Connect with us

    DAKSHINA KANNADA

    ‘ಮಂಗಳೂರು ದಸರಾ’ ವೈಭವದ ಆಕರ್ಷಕ ಶೋಭಾಯಾತ್ರೆ

    Published

    on

    ಮಂಗಳೂರು: ನಗರವೆಲ್ಲ ಬೆಳಕಿನ ಶೃಂಗಾರದಿಂದ ಕಂಗೊಳಿಸುತ್ತಿದ್ದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ರವಿವಾರ ಸಂಜೆ ಆರಂಭಗೊಂಡು, ಸೋಮವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು.

    ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆದ ಭವ್ಯ ಶೋಭಾ ಯಾತ್ರೆಯನ್ನು ಮಳೆಯ ನಡುವೆಯೂ ಸಹಸ್ರಾರು ಜನರು ಕಣ್ತುಂಬಿಕೊಂಡರು. ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ಮೆರವಣಿಗೆ ನಡೆಯಿತು.

     

    ನಿನ್ನೆ (ಅ.13) ಸಂಜೆ ಶ್ರೀ ಕ್ಷೇತ್ರ ಕುದ್ರೋಳಿಯಿಂದ ಹೊರಟ ದಸರಾ ಮೆರವಣಿಗೆ ಮಣ್ಣಗುಡ್ಡೆ ಮಾರ್ಗವಾಗಿ ಲೇಡಿಹಿಲ್‌, ನಾರಾಯಣ ಗುರು ವೃತ್ತ, ಲಾಲ್‌ಬಾಗ್‌, ಬಲ್ಲಾಳ್‌ಬಾಗ್‌, ಪಿ.ವಿ.ಎಸ್‌. ವೃತ್ತ, ಕೆ.ಎಸ್‌. ರಾವ್‌ ರಸ್ತೆ, ಹಂಪನಕಟ್ಟೆ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್‌ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್‌, ಅಳಕೆ ಮೂಲಕ ಮತ್ತೆ ಶ್ರೀ ಕ್ಷೇತ್ರ ತಲುಪಿತು. ಮಂಗಳೂರು ನಗರದಲ್ಲಿ ಸುಮಾರು 9 ಕಿ.ಮೀ. ವ್ಯಾಪ್ತಿಯಲ್ಲಿ ಮೆರವಣಿಗೆ ಸಾಗಿಬಂತು.


    ನವದುರ್ಗೆಯರ ಮತ್ತು ಶಾರದಾ ಮಾತೆಯ ಮೂರ್ತಿಗಳನ್ನು ಇಂದು ಬೆಳಗ್ಗೆ ಕ್ಷೇತ್ರದ ಪುಷ್ಕರಿಣಿಯಲ್ಲಿ ಜಲ ಸ್ತಂಭನಗೊಳಿಸಲಾಯಿತು. ದಸರಾ ಶೋಭಾಯಾತ್ರೆ ಆರಂಭಕ್ಕೂ ಮುನ್ನ ಕುದ್ರೋಳಿಯ ಶ್ರೀ ಶಾರದೆಯ ಸನ್ನಿಧಿಯಲ್ಲಿ ಹಲವು ಮಂದಿ ಸೇವಾಕರ್ತರನ್ನು ಕ್ಷೇತ್ರದ ಪರವಾಗಿ ಜನಾರ್ದನ ಪೂಜಾರಿ ಅವರು ಗೌರವಿಸಿದರು.


    ಮುಂದಿನ ವರ್ಷ ಚಿನ್ನದ ವೀಣೆ:
    ಕಾರ್ಯಕ್ರಮದಲ್ಲಿ ಮಾತನಾಡಿದ ಜನಾರ್ದನ ಪೂಜಾರಿ, ಮಂಗಳೂರು ದಸರಾ ಜನರಿಂದಲೇ ಆಚರಿಸುವ ದಸರಾ. ಇದರ ಯಶಸ್ಸಿಗೆ ಕ್ಷೇತ್ರದಲ್ಲಿ ನೆಲೆಸಿರುವ ದೇವರು ಕಾರಣ. ಪ್ರತಿವರ್ಷ ಮಂಗಳೂರು ದಸರಾದ ವೈಭವವನ್ನು ಜಗತ್ತು ನೋಡುತ್ತದೆ. ದೇವರ ಕೃಪೆಯಿಂದ ಹೀಗೆ ವೈಭವದಿಂದ ಮುಂದುವರಿಯುತ್ತಿದೆ. ಈ ಬಾರಿ ಶಾರದೆಯ ವೀಣೆಯನ್ನು ಪುತ್ರ ಸಂತೋಷ್‌ ಅವರು ಬೆಳ್ಳಿಯಿಂದ ಮಾಡಿಸಿದ್ದಾರೆ. ಮುಂದಿನ ಬಾರಿ ದೇವರು ಅವಕಾಶ ನೀಡಿದರೆ ಚಿನ್ನದ ವೀಣೆಯನ್ನು ಪುತ್ರನ ಮೂಲಕ ಒದಗಿಸಲಾಗುವುದು ಎಂದು ಹೇಳಿದರು.

    ವಿವಿಧ ತಂಡಗಳ ಮೆರುಗು:
    ಅಲಂಕೃತ ಕೊಡೆಗಳು, ಜಾನಪದ ಕಲಾ ತಂಡಗಳು, ಭಜನ ತಂಡ, ವಾದ್ಯ-ಬ್ಯಾಂಡ್‌ ತಂಡಗಳು, ವಿವಿಧ ಹುಲಿ ವೇಷ ತಂಡಗಳ ಪ್ರದರ್ಶನ ಹಾಗೂ ವಿವಿಧ ಕಲಾ ಪ್ರಕಾರಗಳು ಶೋಭಾಯಾತ್ರೆಗೆ ಮೆರುಗು ನೀಡಿದವು. ವಿವಿಧ ಸಂಘ ಸಂಸ್ಥೆಗಳು ಪ್ರವರ್ತಿಸಿದ ಹಲವು ಧಾರ್ಮಿಕ-ಸಾಂಸ್ಕೃತಿಕ ಸ್ತಬ್ಧಚಿತ್ರಗಳು ಮೆರವಣಿಗೆಯ ರಂಗು ಹೆಚ್ಚಿಸಿತು. ನೃತ್ಯ ರೂಪಕ, ದೇಶದ ಪರಂಪರೆ ಬಿಂಬಿಸುವ ಟ್ಯಾಬ್ಲೋಗಳು ಮತ್ತು ವಿವಿಧ ಕಲಾ ಪ್ರಕಾರಗಳು ಆಕರ್ಷಣೆಯನ್ನು ಹೆಚ್ಚಿಸಿದವು. ದಸರಾ ಮೆರವಣಿಗೆ ಸಾಗಿ ಬಂದ ರಸ್ತೆಯ ಇಕ್ಕೆಲಗಳಲ್ಲಿಯೂ ಜನ ಜಾತ್ರೆಯೇ ನೆರೆದಿತ್ತು. ಮೆರವಣಿಗೆ ದಾರಿಯಲ್ಲಿ ಸಂಗೀತ ರಸಮಂಜರಿ ಮತ್ತಿತರ ಕಾರ್ಯಕ್ರಮ ಮನಸೂರೆಗೊಳಿಸಿತು.

     

     

    DAKSHINA KANNADA

    ಕರಾವಳಿ ಭಾಗಗಳಿಗೆ ಇಂದಿನಿಂದ 3 ದಿನ ಹೈ ಅಲರ್ಟ್ : ಮೀನುಗಾರರಿಗೆ ಎಚ್ಚರಿಕೆ…!

    Published

    on

    ಮಂಗಳೂರು: ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಇಂದಿನಿಂದ ನಾಲ್ಕೈದು ದಿನಗಳ ಕಾಲ ಭಾರಿ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.16 ರಿಂದ 19 ರ ವರೆಗೆ ವಾಯುಭಾರ ಕುಸಿತವಾಗಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಳವಾಗುವ ಸಾಧ್ಯತೆಯಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.

    ತುಸು ಕಾಲ ಸುಮ್ಮನಿದ್ದ ವರುಣ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ. ಸತತ 18 ತಾಸು ಸುರಿದ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ತತ್ತರಿಸಿದೆ. ರಸ್ತೆಗಳು ನದಿಯಂತಾಗಿದೆ. ಉಷ್ಣಾಂಶ 6 ಡಿಗ್ರಿ ಕುಸಿತ ಕಂಡಿದೆ. ಮನೆಗಳಿಗೆ ನೀರು ನುಗ್ಗಿದೆ.

    ಇನ್ನೊಂದು ಕಡೆಯಲ್ಲಿ ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಮುಂದಿನ ನಾಲ್ಕೈದು ದಿನಗಳ ಕಾಲ ಭಾರಿ ಮಳೆ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ವಾಯುಭಾರ ಕುಸಿತದಿಂದ ಮಳೆ ಹೆಚ್ಚಳವಿದೆ ಎನ್ನುವ ಮಾಹಿತಿ ಆಧರಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ.

    ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ನೀರು ಮತ್ತು ತಗ್ಗು ಪ್ರದೇಶದಲ್ಲಿ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ. ಮಂಗಳವಾರ (ಅ.16) ನಗರದ ಕೆಲವು ಭಾಗದಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದ್ದು, ನಿರಂತರವಾಗಿ ಜಿಲ್ಲೆಯ ನಾನಾ ಭಾಗದಲ್ಲಿ ತುಂತುರು ಮಳೆ ದಿನವಿಡೀ ಕಾಣಿಸಿಕೊಂಡಿದೆ.

    ಗುರುವಾರ (ಅ.17) ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಹಾಗೂ ವಿಜಯನಗರ, ಮೈಸೂರು, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗೆ ಯೆಲ್ಲೊಅಲರ್ಟ್‌ ನೀಡಲಾಗಿದೆ.

     

    Continue Reading

    DAKSHINA KANNADA

    ಮಾಡೂರು : ಮರಕ್ಕೆ ಸ್ಕೂಟರ್ ಡಿ*ಕ್ಕಿ; ಸವಾರ ಸಾ*ವು

    Published

    on

    ಮಾಡೂರು : ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಮರಕ್ಕೆ ಡಿ*ಕ್ಕಿ ಹೊಡೆದು ಮೃ*ತಪಟ್ಟಿರುವ ಘಟನೆ ಮಾಡೂರು ಶಾರದಾ ನಗರ ಎಂಬಲ್ಲಿ  ಬುಧವಾರ(ಅ.16) ಸಂಭವಿಸಿದೆ. ಮಾಡೂರು ನಿವಾಸಿ ನಾಗೇಶ್(51) ಮೃತರು.

    ಮೃ*ತರು ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಬಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ರಜೆಯಿದ್ದ ಕಾರಣ ಮನೆಗೆ ಬೀರಿ ಪೇಟೆಯಿಂದ ತೆಂಗಿನಕಾಯಿ ತರುವ ಸಂದರ್ಭ ಘಟನೆ ಸಂಭವಿಸಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಇದನ್ನೂ ಓದಿ : WATCH : ಓವರ್ ಟೇಕ್ ಮಾಡಲು ಹೋಗಿ ಬೈಕ್ ಗಳ ನಡುವೆ ಅಪಘಾ*ತ; ಭ*ಯಾನಕ ವೀಡಿಯೋ ವೈರಲ್

    ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಎಎಸ್ಐ ಯಶವಂತ್ ಸ್ಥಳಕ್ಕಾಗಮಿಸಿ, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

     

    Continue Reading

    DAKSHINA KANNADA

    WATCH : ಓವರ್ ಟೇಕ್ ಮಾಡಲು ಹೋಗಿ ಬೈಕ್ ಗಳ ನಡುವೆ ಅಪಘಾ*ತ; ಭ*ಯಾನಕ ವೀಡಿಯೋ ವೈರಲ್

    Published

    on

    ಬೆಳ್ತಂಗಡಿ : ಗುರುವಾಯನ ಕೆರೆಯ ಬಳಿ ಇರುವ ಶೆಣೈ ಹೊಟೇಲ್ ಮುಂಭಾಗದಲ್ಲಿ ಎರಡು ಬೈಕ್ ನಡುವೆ ಅಪಘಾ*ತ ಸಂಭವಿಸಿದೆ.  ಓವರ್ ಟೇಕ್ ಮಾಡಲು ಹೋಗಿ ಈ ದುರಂ*ತ ನಡೆದಿದೆ.

    ಘಟನೆಯಲ್ಲಿ ಇಬ್ಬರಿಗೆ ಗಾ*ಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾ*ತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

     

    Continue Reading

    LATEST NEWS

    Trending