Connect with us

DAKSHINA KANNADA

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ : ಗಾಯಾಳು ಆಟೋ ಚಾಲಕ ಪುರುಷೋತ್ತಮ ಪೂಜಾರಿ ಗುಣಮುಖ- ಆಸ್ಪತ್ರೆಯಿಂದ ಬಿಡುಗಡೆ – ಪರಿಹಾರ ಮಾತ್ರ ಮರೀಚಿಕೆ.!

Published

on

ದೇಶದವನ್ನೇ ಬೆಚ್ಚಿಬೀಳಿಸಿದ್ದ ಕರಾವಳಿಯ ಕುಕ್ಕರ್ ಬಾಂಬ್ ಸ್ಫೋಟದಿಂದ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಸುಧೀರ್ಘ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಮಂಗಳೂರು : ದೇಶದವನ್ನೇ ಬೆಚ್ಚಿಬೀಳಿಸಿದ್ದ ಕರಾವಳಿಯ ಕುಕ್ಕರ್ ಬಾಂಬ್ ಸ್ಫೋಟದಿಂದ ಗಾಯಗೊಂಡಿದ್ದ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಸುಧೀರ್ಘ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಪುರುಷೋತ್ತಮ ಅವರು ಸೋಂಕಿನಿಂದ ರಕ್ಷಿಸಿಕೊಳ್ಳಲು ಇನ್ನೂ ಕನಿಷ್ಠ ಒಂದು ತಿಂಗಳ ಕಾಲ ಮನೆಯಲ್ಲೇ ಉಳಿದುಕೊಳ್ಳುವಂತೆ ವೈದ್ಯರು ಸೂಚಿಸಿರುವುದಾಗಿ ಅವರ ಮನೆಯವರು ತಿಳಿಸಿದ್ದಾರೆ.

ಪುರುಷೋತ್ತಮ ಅವರ ಮನೆ ದುಃಸ್ಥಿತಿಯಲ್ಲಿದ್ದ ಹಿನ್ನೆಲೆಯಲ್ಲಿ ಗುರು ಬೆಳದಿಂಗಳು ಫೌಂಡೇಶನ್ ಮೂಲಕ ದುರಸ್ತಿ ಕೈಗೊಳ್ಳಲಾಗಿದೆ. ಹೀಗಾಗಿ ಕುಟುಂಬ ಸದ್ಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ.

ಇನ್ನು ಪುರುಷೋತ್ತಮ ಅವರಿಗೆ ಸರಕಾರದಿಂದ ಪರಿಹಾರ ನೀಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದರು.

ಆದರೆ ಪರಿಹಾರ ಮಾತ್ರ ಇನ್ನೂ ಮರೀಚಿಕೆ ಆಗಿದೆ.

ವೈಯಕ್ತಿಕ ನೆಲೆಯಲ್ಲಿ ಗೃಹ ಸಚಿವರು 50,000 ರೂ. ಮತ್ತು ಸುನಿಲ್ ಕುಮಾರ್ 25,000 ರೂ. ನೆರವು ನೀಡಿದ್ದು ಬಿಟ್ರೆ ಸರ್ಕಾರ ನೀಡಬೇಕಾಗಿದ್ದ ಅಧಿಕೃತ ಪರಿಹಾರ ಮೊತ್ತ ಇನ್ನೂ ಕುಟುಂಬದ ಕೈ ಸೇರಿಲ್ಲ.

ಪುರುಷೋತ್ತಮ ಅವರ ಚಿಕಿತ್ಸೆಯ ವೆಚ್ಚವನ್ನು ಇಎಸ್ಐ ಮತ್ತು ಸರಕಾರದ ವತಿಯಿಂದ ಭರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending