Home ಮಂಗಳೂರು ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಕೈಯಾಡಿಸುತ್ತಿರುವ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ

ಅಭಿವೃದ್ಧಿ ಕೆಲಸ ಕಾರ್ಯಗಳಲ್ಲಿ ಕೈಯಾಡಿಸುತ್ತಿರುವ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ

ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಮೀಸಲಿಟ್ಟಿರುವ ಉತ್ತರ ಶಾಸಕ ಭರತ್ ಶೆಟ್ಟಿ

ಮಂಗಳೂರು: ಸದ್ಯ ಮಂಗಳೂರು ನಗರ ಅಭಿವೃದ್ಧಿಯತ್ತ ಸಾಗುತ್ತಿದೆ.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಉತ್ತರ ಶಾಸಕ ಭರತ್ ಶೆಟ್ಟಿ ಅವರು ತಮ್ಮ-ತಮ್ಮ ಸರಹದ್ದಿನಲ್ಲಿ ಬರುವ ಕೆಲಸಕಾರ್ಯಗಳನ್ನು ಮಾಡುವ ಮೂಲಕ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ.

ಇದೀಗ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಅವರೂ ಕೂಡ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.18 ಮತ್ತು ನಂ.19ರ ಶ್ರೀ ವೆಂಕಟರಮಣ ಮತ್ತು ಮಹಾಲಸಾ ನಾರಾಯಣಿ ದೇವಸ್ಥಾನದ ಮುಂಭಾಗ ವಿಕಾಸ್ ಪದವಿಪೂರ್ವ ಕಾಲೇಜಿನ ಹಿಂಬದಿ ಸಂಪೂರ್ಣ ರಸ್ತೆಯನ್ನು ಸುಮಾರು 40 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.

2019-20ನೇ ಸಾಲಿನ ಮಲೆನಾಡು ಪ್ರದೇಶ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿಗೊಳಿಸಲು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಅನುದಾನ ಮೀಸಲಿಟ್ಟಿದ್ದಾರೆ.

ಜೊತೆಗೆ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿಯೂ ಅನುದಾನ ಬಳಸಿ ಮುಂದಿನ 3 ತಿಂಗಳಿನಲ್ಲಿ ಕಾಮಗಾರಿ ನಡೆಸಿ ಸಂಪೂರ್ಣ ಅಭಿವೃದ್ಧಿಗೊಂಡ ರಸ್ತೆಯನ್ನು ಲೋಕಾರ್ಪಣೆಗೊಳಿಸಲು, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಯೋಜನೆ ಹಾಕಿಕೊಂಡಿದ್ದಾರೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...