Connect with us

DAKSHINA KANNADA

ಮಂಗಳೂರು: ಜನಾಗ್ರಹ ಆಂದೋಲನದ ಡಿಢೀರ್ ಪ್ರತಿಭಟನೆ ತಡೆ ಹಿಡಿದ ಪೊಲೀಸರು..!

Published

on

ಮಂಗಳೂರು : ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಸಮಗ್ರ ಪ್ಯಾಕೇಜ್ ಹಾಗೂ ತುರ್ತು ಕ್ರಮಕ್ಕಾಗಿ ಒತ್ತಾಯಿಸಿ ಉಸ್ತುವಾರಿ ಸಚಿವರು, ಶಾಸಕರ ಕಚೇರಿ ಎದುರು ಜನಾಗ್ರಹ ಆಂದೋಲನದಿಂದ ಖಾಲಿ ಚೀಲಗಳನ್ನು ಸುಡಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮಂಗಳವಾರ ಬೆಳಗ್ಗೆ ಮಂಗಳೂರು ಪೊಲೀಸರು ತಡೆ ಹಿಡಿದರು.
ಪ್ರತಿಭಟನಾಕಾರರು ಪೊಲೀಸ್ ಠಾಣೆಯಿಂದ ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಪೊಲೀಸರು ಅವಕಾಶ ನೀಡಲಿಲ್ಲ.
ನಂತರ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತಲುಪಿದ ಪ್ರತಿಭಟನಾಕಾರರು, ಸಂಸದ ನಳಿನ್‌ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕಾ, ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಜನಪ್ರತಿನಿಧಿಗಳು ಪ್ರತಿಭಟನಾಕಾರರ ಮನವಿಯನ್ನು ಮುಖ್ಯಮಂತ್ರಿಗೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜನಾಗ್ರಹ ಆಂದೋಲನದ ಮುಖಂಡ ಉಮರ್ ಯು.ಎಚ್., ಕೋವಿಡ್ ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ರಾಜ್ಯ ಸರಕಾರವು ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಬೇಕು. ರಾಜ್ಯದ ನೂರಾರು ಗಣ್ಯರು ಹಾಗೂ ಸಾಮಾಜಿಕ ಕಾರ್ಯಕರ್ತರು ಸೇರಿ ಮುಖ್ಯಮಂತ್ರಿಗೆ ಈಗಾಗಲೇ ಮೂರು ಬಾರಿ ಪತ್ರ ಬರೆದಿದ್ದಾರೆ. ಎರಡು ಸುತ್ತಿನ ರಾಜ್ಯವ್ಯಾಪಿ ಪ್ರತಿಭಟನೆಗಳೂ ನಡೆದಿವೆ. ಜನಾಗ್ರಹ, ಜನಪರ ಸಂಘಟನೆಗಳ ಒತ್ತಡಗಳಿಂದಾಗಿ ಎರಡು ಪ್ಯಾಕೇಜ್‌ಗಳನ್ನು ಸರಕಾರ ಘೋಷಿಸಿದೆ. ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದರೆ ಇವು ಏನಕ್ಕೂ ಸಾಲದು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ನೆರೆಹೊರೆಯ ರಾಜ್ಯಗಳಾದ ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಸಮಗ್ರ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಪಕ್ಕದ ರಾಜ್ಯಗಳನ್ನು ಅನುಸರಿಸಿ, ಬಡವರಿಗೆ ಸಮಗ್ರ ಆಹಾರ ಕಿಟ್‌ನ್ನು ಕೊಡಬೇಕು.

ಬಡವರ ಸಂಕಷ್ಟವನ್ನು ನಿವಾರಿಸಬೇಕು. ಲಾಕ್‌ಡೌನ್ ಸಂದರ್ಭ ಸಮಸ್ಯೆಗೆ ಒಳಗಾದವರಿಗೆ ರಾಜ್ಯ ಸರಕಾರ ಸಾಂತ್ವನ ನೀಡಬೇಕು ಎಂದು ಆಗ್ರಹಿಸಿದರು.
‘ಅನಾಥ ಕುಟುಂಬಗಳಿಗೆ ಐದು ಲಕ್ಷ ರೂ. ಪರಿಹಾರ ನೀಡಬೇಕು’, ‘ಲಾಕ್‌ಡೌನ್ ಮಾಡುವುದು ಮಾತ್ರ ಸರಕಾರದ ಕೆಲಸವಲ್ಲ; ಲಾಕ್‌ಆದ ಜನರನ್ನು ಸಲಹುವುದೂ ಸರಕಾರದ ಕರ್ತವ್ಯ’, ಕೋಟ್ಯಾಧೀಶರಿಗೆ ಕೋವಿಡ್ ಸುಂಕ ನಿಗದಿ ಮಾಡಿ ಬಡ ಕುಟುಂಬಗಳಿಗೆ ಸಮಗ್ರ ಪ್ಯಾಕೇಜ್ ಬಿಡುಗಡೆ ಮಾಡಿ’, ‘ರೈತರ ಬಿತ್ತನೆಗೆ ವಿಶೇಷ ಸಬ್ಸಿಡಿ ಕೊಡಲೇಬೇಕು’ ಎನ್ನುವ ಬೇಡಿಕೆಗಳ ಪ್ಲೇಕಾರ್ಡ್‌ಗಳನ್ನು ಈ ವೇಳೆ ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಕ್ರಮ್ ಹಸನ್, ಮನಪಾ ಸದಸ್ಯ ಮುನೀಬ್ ಬೆಂಗ್ರೆ, ಅನ್ವರ್ ಸಾದತ್ ಬಜತ್ತೂರು, ಶರೀಫ್ ಪಾಂಡೇಶ್ವರ, ಸುಹೈಲ್ ಖಾನ್, ಪುರುಷೋತ್ತಮ ಚಿತ್ರಾಪುರ, ನಂದಗೋಪಾಲ ಎಸ್. ಮತ್ತಿತರರು ಉಪಸ್ಥಿತರಿದ್ದರು.

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending