Connect with us

DAKSHINA KANNADA

ಮಂಗಳೂರು ಡ್ರಗ್‌ ಪೂರೈಕೆ, ಸೇವನೆ ಪ್ರಕರಣ : ವೈದ್ಯರು- ಮೆಡಿಕಲ್ ವಿದ್ಯಾರ್ಥಿಗಳ ಬಂಧನ, ಪೊಲೀಸ್ ಕಮಿಷನರ್ ನಡೆಗೆ ತೀವ್ರ ವಿರೋಧ..!

Published

on

ಮಂಗಳೂರು :  ಮಂಗಳೂರಿನಲ್ಲಿ ಡ್ರಗ್ ಪೂರೈಕೆ ಮತ್ತು ಸೇವನೆಯಲ್ಲಿ ಸಿಕ್ಕಿ ಬಿದ್ದ ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ವೈದ್ಯರು ಮತ್ತು ವಿದ್ಯಾರ್ಥಿಗಳನ್ನು ಸೂಕ್ತ ವಿಚಾರಣೆ ನಡೆಸದೇ ಮಂಗಳೂರು ನಗರ ಪೊಲೀಸ್ ಕಮಿಷನರ್‌ ಕರ್ತವ್ಯಲೋಪ ಎಸಗಿದ್ದಾರೆ ಎಂದು ನ್ಯಾಯವಾದಿ ಹಾಗು ಬಾರ್ ಅಸೋಸಿಯೇಶನ್‌ನ ಉಪಾಧ್ಯಕ್ಷ ಮನೋ ರಾಜ್‌ ಮತ್ತು ವಿಧಿವಿಜ್ಞಾನ ತಜ್ಞ ಡಾ ಮಹಬಲೇಶ್‌ ಶೆಟ್ಟಿ ಆರೋಪಿಸಿದ್ದಾರೆ.

ಮಂಗಳೂರಿನ ಪತ್ರಿಕಾ ಭವನದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಇಬ್ಬರೂ, ನಗರ ಪೊಲೀಸ್ ಕಮಿಷನರ್ ಅವರ ನಡೆಯನ್ನು ಟೀಕಿಸಿದ್ದಾರೆ.

ವಶಕ್ಕೆ ಪಡೆದುಕೊಂಡ ಆರೋಪಿಗಳನ್ನು ಕಮಿಷನರ್ ಅವರು ಸರಿಯಾಗಿ ವಿಚಾರಣೆ ಮಾಡಿದ್ದಾರೋ ಇಲ್ಲವೋ ಎಂಬ ಬಗ್ಗೆ ನಮಗೆ ಡೌಟ್ ಇದೆ.

ಕೆಲವೊಂದು ಪ್ರೊಸೀಜರ್ ಲ್ಯಾಪ್ಸ್ ಆಗಿದೆ. ನಮಗೆ ಕೆಲವೊಂದು ಅನುಮಾನಗಳಿವೆ.

ಅವರು ಡ್ರಗ್‌ ಸೇವನೆ ಮಾತ್ರ ಮಾಡಿದ್ದರೆ ಅವರನ್ನು ರಿಹ್ಯಾಬ್ಲಿಟೇಶನ್ ಸೆಂಟರ್ ಗೆ ಕಳುಹಿಸಬೇಕಾಗಿತ್ತು.

ಈ ಪ್ರಕರಣದ ಬಗ್ಗೆ ನಾವು ಹೈಕೋರ್ಟ್‌ಗೆ ರಿಟ್‌ ಹಾಕಲಿಕ್ಕೆ ರೆಡಿ ಆಗಿದ್ದೇವೆ. ಹಾಲಿ ನ್ಯಾಯಾಧೀಶರಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಮನವಿ ಮಾಡುತ್ತಿದ್ದೇವೆ ಎಂಧರು.

ಕಮಿಷನರ್ ಅವರು  ಡ್ರಗ್ ಅಬ್ಯೂಶರನ್ನು(abuser)  ಪೆಡ್ಲರ್ ಎಂದು ಹೇಳಿದ್ದಾರೆ.

20 ದಿನ ಕಾಲ ಬಂಧನದಲ್ಲಿಟ್ಟಿದ್ದಾರೆ. ವಿದ್ಯಾರ್ಥಿಗಳ, ಅವರ ತಂದೆ ತಾಯಿಯರ ವಿವರಣೆ ಪತ್ರಿಕೆಗಳಿಗೆ ಕೊಟ್ಟು ಅವರ ಪ್ರತಿಷ್ಟೆ ಹಾಳಾಗಿದೆ.

ನಿಜವಾಗಿಯೂ ಈ ಪ್ರಕರಣದಲ್ಲಿ ತಪ್ಪಿತಸ್ಥರಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ ನಮ್ಮ ಅಡ್ಡಿ ಏನೂ ಇಲ್ಲ. ಆದರೆ ಅಮಾಯಕರನ್ನು ಕಸ್ಟಡಿಗೆ ಕಳಿಸಿರುವುದು ಸರಿಯಲ್ಲ ಎಂದು ಹರಿಹಾಯ್ದಿದ್ದಾರೆ.

ಮಂಗಳೂರು ಪೊಲೀಸರ ಈ ಕ್ರಮ ಬಗ್ಗೆ ನಾವು ಉಚ್ಚ ನ್ಯಾಯಾಲಯದ ಕದ ತಟ್ಟಿ ನ್ಯಾಯಾಕ್ಕಾಗಿ ಮನವಿ ಮಾಡಲಿದ್ದೇವೆ ಮತ್ತು ಪ್ರಕರಂ ಸಮಗ್ರ ತನಿಖೆಗೆ ಒತ್ತಾಯ ಮಾಡಲಿದ್ದೇವೆ ಎಂದರು.

2 Comments

2 Comments

  1. Dr prakyatha shetty

    24/01/2023 at 4:36 PM

    What’s so wrong in what police has done.. Wrong is a wrong whoever does it and if a doctor does it he should by punished the worst more than a common man actually

  2. Dr prakyatha shetty

    24/01/2023 at 4:37 PM

    Will these people make press meet if a common man is taken into custody? Degree has no connection to the crime they commit

Leave a Reply

Your email address will not be published. Required fields are marked *

DAKSHINA KANNADA

ನರ್ಸ್‌ಗೆ ಶಾಕ್ ನೀಡಿದ ಅಂಬ್ಯುಲೆನ್ಸ್‌..! ಇದು ಮನಕಲಕುವ ಘಟನೆ..!

Published

on

ನಿರಂಜಿನಿ… ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿರೋ ಆಸ್ಪತ್ರೆಯ ತುರ್ತು ಸೇವಾ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಯುವತಿ. ಮುಂಜಾನೆ ಆಸ್ಪತ್ರೆಗೆ ಬಂದ್ರೆ ಡ್ಯೂಟಿ ಮುಗಿಸಿ ಮತ್ತೆ ಮನೆಗೆ ವಾಪಾಸಾಗೋದು ಸಂಜೆಯ ವೇಳೆಗೆ. ಆಸ್ಪತ್ರೆಯಲ್ಲಿರೋ ಆಕೆಗೆ ಸಾವು ನೋವು ಎಲ್ಲವನ್ನೂ ನೋಡಿ ಅಭ್ಯಾಸ ಆಗಿದೆ. ಆದ್ರೆ ಇಂದು ಮಾತ್ರ ಅಂಬ್ಯುಲೆನ್ಸ್‌ನಲ್ಲಿ ಬಂದಿರೋ ಮೃತ ದೇಹ ನೋಡಿ ಆಕೆಯ ಆಕ್ರಂದನ ಮುಗಿಲು ಮುಟ್ಟಿದೆ. ಆಕೆಯ ಆಕ್ರಂದನ ನೋಡಿ ಶಾಕ್ ಆದ ಇತರ ಸಿಬ್ಬಂದಿ ವಿಚಾರ ತಿಳಿದ ಬಳಿಕ ತಾವೂ ಕಂಬನಿ ಮಿಡಿದಿದ್ದಾರೆ.

ಇಂದು ನಿರಂಜಿನಿ ಆಸ್ಪತ್ರೆಗೆ ಬಂದು ತುರ್ತು ಚಿಕಿತ್ಸಾ ವಿಭಾಗದಲ್ಲಿ ಡ್ಯೂಟಿಯಲ್ಲಿದ್ದ ವೇಳೆ ಅಂಬ್ಯುಲೆನ್ಸ್ ಒಂದು ವೇಗವಾಗಿ ಬಂದು ಗಂಭೀರವಾಗಿದ್ದ ಇಬ್ಬರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ಶಿಫ್ಟ್‌ ಮಾಡಿದೆ. ದೇಹ ಜರ್ಜರಿತವಾಗಿದ್ದ ಒಂದು ದೇಹವನ್ನು ಅಂಬ್ಯುಲೆನ್ಸ್‌ನಿಂದ ಇಳಿಸಿದಾಗ ಅದಾಗಲೇ ಆ ವ್ಯಕ್ತಿಯ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಮತ್ತೊಂದು ಮಹಿಳೆಯೂ ಗಂಭೀರವಾಗಿದ್ದು ತಕ್ಷಣ ಅವರನ್ನು ತುರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಮೃತ ದೇಹವನ್ನು ನೋಡಿದ ನಿರಂಜನಿ ಇದ್ದಕ್ಕಿದ್ದಂತೆ ಜೋರಾಗಿ ಅಳಲು ಆರಂಭಿಸಿದ್ದಾಳೆ. ಆಕೆಯ ಅಳುವಿಗೆ ಕಾರಣವಾಗಿದ್ದು ಅಲ್ಲಿದ್ದ ಮೃತ ದೇಹ ಆಕೆಯ ತಂದೆಯದೇ ಆಗಿದ್ದು.

ಮುಂಜಾನೆ ತಂದೆ ತಾಯಿ ಇಬ್ಬರೂ ಅಜ್ಜಾವರ ಗ್ರಾಮದಲ್ಲಿನ ಕೆಎಫ್‌ಡಿಸಿಗೆ ಕೆಲಸಕ್ಕೆ ಹೋಗಿ ವಾಪಾಸಾಗುವಾಗ ಜೀಪ್ ಒಂದು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.  ಜೀಪ್ ಅಡಿಗೆ ಬಿದ್ದಿದ್ದ ತಂದೆ ವಿನಾಯಕ ಮೂರ್ತಿ ಮೃ*ತ ಪಟ್ಟಿದ್ದರೆ, ತಾಯಿ ಮಂಜುಳ ಕೂಡಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ಇದ್ಯಾವುದು ವಿಚಾರ ಗೊತ್ತಿಲ್ಲದ ನಿರಂಜಿನಿ ಎಂದಿನಂತೆ ಇದೂ ಒಂದು ಅಕ್ಸಿಡೆಂಟ್ ಕೇಸ್ ಅಂತ ಅಟೆಂಡ್ ಮಾಡಲು ಹೋಗಿದ್ದಾಳೆ. ಅಂಬ್ಯುಲೆನ್ಸ್‌ನಲ್ಲಿ ತಂದೆಯ ಮೃತ ದೇಹ ಹಾಗೂ ಪ್ರಜ್ಞಾ ಹೀನ ಸ್ಥಿತಿಯಲ್ಲಿ ತಾಯಿಯನ್ನ ನೋಡಿದ್ರೆ ಮಗಳ ಪರಿಸ್ಥಿತಿ ಹೇಗಿರಬಹುದು ಅನ್ನೋದು ಊಹಿಸಲೂ ಅಸಾದ್ಯ. ತಾಯಿ ಮಂಜುಳ ಪರಿಸ್ಥಿತಿ ಕೂಡಾ ಗಂಭೀರವಾಗಿದ್ದು, ಬೆನ್ನು ಮೂಳೆಗೆ ಗಾಯವಾದ ಮಾಹಿತಿ ಇದೆ. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

DAKSHINA KANNADA

ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?

Published

on

ಮಂಗಳೂರು : ಕೆಲವೊಮ್ಮೆ ನಾವು ಕೆಟ್ಟ ಮಾತುಗಳನ್ನಾಡುವಾಗ ನಮ್ಮ ಹಿರಿಯರು ತಡೆಯುತ್ತಾರೆ. ಬಿಡ್ತು ಅಂತಾ ಹೇಳು ಎಂದು ಹೇಳಿದ ಅನುಭವ ನಿಮಗೂ ಆಗಿರಬಹುದು. ನಮ್ಮ ಹಿರಿಯರು ಹೇಳುವ ಪ್ರಕಾರ ನಾವು ಕೆಟ್ಟ ಮಾತುಗಳನ್ನಾಡುವಾಗ ಅಶ್ವಿನಿ ದೇವತೆಗಳು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುತ್ತಾರೆ. ಈ ಕಾರಣಕ್ಕಾಗಿ ಅವರು ನಾವು ಬೇಜಾರಲ್ಲಿ ಏನಾದರೂ ತಪ್ಪಿ ಮಾತನಾಡಿದಾಗ ಬಿಡ್ತು ಎಂದು ಹೇಳುವಂತೆ ನಮಗೆ ಹೇಳುತ್ತಿದ್ದರು. ಹಾಗಾದರೆ ಈ ಅಸ್ತು ದೇವತೆಗಳು ಯಾರು.? ಇವರು ಅಸ್ತು ಅಂದಾಕ್ಷಣ ನಾವು ಆಡಿದ ಮಾತುಗಳು ನಿಜವಾಗುತ್ತದೆಯೇ..?

ಅಶ್ವಿನಿ ದೇವತೆಗಳು ಯಾರು.?

ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಭಗವಾನ್‌ ಸೂರ್ಯ ದೇವನಿಗೆ ಮತ್ತು ಸಂಧ್ಯಾದೇವಿಗೆ ಜನಿಸಿದ ಅವಳಿ ಮಕ್ಕಳು. ಇವರು ಅದೃಷ್ಟದ ದೇವತೆಗಳಾಗಿದ್ದು, ಅಸ್ತು ಅಸ್ತು ಎಂದು ಸದಾ ಪಠಿಸುವ ದೇವರು. ಇವರನ್ನು ಅಶ್ವಿನಿ ಕುಮಾರರೆಂದು, ದೇವತೆಗಳ ವೈದ್ಯರೆಂದು ಪರಿಗಣಿಸಲಾಗುತ್ತದೆ. ಅಶ್ವಿನಿ ದೇವತೆಗಳ ರೂಪವೇ ವಿಚಿತ್ರ. ಯಾಕೆಂದರೆ ಈ ಅವಳಿ ಅಶ್ವಿನಿ ಕುಮಾರರದ್ದು ಮಾನವ ದೇಹವಾದರೆ, ಕುದುರೆಯ ಮುಖ. ಆದರೂ ನೋಡಲು ಅತ್ಯಂತ ಆಕರ್ಷಕರಾಗಿದ್ದರು.

ಅಶ್ವಿನಿ ದೇವತೆಗಳಿಗೆ ಕುದುರೆ ಮುಖ ಬರಲು ಕಾರಣವೇನು.?

ಒಮ್ಮೆ ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ದೇವನ ತಾಪವನ್ನು ತಡೆಯಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾಳೆ. ಇದನ್ನು ನೋಡಿದ ಸೂರ್ಯ ದೇವನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗುತ್ತಾನೆ. ಆಗ ಸಂಧ್ಯಾ ದೇವಿಯು ಸೂರ್ಯದೇವನು ನನಗಾಗಿ ತನ್ನ ತಾಪವನ್ನು ಇನ್ನೂ ಕಡಿಮೆ ಮಾಡಿಕೊಂಡರೆ ಜಗತ್ತಿನಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿ, ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿಯನ್ನು ಪಡೆದುಕೊಳ್ಳಲು ಹೋಗುತ್ತಾಳೆ.

ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ಹೋಗುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾನು ಕೂಡ ಕುದುರೆಯ ರೂಪವನ್ನು ತೆಗೆದುಕೊಳ್ಳುತ್ತಾನೆ. ಅಶ್ವಗಳ ಅವತಾರದಲ್ಲಿ ಇವರಿಬ್ಬರ ನಡುವೆ ನಡೆದ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ದೇವತೆಗಳು. ಹಾಗಾಗಿ ಅವರಿಗೆ ಹುಟ್ಟಿದ ಮಕ್ಕಳಿಗೂ ಕುದುರೆಯ ಮುಖ ಇರುತ್ತದೆ. ಇನ್ನು ಕೆಲವು ಕಥೆಗಳಲ್ಲಿ ಅಶ್ವಿನಿ ದೇವತೆಗಳು ಸೂರ್ಯ ಮತ್ತು ಮೋಡದ ಪುತ್ರರು ಎಂದು ಹೇಳಲಾಗಿದೆ.

ಅಶ್ವಿನಿ ದೇವತೆಗಳ ಮಹತ್ವ:

ಅಶ್ವಿನಿ ದೇವತೆಗಳಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನವನ್ನು ನೀಡಲಾಗಿದೆ. ಮುಸ್ಸಂಜೆ ಸಮಯವನ್ನು ಅಂದರೆ ಸೂರ್ಯ ಮುಳುಗುವುದಕ್ಕಿಂತ ಮೊದಲು 24 ನಿಮಿಷಗಳನ್ನು ಅಶ್ವಿನಿ ದೇವತೆಗಳ ಸಮಯವೆಂದು ಹೇಳುತ್ತಾರೆ. ಈ ಸಮಯದಲ್ಲಿ ಅಶ್ವಿನಿ ದೇವತೆಗಳು ಚಿನ್ನದ ಕುದುರೆಯಲ್ಲಿ ಸಂಚಾರವನ್ನು ಮಾಡುತ್ತಾರೆ ಎನ್ನುವುದು ನಂಬಿಕೆ. ಈ ಸಮಯದಲ್ಲಿ ಅಪಶಕುನದಂತಹ ಮಾತುಗಳನ್ನು ಆಡಬಾರದು, ಸುಳ್ಳನ್ನು ಹೇಳಬಾರದು, ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹ ಪದಗಳನ್ನು ಬಳಸಬಾರದು, ಮಲಗಬಾರದು ಎಂದು ಹೇಳಲಾಗುತ್ತದೆ. ಅಶ್ವಿನಿ ದೇವತೆಗಳು ಅಸ್ತು, ಅಸ್ತು ಎಂದು ನುಡಿಯುತ್ತಿರುತ್ತಾರೆ. ನಾವು ಒಂದು ವೇಳೆ ಅಪಶಕುನ ಮಾತನಾಡಿದಾಗ ಅವರು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಯಾವಾಗಲೂ ನಾವು ಒಳ್ಳೆಯದನ್ನೇ ಮಾತನಾಡಬೇಕು.

ಒಟ್ಟಾರೆಯಾಗಿ ಹೇಳುವುದಾದರೆ ಅಶ್ವಿನಿ ದೇವತೆಗಳು ನಾವು ಒಳ್ಳೆಯದನ್ನ ಮಾತನಾಡಿದರೆ ಒಳ್ಳೆಯದೇ ಬಯಸುತ್ತಾರೆ ಹಾಗೆಯೇ ಕೆಟ್ಟದ್ದನ್ನೇ ಮಾತನಾಡಿದರೇ ಕೆಟ್ಟದ್ದು ಬಯಸುತ್ತಾರೆ ಎನ್ನುವುದು ಜನರ ನಂಬಿಕೆ.

Continue Reading

DAKSHINA KANNADA

ವೋಟ್ ಮಾಡಿ, ಊಟ ಮಾಡಿ: ಹೋಟೆಲ್‌ಗಳಲ್ಲಿ ಸಿಗಲಿದೆ ಫ್ರೀ ದೋಸೆ, ಸಿಹಿ ತಿಂಡಿ!

Published

on

ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್‌ಗಳು ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನ ಚುನಾವಣೆಯಲ್ಲಿ ಮಾಡಿದಂತೆಯೇ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.

ವೋಟ್ ಮಾಡಿ, ಊಟ ಮಾಡಿ:

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್‌ ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.

ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್​​ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್‌ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ.

SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.

ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್‌ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.

Continue Reading

LATEST NEWS

Trending