Saturday, March 6, 2021

ಮಂಗಳೂರಿನಲ್ಲಿ ಆಟಿಕೆಯಲ್ಲಿ ಚಿನ್ನ ಸಾಗಾಟ ಮಾಡಿ ಸಿಕ್ಕಿ ಬಿದ್ದ ಭೂಪ..!

ಮಂಗಳೂರಿನಲ್ಲಿ ಆಟಿಕೆಯಲ್ಲಿ ಚಿನ್ನ ಸಾಗಾಟ ಮಾಡಿ ಸಿಕ್ಕಿ ಬಿದ್ದ ಭೂಪ..!

ಮಂಗಳೂರು:ಮಂಗಳೂರಿನಲ್ಲಿ ಮಕ್ಕಳ ಆಟಿಕೆಯಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳ ಬಂಧಿಸಿದ್ದಾರೆ.

ಟ್ರಾಲಿ ಬ್ಯಾಗ್ ನ ಚಕ್ರ ಮತ್ತು ಆಟಿಕೆಯ ಮೋಟಾರ್ ಪ್ಲೇಟ್ ನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವುದನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ದುಬೈನಿಂದ ಮಂಗಳೂರಿಗೆ ನಿನ್ನೆ ಶುಕ್ರವಾರ ಬಂದ ಕಾಸರಗೋಡಿನ ಶೇಕ್ ಹನೀಫ್ (26) ಎಂಬಾತ ಈ ರೀತಿ ಚಿನ್ನ ಸಾಗಿಸುವಾಗ ಸಿಕ್ಕಿಬಿದ್ದಿರುವ ಆರೋಪಿಯಾಗಿದ್ದಾನೆ.

ಈತನನ್ನು ತಪಾಸಣೆ ಮಾಡಿದ ಸಂದರ್ಭದಲ್ಲಿ ಟ್ರಾಲಿ ಬ್ಯಾಗ್​ನ ಚಕ್ರದಲ್ಲಿ ಮತ್ತು ವ್ಯಾಕ್ಯುಮ್ ಕ್ಲೀನರ್ ಆಟಿಕೆಯ ಮೋಟಾರ್ ಪ್ಲೇಟ್​ನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಈತನಿಂದ ರೂ 19,01,460 ಮೌಲ್ಯದ 402 ಗ್ರಾಂ‌ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಈತನನ್ನು ಬಂಧಿಸಿರುವ ಮಂಗಳೂರು ಕಸ್ಟಮ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...