Home ಪ್ರಮುಖ ಸುದ್ದಿ ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆ 25 ಲಕ್ಷ ಮೌಲ್ಯದ ಅಕ್ರಮ ಚಿನ್ನ , ನಿಷೇಧಿತ ಸಿಗರೇಟ್‌ ವಶ..

ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆ 25 ಲಕ್ಷ ಮೌಲ್ಯದ ಅಕ್ರಮ ಚಿನ್ನ , ನಿಷೇಧಿತ ಸಿಗರೇಟ್‌ ವಶ..

ಕಸ್ಟಮ್ಸ್‌ ಅಧಿಕಾರಿಗಳ ಕಾರ್ಯಾಚರಣೆ 25 ಲಕ್ಷ ಮೌಲ್ಯದ ಅಕ್ರಮ ಚಿನ್ನ, ನಿಷೇಧಿತ ಸಿಗರೇಟ್‌ ವಶ..

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಅಕ್ರಮ ಚಿನ್ನ ಪತ್ತೆ ಮಾಡಿದ್ದಾರೆ ದುಬೈಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕನ್ನು ವಶಕ್ಕೆ ಪಡೆದ ಕಸ್ಟಂ ಅಧಿಕಾರಿಗಳು ಸುಮಾರು 25 ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಂಗಳೂರು ಕಸ್ಟಮ್ಸ್ ಜಂಟಿ ಆಯುಕ್ತ ಜಾನಸ್ ಜಾರ್ಜ್ ಮಾಹಿತಿ ನೀಡಿದರು.

ಇಂದು ಮುಂಜಾನೆ 4.30 ಕ್ಕೆ ದುಬೈ ನಿಂದ ಮಂಗಳೂರಿಗೆ ಬಂದ ಏರ್‌ ಇಂಡಿಯಾ ವಿಮಾನದಿಂದ ಇಳಿದ ಕಾಸರಗೋಡು ಮೂಲದ ಪ್ರಯಾಣಿಕನೋರ್ವನನ್ನು ಸಂಶಯದ ಮೇರೆಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ವ್ಯಕ್ತಿಯ ದೇಹದೊಳಗೆ ಇರಿಸಿ ಸಾಗಾಟ ಮಾಡುತ್ತಿದ್ದುದ್ದನ್ನು ಪತ್ತೆ ಹಚ್ಚಿದ್ದಾರೆ.

ಬಂಧಿತನ್ನು ಕಾಸರಗೋಡಿನ ಸೈಪುದ್ದೀನ್ ತೆಕ್ಕೀಲ್ ಫಝೇವಾ ಲಾಫಿಲ್ ಎಂದು ಗುರುತ್ತಿಸಲಾಗಿದ್ದು ಆತನಿಂದ ೨೫ ಲಕ್ಷ ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ ಎಂದರು.
ಮತ್ತೊಂದು ಪ್ರಕರಣದಲ್ಲಿ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ನಿಷೇಧಿತ ಗುಡಂಗ್ ಗರಂ, ಡುನ್ಹಿಲ್ ಸಿಗರೇಟ್‌ ಗಳ 120 ಕರ್ಟಲ್ಸ್‌ ವಶಕ್ಕೆ ಪಡೆದಿದ್ದಾರೆ.

ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಆಗಮಿಸಿದ ವ್ಯಕ್ತಿಯೋರ್ವನಲ್ಲಿ ಈ ಸಿಗರೇಟ್‌ ಬಾಕ್ಸ್‌ಗಳಿದ್ದುವು.

ಕ್ಯಾಲಿಕಟ್ ನಿಂದ ಇದನ್ನು ತರಿಸಿರುವ ಶಂಕೆ ವ್ಯಕ್ಯವಾಗಿದೆ. ಈ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ ಎಂದು ಹೇಳಿದರು.

ವಿಡಿಯೋಗಾಗಿ..

- Advertisment -

RECENT NEWS

ಜೂನ್ 8 ರಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ….!!

 ಶೀತ, ಕೆಮ್ಮು ಇದ್ದವರಿಗೆ ನಮಾಝ್ ಗೆ ಪ್ರವೇಶ ನಿರಾಕರಣೆ ಮಂಗಳೂರು : ರಾಜ್ಯ ಸರಕಾರ ಜೂನ್‌ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ಜೂನ್ 8 ರಿಂದ ಮಸೀದಿಗಳಲ್ಲಿ...

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...

ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸದ್ದು: ಇಂದು 24 ಮಂದಿಗೆ ಕೊರೊನಾ ಸೋಂಕು ದೃಢ…..!!

ದ.ಕ ಜಿಲ್ಲೆಯಲ್ಲಿಂದು 24 ಮಂದಿಗೆ ಕೊರೊನಾ ಪಾಸಿಟಿವ್… ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆ… ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ 24 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...