DAKSHINA KANNADA
ಮಂಗಳೂರು ಗೋಡೆ ಬರಹ ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!
Published
4 years agoon
By
Adminಮಂಗಳೂರು ಗೋಡೆ ಬರಹ ಪ್ರಕರಣ : ಇಬ್ಬರು ಆರೋಪಿಗಳ ಬಂಧನ..!
ಮಂಗಳೂರು : ಮಂಗಳೂರು ನಗರದಲ್ಲಿ ಇತ್ತೀಚೆಗೆ ಎರಡು ಕಡೆಗಳಲ್ಲಿ ಕಂಡುಬಂದ ಪ್ರಚೋದನಕಾರಿ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತೀರ್ಥಹಳ್ಳಿ ನಿವಾಸಿಗಳಾದ 21 ವರ್ಷದ ಮುಹಮ್ಮದ್ ಶಾಹಿಕ್ , ಮಾಝ್ ಮುನೀರ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಬಂಧಿತ ಇಬ್ಬರು ಆರೋಪಿಗಳು ಕೂಡಿಕೊಂಡು ಈ ಕೃತ್ಯ ನಡೆಸಿದ್ದಾರೆ.
ಎಲ್ಲರಿಗೂ ಕಾಣುವ ಪ್ರದೇಶದ ಗೋಡೆಯಲ್ಲಿ ಬರೆದಿದ್ದಾರೆ. ಪ್ರಚಾರಕ್ಕಾಗಿ ಈ ಕೃತ್ಯ ನಡೆಸಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬಂಧಿತ ಆರೋಪಿ ಶಾಹಿಕ್ ಮತ್ತು ಮುನೀರ್ ಮೊದಲಿನಿಂದಲೂ ಸ್ನೇಹಿತರು.
ಶಾಹಿಕ್ ಓರ್ವ ಸೇಲ್ಸ್ ಮ್ಯಾನ್ ಆಗಿದ್ದು, ಮುನೀರ್ ನಗರದಲ್ಲೇ ಬಿ.ಟೆಕ್ ಇಂಜಿನಿಯರ್ ವಿದ್ಯಾರ್ಥಿ ಎಂದು ಕಮಿಷನರ್ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ವಿನಯ್ ಗಾಂವ್ಕರ್ ಮತ್ತಿತರರು ಉಪಸ್ಥಿತರಿದ್ದರು.
bangalore
ಕ್ರಿಸ್ಮಸ್ ಸ್ಪೆಷಲ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು ಸಂಚಾರ
Published
24 hours agoon
22/12/2024ಮಂಗಳೂರು : ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಬೆಂಗಳುರು – ಮಂಗಳೂರು ನಡುವೆ ಡಿಸೆಂಬರ್ 23 ಹಾಗೂ 27 ರಂದು ವಿಶೇಷ ರೈಲು ಸಂಚರಿಸಲಿದೆ. ಮತ್ತೆ ಪುನಃ ಅದೇ ರೈಲು (06506) ಡಿಸೆಂಬರ್ 24 ಮತ್ತು 28 ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30 ಕ್ಕೆ ಯಶವಂತಪುರ ತಲುಪಲಿದೆ.
ಕೆಲಸದ ನಿಮಿತ್ತ ಮಂಗಳೂರಿನ ಹಲವು ಜನ ಬೆಂಗಳೂರಿನಲ್ಲಿ ವಾಸವಿದ್ದಾರೆ. ಇದೀಗ ಕ್ರಿಸ್ಮಸ್ ಹಬ್ಬ ಸಮೀಪಿಸುತ್ತಿದ್ದು, ಊರಿಗೆ ಮರಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಅವರಿಗೆಲ್ಲಾ ಅನುಕೂಲವಾಗಲೆಂದು ಈ ವಿಶೇಷ ರೈಲು ಸಂಚಾರವನ್ನು ಅಳವಡಿಸಿದ್ದು, ಹಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇದರ ಫಲಾನುಭವಿಗಳಾಗಲಿದ್ದಾರೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ. ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್ಸೈಟ್ಗೆ ಭೇಟಿ ನೀಡಿ. NTES ಅಪ್ಲಿಕೇಶನ್ ಬಿಳಸಿ ಅಥವಾ 139 ನಂಬರಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ವಡೆದುಕೊಳ್ಳಬಹುದು.
DAKSHINA KANNADA
ಮೂಲ್ಕಿ: ವಿವಿಧ ರಂಗಗಳ ಸಾಧಕರಿಗೆ ‘ಅರಸು ಕಂಬಳ’ ಪ್ರಶಸ್ತಿ ಪ್ರದಾನ
Published
2 days agoon
21/12/2024ಮೂಲ್ಕಿ: ಮೂಲ್ಕಿ ಅರಸು ಕಂಬಳ ಸಂದರ್ಭ ಮೂಲ್ಕಿ ಸೀಮೆ ವ್ಯಾಪ್ತಿಯ ವಿವಿಧ ರಂಗಗಳ 14 ಮಂದಿ ಸಾಧಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಅರಮನೆಯ ಧರ್ಮ ಚಾವಡಿಯಲ್ಲಿ ಅರಸು ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ರಮ ಡಿ. 22ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ ಎಂದು ಅರಸರಾದ ದುಗ್ಗಣ್ಣ ಸಾವಂತರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮೂಲ್ಕಿ ಅರಮನೆ ಟ್ರಸ್ಟ್ ಮತ್ತು ಹಳೆಯಂಗಡಿಯ ಪ್ರಿಯ ದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಸಹಭಾಗಿತ್ವದಲ್ಲಿ ಕಾಠ್ಯಕ್ರಮ ನಡೆ. ಯಲಿದೆ. ಶ್ರೀ ಅರುಣಾನಂದ ತೀರ್ಥ ಸ್ವಾಮೀ ಜಿ (ಸಾಧನಾ ಪ್ರಶಸ್ತಿ) ದಿ। ಎಚ್. ನಾರಾಯಣ ಸನಿಲ್ (ಮರಣೋತ್ತರ-ಸಮಾಜ ಸೇವೆ ಮತ್ತು ಶಿಕ್ಷಣ, ಸಹಕಾರಿ) ದಿ। ಎನ್. ಬಾಬು ಶೆಟ್ಟಿ (ಮರಣೋತ್ತರ-ಸಮಾಜ ಸೇವೆ), ಮೀರಾ ಬಾಯಿ ಕೆ. (ಶಿಕ್ಷಣ), ಎಚ್. ಶಕುಂತಳಾ ಭಟ್ (ಸಾಹಿತ್ಯ) ವಾಲ್ಟರ್ ಡಿ’ಸೋಜಾ (ಕೃಷಿ ಮತ್ತು ಪರಿಸರ), ಡಾ। ಹಸನ್ ಮುಬಾರಕ್ (ವೈದ್ಯಕೀಯ), ಸೀತಾರಾಮ್ ಕುಮಾರ್ ಕಟೀಲು (ಯಕ್ಷಗಾನ), ಪರಮಾನಂದ ಸಾಲ್ಯಾನ್ (ಸಾಹಿತ್ಯ), ಶಿವ ಸಂಜೀವಿನಿ ಸುರಗಿರಿ (ಸಂಘ ಸಂಸ್ಥೆ), ಮಾಧವ ಶೆಟ್ಟಿಗಾರ್ ಮತ್ತು ಚಂದ್ರಕುಮಾರ್ (ಸಾಮಾಜಿಕ ಕ್ಷೇತ್ರ) ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ತೋಕೂರು (ಸಂಘಸಂಸ್ಥೆ) ವಿನಾಯಕಯಕ್ಷಗಾನ ಫೌಂಡೇಶನ್ ಕೆರೆಕಾಡು (ಯಕ್ಷಗಾನ ತಂಡ) ಇವರಿಗೆ ಪ್ರಶಸ್ತಿ ನೀಡಲಾಗುವುದು.
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಆಳದಂಗಡಿ ಅರಮನೆಯ ತಿಮ್ಮಣ್ಣ ಅರಸರಾದ ಡಾ। ಪದ್ಮಪ್ರಸಾದ್ ಅಜಿಲರು, ದ.ಕ. ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿವೃತ್ತ ಸಹಕಾರಿ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ಪಿ. ಮುಂತಾದವರು ಉಪಸ್ಥಿತರಿರುವರು ಎಂದರು. ಅರಮನೆಟ್ರಸ್ಟ್‌ನ ಗೌತಮ್ ಜೈನ್, ಪ್ರಿಯದರ್ಶಿನಿ ಸೊಸೈಟಿಯ ಅಧ್ಯಕ್ಷ ವಸಂತ್ ಬೆರ್ನಾಡ್ ಹಾಗೂ ಸಿಇಒ ಸುದರ್ಶನ್ ಉಪಸ್ಥಿತರಿದ್ದರು.
DAKSHINA KANNADA
ಅತಿ ವೇಗ ತಂದಿಟ್ಟ ಪ್ರಾ*ಣಾಪಾಯ; ಬಸ್‌ಗೆ ಡಿ*ಕ್ಕಿ ಹೊ*ಡೆದು ಬೈಕ್ ಸವಾರ ಸಾ*ವು
Published
2 days agoon
21/12/2024ಮಂಗಳೂರು: ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರರೊಬ್ಬರು ರಸ್ತೆ ಅ*ಪಘಾ*ತದಲ್ಲಿ ಮೃ*ತಪಟ್ಟ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್‌ನಲ್ಲಿ ನನ್ನೆ (ಡಿ.20) ರಾತ್ರಿ ನಡೆದಿದೆ.
ಮೃ*ತರನ್ನು ಕಾನ ನಿವಾಸಿ ರೆಮ್ಮಿ (38) ಎಂದು ಗುರುತಿಸಲಾಗಿದೆ.
ಕುಳಾಯಿಯಲ್ಲಿ ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆತರಲೆಂದು ರೆಮ್ಮಿ ತನ್ನ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದ. ಕುಳಾಯಿಗುಡ್ಡೆ ಜಂಕ್ಷನ್ ಬಳಿ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸರು ರೆಮ್ಮಿಯನ್ನು ಎಚ್ಚರಿಸಿದ್ದರೂ ಗಮನಿಸದ ರೆಮ್ಮಿ ಸುರತ್ಕಲ್ ಕಡೆಗೆ ಅತಿ ವೇಗದಿಂದ ತನ್ನ ದ್ವಿಚಕ್ರ ವಾಹನವನ್ನು ತಿರುಗಿಸಿದಾಗ ಎದುರುರಿನಿಂದ ಬರುತ್ತಿದ್ದ ಖಾಸಗಿ ಸಿಟಿ ಬಸ್ ಡಿ*ಕ್ಕಿ ಹೊಡೆದಿತ್ತು.
ಇದನ್ನೂ ಓದಿ : ಪುತ್ತೂರು: ಬಸ್-ಬೈಕ್ ಅಪಘಾತ, ಬೈಕ್ ಸವಾರ ಸಾ*ವು
ಅ*ಪಘಾ*ತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರೆಮ್ಮಿ ಗಂ*ಭೀರ ಗಾ*ಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃ*ತಪಟ್ಟಿದ್ದಾರೆ. ಅ*ಪಘಾ*ತ ನಡೆದ ಬೆನ್ನಲ್ಲೇ ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು ಪೊಲೀಸರ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.
LATEST NEWS
ದಿ*ಢೀರ್ ಹ*ಚ್ಚಿಕೊಂಡ ಬೆಂ*ಕಿ; ಆರು ಅಂಗಡಿಗಳು ಅ*ಗ್ನಿಗಾ*ಹುತಿ !!
ಮೊಹಾಲಿ ಕಟ್ಟಡ ಕು*ಸಿತ ಪ್ರಕರಣ; ಎರಡು ಸಾ*ವು, ಹಲವರು ಕಟ್ಟಡದಡಿ ಇರುವ ಶಂಕೆ !!
ಮೆಲ್ಬೋರ್ನ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗಾಯಾಳುಗಳ ಬರೆ !
ಮಹಾರಾಷ್ಟ್ರ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ; ಯಾರಿಗೆ ಯಾವ ಖಾತೆ ?
ಬಾಂಗ್ಲಾ ಹಿಂದೂಗಳ ಮೇಲೆ ದಾ*ಳಿ ; ಭಾರತೀಯರ ಮುಗಿಸಲು ಉ*ಗ್ರರ ಸಂಚು!
ಮಹತ್ವದ ನಿರ್ಧಾರ ಕೈಗೊಂಡ ಬೈಡನ್: 4.3 ಶತಕೋಟಿ ಡಾಲರ್ ವಿದ್ಯಾರ್ಥಿ ಸಾಲ ಮನ್ನಾ
Trending
- BIG BOSS7 days ago
ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
- LATEST NEWS5 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್
- BIG BOSS3 days ago
ಚೈತ್ರಾ ಕುಂದಾಪುರಗೆ ಮತ್ತೆ ಜೈಲು.. ಮುಂದಿನ ವಾರಕ್ಕೆ ಕ್ಯಾಪ್ಟನ್ ಯಾರೆಂದು ರಿವೀಲ್..!
- DAKSHINA KANNADA6 days ago
ಸಾವಿರ ಕಂಬದ ಬಸದಿಗೆ ಜಪಾನ್ನಿಂದ ಬಂದ ಅತಿಥಿಗಳು