ಮಂಗಳೂರು ( ಕೊಲ್ಲೂರು ) : ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ವ್ಯವಸ್ಥಾಪನ ಸಮಿತಿ ಸದಸ್ಯರಾಗಿ ಮಂಗಳೂರಿನ ಡಾ। ಅಭಿಲಾಷ್ ಪಿ.ವಿ. ನೇಮಕವಾಗಿದ್ದಾರೆ.
2011ರಿಂದ 17ರ ವರೆಗೆ 2 ಅವಧಿಗೆ ರಾಜೀವ್ ಗಾಂಧಿ ಆರೋಗ್ಯ ವಿ.ವಿ. ಸೆನೆಟ್ ಸದಸ್ಯರಾಗಿದ್ದ ಅವರು ಮೆಸ್ಕಾಂ ನಿರ್ದೇಶಕರಾಗಿ, ಕೇಂದ್ರೀಯ ಸೆನ್ಸಾರ್ ಮಂಡಳಿ ಸದಸ್ಯರಾಗಿ, 2018ರಿಂದ 2021ರ ವರೆಗೆ ಕೊಲ್ಲೂರು ದೇಗುಲದ ಟ್ರಸ್ಟಿಯಾಗಿದ್ದರು. ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ಫಿಸಿಯೋ ಥೆರಪಿಯಲ್ಲಿ ಅಸೋಸಿ ಯೆಟ್ ಪ್ರೊಫೆಸರ್ ಹಾಗೂ ಪಿಆರ್‌ಒ ಆಗಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮಂಗಳೂರು/ಬೆಂಗಳೂರು: ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಈಗಾಗಲೇ ಮುಗಿದಿದ್ದು, ನಾಳೆ ಮತ ಎಣಿಕೆ ನಡೆಯಲಿದ್ದು ಅಭ್ಯರ್ಥಿಗಳ ಸೋಲು, ಗೆಲುವಿನ ಭವಿಷ್ಯ ನಾಳೆ ನಿರ್ಧಾರವಾಗಲಿದೆ.
ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ನವೆಂಬರ್ 23ಕ್ಕೆ ನಿರ್ಧಾರವಾಗಲಿದ್ದು, ಈಗಾಗಲೇ ಎಕ್ಸಿಟ್ ಪೋಲ್ ಸಮೀಕ್ಷೆಯು ಬಂದಿದೆ. ಮೂರು ಕ್ಷೇತ್ರಗಳಲ್ಲಿ 2 ಕ್ಷೇತ್ರವನ್ನು ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಒಂದರಲ್ಲಿ ಕಾಂಗ್ರೇಸ್ ಗೆಲುವು ಸಾಧಿಸಲಿದೆ ಎಂದು ಹೇಳಿದೆ.
ಜಿದ್ದಾಜಿದ್ದಿನ ಕ್ಷೇತ್ರವಾದ ಚೆನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ. ಯೋಗೆಶ್ವರ್ ಸೋಲಲಿದ್ದು, ಬಿಜೆಪಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಕಾಣಲಿದ್ದಾರೆ ಎಂಬ ಲೆಕ್ಕಚಾರವಿದೆ. ಹೀಗಾಗಿ ಜೆಡಿಎಸ್ ತನ್ನ ಭದ್ರಕೋಟೆಯನ್ನು ಉಳಿಸಿಕೊಳ್ಳುವ ನಿರೀಕ್ಷೆ ಇದೆ. ಆದರೆ ಕಾಂಗ್ರೇಸ್ ನ ಡಿಕೆ ಬ್ರದರ್ಸ್ ಗೆ ಚನ್ನಪಟ್ಟಣ ಕ್ಷೇತ್ರ ತಮ್ಮ ಪ್ರತಿಷ್ಥೆಯ ಕಣವಾಗಿದೆ.
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆ ಇದೆ. ಈ ಮೂಲಕ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ ಸ್ಪರ್ಧಿಸಿದ್ದ ಅನ್ನಪೂರ್ಣ ತುಕರಾಂ ಜಯ ಗಳಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳುತ್ತಿದೆ. ಈ ಮೂಲಕ ಕಾಂಗ್ರೆಸ್ ತನ್ನ ಭದ್ರ ಕೋಟೆಯನ್ನು ಉಳಿಸಿಕೊಂಡಂತಾಗುತ್ತದೆ.
ಮುಸ್ಲಿಂ ಪ್ರಾಬಲ್ಯವಿರುವ ಶಿಗ್ಗಾಂವಿ ಕ್ಷೇತ್ರದಲ್ಲಿ ಲಿಂಗಾಯುತರ ಮತಗಳೇ ನಿರ್ಣಾಯಕವಾಗಿದೆ. ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿ ಬಿಜೆಪಿ ಆಭ್ಯರ್ಥಿಯಾಗಿ ಸ್ಪರ್ಧಿಸಿದರೆ, ಅವರ ವಿರುದ್ದ ಕಾಂಗ್ರೆಸ್ ನ ಯಾಸಿರ್ ಅಹಮಾದ್ ಖಾನ್ ಪಠಣ್ ಸ್ಪರ್ಧಿಸಿದ್ದಾರೆ. ಈ ಬಾರಿ ಶಿಗ್ಗಾಂವಿಯಲ್ಲಿ ಮತದಾರರು ಬಿಜೆಪಿಯತ್ತ ವಾಲಿದ್ದಾರೆ. ಆ ಮೂಲಕ ಭರತ್ ಬೊಮ್ಮಾಯಿ ಗೆಲ್ಲುವ ಸಾಧ್ಯತೆ ಇದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದೆ.
ಒಂದು ಕಡೆ ಕಾಂಗ್ರೆಸ್ ಗೆ ಈ ಉಪಚುನಾವಣೆಯ ಗೆಲುವು ಪ್ರತಿಷ್ಠೆಯ ಕಣವಾದರೆ, ಬಿಜೆಪಿ- ಜೆಡಿಎಸ್ ಗೆ ಮೂರು ಕ್ಷೇತ್ರವನ್ನು ಗೆಲ್ಲುವುದರ ಮೂಲಕ ಸರ್ಕಾರದ ವೈಫಲ್ಯವನ್ನು ತೋರಿಸುವ ಪ್ರಯತ್ನವಾಗಲಿದೆ. ಇದಕ್ಕೆಲ್ಲಾ ನಾಳೆಯ ಫಲಿತಾಂಶ ಉತ್ತರ ನೀಡಲಿದೆ.
ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿಯೊಂದು ಪಲ್ಟಿಯಾದ ಘಟನೆ ಉಡುಪಿಯ ಅಂಬಾಗಿಲು – ಪೆರಂಪಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ.
ಘಟನೆಯ ಸಂದರ್ಭ ಸ್ಥಳದಲ್ಲಿ ಯಾವುದೇ ವಾಹನ ಇರದೇ ಇದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಸಿಮೆಂಟ್ ರೆಡಿಮಿಕ್ಸ್ ಲಾರಿ ಅಂಬಾಗಿಲಿನಿಂದ ಮಣಿಪಾಲದ ಕಡೆಗೆ ತೆರಳುತ್ತಿತ್ತು.
ಬೆಂಗಳೂರು: ಇನ್ಮುಂದೆ ಟ್ರಾಫಿಕ್ ಸಮಸ್ಯೆಗೆ ಮುಕ್ತಿ! ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಉಬರ್‌ನಿಂದ ಹೊಸ ಯೋಜನೆ. ಹೌದು, ಬೆಂಗಳೂರು ಎಂದಾಕ್ಷಣ ತಟ್ಟನೆ ನೆನಪಾಗುವುದು ಟ್ರಾಫಿಕ್ ಜಾಮ್.. ಇದನ್ನು ಗಮನದಲ್ಲಿಟ್ಟುಕೊಂಡು ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸಲು ಉಬರ್ ಹೊಸ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಶೀಘ್ರವೇ ಬೆಂಗಳೂರಿನಲ್ಲಿ ಉಬರ್ ಶಟಲ್ ಬಸ್ ಸೇವೆಯನ್ನು ಪರಿಚಯಿಸುತ್ತಿದೆ. ಈ ಬಗ್ಗೆ ಈಗಾಗಲೇ ಘೋಷಣೆ ಕೂಡ ಮಾಡಲಾಗಿದೆ. ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ. ದೆಹಲಿ, ಕೋಲ್ಕತ್ತಾ ಬಳಿಕ ಬೆಂಗಳೂರಿನಲ್ಲಿ ಈ ಉಬರ್ ಶಟಲ್ ಬಸ್ ಸೇವೆ ಜಾರಿಗೆ ಬರುತ್ತಿದೆ.
ಈ ಬಗ್ಗೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಜಾಗತಿಕ ರೈಡ್-ಹೇಲಿಂಗ್ ಸಂಸ್ಥೆಯ ಭಾರತದಲ್ಲಿನ ಹೊಸ ಕೊಡುಗೆಯಾದ ಉಬರ್ ಷಟಲ್ ಅನ್ನು ಅವರು ಪರಿಶೀಲಿಸಿದರು.ಈಗಲೇ ದೆಹಲಿ ಮತ್ತು ಕೋಲ್ಕತ್ತಾದಲ್ಲಿ ಉಬರ್ ಷಟಲ್ ಅನ್ನು ಪ್ರಾರಂಭಿಸಲಾಗಿದೆ, ಹೆಚ್ಚಿನ ಜನರು ತಮ್ಮ ಪ್ರಯಾಣಗಾಗಿ ದೊಡ್ಡ ವಾಹನಗಳಲ್ಲಿ ಕಾಯ್ದಿರಿಸಲು ಸಹಾಯ ಮಾಡುತ್ತದೆ. ಇದು ನಿಗದಿತ ಮಾರ್ಗಗಳಲ್ಲಿ ಚಲಿಸುತ್ತದೆ ಮತ್ತು ಮುಂಚಿತವಾಗಿ ಬುಕ್ ಮಾಡಿದ ಸೀಟುಗಳನ್ನು ನೀಡುತ್ತದೆ.
ಉಬರ್ ಶಟಲ್ ಬಸ್ ಸೇವೆಯಿಂದ ಟ್ರಾಫಿಕ್ ದಟ್ಟಣೆಯನ್ನು ನಿಭಾಯಿಸಲು ಮತ್ತು ಬೆಂಗಳೂರಿನಂತಹ ನಗರಗಳಿಗೆ ಇದು ಉತ್ತಮವಾಗಿದೆ. ಹೆಚ್ಚು ಪರಿಣಾಮಕಾರಿ ಸಾರಿಗೆ ವ್ಯವಸ್ಥೆಯನ್ನು ರಚಿಸಲು ತಂತ್ರಜ್ಞಾನ ಆಧಾರಿತ ಪರಿಹಾರಗಳ ಅಗತ್ಯವನ್ನು ಖರ್ಗೆ ಪ್ರತಿಪಾದಿಸಿದ್ದಾರೆ ಎಂದು ಉಬರ್ ಹೇಳಿಕೆಯಲ್ಲಿ ತಿಳಿಸಿದೆ.
ಉಬರ್ ಇಂಡಿಯಾದ ಅಧ್ಯಕ್ಷ ಪ್ರಭಜೀತ್ ಸಿಂಗ್ ಅವರು ಈ ಹಿಂದೆ ಕಂಪನಿಯು “ಬೆಂಗಳೂರಿನಲ್ಲಿ ಬಸ್ ಸೇವೆಯನ್ನು ಪ್ರಾರಂಭಿಸಲು ಬಹು ಮಧ್ಯಸ್ಥಗಾರರೊಂದಿಗೆ ಸಕ್ರಿಯ ಮಾತುಕತೆ ನಡೆಸುತ್ತಿದೆ” ಎಂದು ಹೇಳಿದ್ದರು. “ಈ ರೀತಿಯ ಸೇವೆಯನ್ನು ಪ್ರಾರಂಭಿಸಲು ನಮಗೆ ನಿಯಂತ್ರಣದ ಅಗತ್ಯವಿದೆ ಮತ್ತು ಅದನ್ನು ಸ್ವೀಕರಿಸಲು ನಮಗೆ ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದರು. “ನಿಯಂತ್ರಕರು ನಮಗೆ ಅವಕಾಶ ಮಾಡಿಕೊಡುತ್ತಾರೆ ಎಂದು ಭಾವಿಸಿ ನಾವು ಉಬರ್ ಬಸ್ ಅನ್ನು ಬೆಂಗಳೂರಿಗೆ ತರಲು ಸಾಧ್ಯವಾಗುತ್ತದೆ ಎಂದು ಖಚಿತಪಡಿಸಿಕೊಳ್ಳುವುದು ನನ್ನ ಉತ್ಸಾಹದ ಯೋಜನೆಯಾಗಿದೆ, ಆದರೆ ಇದು ಗ್ರಾಹಕರು ಬಯಸಿದ ರೀತಿಯಲ್ಲಿ ನಾವು ತಿರುಗುತ್ತಿರುವ ಸ್ಥಳೀಕರಣದ ಪ್ರಯಾಣವನ್ನು ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಸಿಂಗ್ ಪ್ರಕಾರ, ಶಟಲ್ ಸೇವೆಯು ಹೆಬ್ಬಾಳದಿಂದ ಮತ್ತು ಹೊರವರ್ತುಲ ರಸ್ತೆಯಲ್ಲಿರುವ ಟೆಕ್ ಹಬ್‌ನವರೆಗೆ ಚಲಿಸಬಹುದು.