದ್ದು, ವೀಕ್ಷಕರು ಕೂಡಾ ಉತ್ತಮ ಸ್ಪಂದನೆ ವ್ಯಕ್ತಪಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

DAKSHINA KANNADA

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ! ಇ ಮೇಲ್ ನಲ್ಲಿ ಏನಿದೆ?

Published

on

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ.


ಇ ಮೇಲ್ ಮೂಲಕ ಬಂತು ಬೆದರಿಕೆ :

ಕಳೆದ ಎಪ್ರಿಲ್‌ 29 ರಂದು ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಇ-ಮೇಲ್ ಮೂಲಕ ರವಾನೆಯಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಅದೇ ದಿನ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು ಎಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್‌ 29 ರಂದು ಬೆಳಗ್ಗೆ 9.37 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇ – ಮೇಲ್ ಐಡಿ ಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಇ – ಮೇಲ್‌ ನಿಂದ ‘ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಿದ್ದು, ಈ ಸ್ಫೋಟಕಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುವುದಾಗಿ’ ಬೆದರಿಕೆ ಸಂದೇಶ ಕಳುಹಿಸಿದ್ದನು.

ಇದನ್ನೂ ಓದಿ : ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶ ಕೆ.ಜಿ. ಅವರು ನೀಡಿದ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಐಪಿಸಿ 507 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಬಜಪೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ವಿವರಿಸಿದ್ದಾರೆ.

ಇ ಮೇಲ್ ನಲ್ಲಿ ಏನಿದೆ ?

ಇ ಮೇಲ್ ನಲ್ಲಿ, ‘ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.

Continue Reading

LATEST NEWS

Trending