DAKSHINA KANNADA
ಮಂಗಳೂರು ಡ್ರಗ್ ಪೂರೈಕೆ, ಸೇವನೆ ಪ್ರಕರಣ : ವೈದ್ಯರು- ಮೆಡಿಕಲ್ ವಿದ್ಯಾರ್ಥಿಗಳ ಬಂಧನ, ಪೊಲೀಸ್ ಕಮಿಷನರ್ ನಡೆಗೆ ತೀವ್ರ ವಿರೋಧ..!
Published
2 years agoon
By
Adminಮಂಗಳೂರು : ಮಂಗಳೂರಿನಲ್ಲಿ ಡ್ರಗ್ ಪೂರೈಕೆ ಮತ್ತು ಸೇವನೆಯಲ್ಲಿ ಸಿಕ್ಕಿ ಬಿದ್ದ ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ವಿದ್ಯಾರ್ಥಿಗಳನ್ನು ಸೂಕ್ತ ವಿಚಾರಣೆ ನಡೆಸದೇ ಮಂಗಳೂರು ನಗರ ಪೊಲೀಸ್ ಕಮಿಷನರ್ ಕರ್ತವ್ಯಲೋಪ ಎಸಗಿದ್ದಾರೆ ಎಂದು ನ್ಯಾಯವಾದಿ ಹಾಗು ಬಾರ್ ಅಸೋಸಿಯೇಶನ್‌ನ ಉಪಾಧ್ಯಕ್ಷ ಮನೋ ರಾಜ್ ಮತ್ತು ವಿಧಿವಿಜ್ಞಾನ ತಜ್ಞ ಡಾ ಮಹಬಲೇಶ್ ಶೆಟ್ಟಿ ಆರೋಪಿಸಿದ್ದಾರೆ.
ಮಂಗಳೂರಿನ ಪತ್ರಿಕಾ ಭವನದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಇಬ್ಬರೂ, ನಗರ ಪೊಲೀಸ್ ಕಮಿಷನರ್ ಅವರ ನಡೆಯನ್ನು ಟೀಕಿಸಿದ್ದಾರೆ.
ವಶಕ್ಕೆ ಪಡೆದುಕೊಂಡ ಆರೋಪಿಗಳನ್ನು ಕಮಿಷನರ್ ಅವರು ಸರಿಯಾಗಿ ವಿಚಾರಣೆ ಮಾಡಿದ್ದಾರೋ ಇಲ್ಲವೋ ಎಂಬ ಬಗ್ಗೆ ನಮಗೆ ಡೌಟ್ ಇದೆ.
ಕೆಲವೊಂದು ಪ್ರೊಸೀಜರ್ ಲ್ಯಾಪ್ಸ್ ಆಗಿದೆ. ನಮಗೆ ಕೆಲವೊಂದು ಅನುಮಾನಗಳಿವೆ.
ಅವರು ಡ್ರಗ್ ಸೇವನೆ ಮಾತ್ರ ಮಾಡಿದ್ದರೆ ಅವರನ್ನು ರಿಹ್ಯಾಬ್ಲಿಟೇಶನ್ ಸೆಂಟರ್ ಗೆ ಕಳುಹಿಸಬೇಕಾಗಿತ್ತು.
ಈ ಪ್ರಕರಣದ ಬಗ್ಗೆ ನಾವು ಹೈಕೋರ್ಟ್‌ಗೆ ರಿಟ್ ಹಾಕಲಿಕ್ಕೆ ರೆಡಿ ಆಗಿದ್ದೇವೆ. ಹಾಲಿ ನ್ಯಾಯಾಧೀಶರಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಮನವಿ ಮಾಡುತ್ತಿದ್ದೇವೆ ಎಂಧರು.
ಕಮಿಷನರ್ ಅವರು ಡ್ರಗ್ ಅಬ್ಯೂಶರನ್ನು(abuser) ಪೆಡ್ಲರ್ ಎಂದು ಹೇಳಿದ್ದಾರೆ.
20 ದಿನ ಕಾಲ ಬಂಧನದಲ್ಲಿಟ್ಟಿದ್ದಾರೆ. ವಿದ್ಯಾರ್ಥಿಗಳ, ಅವರ ತಂದೆ ತಾಯಿಯರ ವಿವರಣೆ ಪತ್ರಿಕೆಗಳಿಗೆ ಕೊಟ್ಟು ಅವರ ಪ್ರತಿಷ್ಟೆ ಹಾಳಾಗಿದೆ.
ನಿಜವಾಗಿಯೂ ಈ ಪ್ರಕರಣದಲ್ಲಿ ತಪ್ಪಿತಸ್ಥರಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ ನಮ್ಮ ಅಡ್ಡಿ ಏನೂ ಇಲ್ಲ. ಆದರೆ ಅಮಾಯಕರನ್ನು ಕಸ್ಟಡಿಗೆ ಕಳಿಸಿರುವುದು ಸರಿಯಲ್ಲ ಎಂದು ಹರಿಹಾಯ್ದಿದ್ದಾರೆ.
ಮಂಗಳೂರು ಪೊಲೀಸರ ಈ ಕ್ರಮ ಬಗ್ಗೆ ನಾವು ಉಚ್ಚ ನ್ಯಾಯಾಲಯದ ಕದ ತಟ್ಟಿ ನ್ಯಾಯಾಕ್ಕಾಗಿ ಮನವಿ ಮಾಡಲಿದ್ದೇವೆ ಮತ್ತು ಪ್ರಕರಂ ಸಮಗ್ರ ತನಿಖೆಗೆ ಒತ್ತಾಯ ಮಾಡಲಿದ್ದೇವೆ ಎಂದರು.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
1 day agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
ಹೊಸ ಟ್ರೆಂಡ್ನ ಪ್ಯಾಂಟ್ ಧರಿಸಿದ ಯುವಕ; ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ; ವರದಿ ನಿರಾಕರಿಸಿದ ಕೆನಡಾ ಸರ್ಕಾರ
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
ನಾಳೆ ಉಪಚುನಾವಣೆಯ ಮತಎಣಿಕೆ: ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
WATCH VIDEO : ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ಲಾರಿ ಪಲ್ಟಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LIFE STYLE AND FASHION1 day ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
Dr prakyatha shetty
24/01/2023 at 4:36 PM
What’s so wrong in what police has done.. Wrong is a wrong whoever does it and if a doctor does it he should by punished the worst more than a common man actually
Dr prakyatha shetty
24/01/2023 at 4:37 PM
Will these people make press meet if a common man is taken into custody? Degree has no connection to the crime they commit