Connect with us

    LATEST NEWS

    ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಯದ್ವಾತದ್ವಾ ಚಲಿಸಿದ ವಿದ್ಯುತ್ ಚಾಲಿತ ಕಾರು; ಇಬ್ಬರಿಗೆ ಗಾಯ

    Published

    on

    ಮಂಗಳೂರು: ವಿದ್ಯುತ್ ಚಾಲಿತ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಯದ್ವಾತದ್ವಾ ಚಲಿಸಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಜಂಕ್ಷನ್ ನಲ್ಲಿ ಭಾನುವಾರ ಸಂಜೆ ನಡೆದಿದೆ.

    ಸುರತ್ಕಲ್ ಸೇವಾ ವೃಂದ ಸಭಾಂಗಣದ ಬಳಿ ಫುಟ್‌ಪಾತ್ ಏರಿದ ಕಾರು ಓರ್ವನ ಮೇಲೆಯೇ ಹರಿದರೆ, ಇನ್ನೋರ್ವನಿಗೆ ಢಿಕ್ಕಿ ಹೊಡೆಯಿತು. ಉತ್ತರ ಭಾರತ ಮೂಲದ ಕಾರ್ಮಿಕನಿಗೆ ಗಂಭೀರ ಗಾಯವಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಓಡಿ ತಪ್ಪಿಸಿಕೊಂಡಿದ್ದು ಅಪಾಯದಿಂದ ಪಾರಾಗಿದ್ದಾರೆ.

    LATEST NEWS

    ಭಟ್ರಕುಮೇರು : ಡಿ.8 ರಂದು ತೃತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ

    Published

    on

    ಮಂಗಳೂರು  : ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ  ಸ್ವಾಮಿ ಕೊರಗ ತನಿಯ ದೈವದ ತೃತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ  ಕೋಲ ಸೇವೆ ಡಿಸೆಂಬರ್ 8 ರ ಭಾನುವಾರ ಜರುಗಲಿದೆ.  ಸಾನಿಧ್ಯದ ಯಜಮಾನ ಹಾಗೂ ದೈವಾರಾಧಕ ಭಾಸ್ಕರ ಬಂಗೇರ ಇವರ ನೇತೃತ್ವದಲ್ಲಿ ತಂತ್ರಿಗಳಾದ  ರವಿ ಆನಂದ ಶಾಂತಿ ಅಡುಮರೋಳಿ ಇವರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

    ಕಾರ್ಯಕ್ರಮಗಳ ವಿವರ :

    ಅಂದು ಬೆಳಿಗ್ಗೆ 6 ರಿಂದ ಪಂಚಗವ್ಯಶುದ್ಧಿ, ಸ್ವಸ್ತಿಪುಣ್ಯಹ, ಮಹಾಗಣಪತಿ ಹೋಮ ಸಾನಿಧ್ಯ ಕಲಶ, ಪ್ರಸನ್ನ ಸೇವೆ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಗಂಧಕಾಡು ಇವರಿಂದ ಭಜನ ಕಾರ್ಯಕ್ರಮ ನಡೆಯಲಿದೆ.

    ಬೆಳಿಗ್ಗೆ  9 ಗಂಟೆಗೆ ಸ್ವಾಮಿ ಕೊರಗ ತನಿಯ ದೈವದ ಕೋಲ ಸೇವೆ ಜರುಗಲಿದೆ. ಮಧ್ಯಾಹ್ನ 12.30ಕ್ಕೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.

    ಮಧ್ಯಾಹ್ನ 1 ಗಂಟೆಯಿಂದ  ವಿಜಯ ಭಾಸ್ಕರ್ ಮತ್ತು ಗಣೇಶ್ ಮಂಗಳೂರು ಇವರಿಂದ “ಭಕ್ತಿಗಾನ ಸುಧೆ”, ಸಂಜೆ 4 ಗಂಟೆಯಿಂದ “ಸ್ಪೂರ್ತಿ ಮಹಿಳಾ ಭಜನಾ ಮಂಡಳಿ” ಪದವಿನಂಗಡಿ ಮತ್ತು ಶ್ರೀ ನಾರಾಯಣಗುರು ಸೇವಾ ಸಂಘ, ಮೇರಿಹಿಲ್, ಗುರುನಗರ ಇವರಿಂದ ” ಭಜನೆ ಹಾಗೂ ಹರಿನಾಮ ಸಂಕೀರ್ತನೆ’’ ನಡೆಯಲಿದೆ. ಸಂಜೆ 7 ಗಂಟೆಗೆ ಅಗೆಲು ಸೇವೆ ನಡೆಯಲಿದ್ದು, ಬಳಿಕ ಅನ್ನಸಂತರ್ಪಣೆ ನೆರವೇರಲಿದೆ.

    ಇದನ್ನೂ ಓದಿ :VIDEO : ಕಾಂತಾರ ‘ಪಂಜುರ್ಲಿ’ ದೈವದ ಅಣಕು ಪ್ರದರ್ಶನ; ಜಮೀರ್ ಅಹ್ಮದ್ ಕೈ ಹಿಡಿದು ನರ್ತಿಸಿದ ವೇಷಧಾರಿಗಳು 

    ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ,  ಕರಿಗಂಧ ಸ್ವಿಕರಿಸಿ, ಸ್ವಾಮಿ ಕೊರಗ ತನಿಯ ದೈವದ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಕ್ಷೇತ್ರದ ಸೇವಾಕರ್ತರುಗಳಾದ ವಿಮಲಾ ಹಾಗೂ ವಿಜಯ ಭಾಸ್ಕರ ಬಂಗೇರ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    Continue Reading

    LATEST NEWS

    16 ವರ್ಷದ ಬಾಲಕನನ್ನು ಮದುವೆಯಾದ ಶಿಕ್ಷಕಿ !

    Published

    on

    ಮಂಗಳೂರು/ಉತ್ತರಪ್ರದೇಶ: ಮದುವೆ ಎನ್ನುವುದು ಜನುಮ-ಜನುಮದ ಅನುಬಂಧ ಎಂದು ಹೇಳುತ್ತಾರೆ. ಆದರೆ ಉತ್ತರಪ್ರದೇಶದ ಮೀರತ್ ನಲ್ಲಿ 25 ವರ್ಷದ ಶಿಕ್ಷಕಿಯೊಬ್ಬರು 16 ವರ್ಷದ ಅಪ್ರಾಪ್ತ ಬಾಲಕನೊಂದಿಗೆ ಮದುವೆಯಾಗಿರುವ ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


    ಶಿಕ್ಷಕಿ ಪೋಷಕರಿಗೂ ತಿಳಿಸದೇ ಬಾಲಕನನ್ನು ಕರೆದುಕೊಂಡು ಹೋಗಿದ್ದಾಳೆ. ಇದರಿಂದ ಪೋಷಕರು ಪೊಲೀಸ್ ಠಾಣೆಯಲ್ಲಿ ಶಿಕ್ಷಕಿ ವಿರುದ್ದ ದೂರು ದಾಖಲಿಸಿದ್ದಾರೆ. ಸದ್ಯ ಈ ಘಟನೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

    ಶಿಕ್ಷಕಿ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನ ಸ್ಥಳೀಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತಿದ್ದ 25 ವರ್ಷದ ಯುವತಿ ಕೆಲವು ದಿನಗಳ ಹಿಂದೆ ಮೀರತ್ ನ 16 ವರ್ಷದ ಬಾಲಕನನ್ನು ಸಾಮಾಜಿಕ ಮಾಧ್ಯಮದ ಮೂಲಕ ಪರಿಚಯಿಸಿಕೊಂಡಿದ್ದಾಳೆ.

    ಇದನ್ನೂ ಓದಿ: ಪಂಜಾಬ್ ಮಾಜಿ ಡಿಸಿಎಂ ಮೇಲೆ ಗುಂ*ಡಿನ ದಾ*ಳಿ

    ಬಳಿಕ ಇವರಿಬ್ಬರ ಪರಿಚಯ ಪ್ರೀತಿಯಾಗಿ ತಿರುಗಿದೆ. ಇತ್ತೀಚೆಗೆ ಶಿಕ್ಷಕಿ ಕಾರಿನಲ್ಲಿ ಮೀರತ್‌ಗೆ ಹೋಗಿ, ಬಾಲಕನ್ನು ಕಾರಿನಲ್ಲಿ ಗಾಜಿಯಾಬಾದ್‌ಗೆ ಕರೆದುಕೊಂಡು ಹೋಗಿದ್ದರು. ಗಾಜಿಯಾಬಾದ್‌ನಲ್ಲಿಯೇ ಬಾಲಕ ಮೇಜರ್ ಎಂಬಂತೆ ನಕಲಿ ದಾಖಲೆ ಸೃಷ್ಟಿಸಿ ಮದುವೆ ನೋಂದಣಿ ಮಾಡಿಸಿಕೊಂಡಿದ್ದಾಳೆ. ತಮ್ಮ ಮಗನ ಮದುವೆಯ ಬಗ್ಗೆ ತಿಳಿದ ಹುಡುಗನ ಪೋಷಕರು ಆಘಾತಕ್ಕೊಳಗಾಗಿ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಕ್ಷಕಿ ತಮ್ಮ ಮಗನಿಗೆ ಹೆದರಿಸಿ ಮದುವೆಯಾಗಿದ್ದಾರೆ ಮತ್ತು ತಮ್ಮ ಮಗ ಅಪ್ರಾಪ್ತನಾಗಿದ್ದರೂ ಮೇಜರ್ ಎಂದು ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

    ಪೋಷಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಂದು ವೇಳೆ ಬಾಲಕನ ಒಪ್ಪಿಗೆಯೊಂದಿಗೆ ಈ ಮದುವೆ ನಡೆದಿದ್ದರೂ ಕೂಡ, ಅದಕ್ಕೆ ಕಾನೂನು ಮಾನ್ಯತೆ ಇಲ್ಲ. ಭಾರತೀಯ ಕಾನೂನಿನ ಪ್ರಕಾರ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯೊಂದಿಗೆ ಮದುವೆಯನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗಿದೆ.

    Continue Reading

    DAKSHINA KANNADA

    ಉಳ್ಳಾಲ: ಯುಐ ಚಿತ್ರದ ಯಶಸ್ಸಿಗೆ ಕೊರಗಜ್ಜನಿಗೆ ಅಡ್ಡಬಿದ್ದ ಉಪೇಂದ್ರ

    Published

    on

    ಉಳ್ಳಾಲ: ಕುತ್ತಾರಿನಲ್ಲಿರುವ ಕೊರಗಜ್ಜನ ಆದಿ ಕ್ಷೇತ್ರವು ಪ್ರಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್‌ನ ರಿಯಲ್ ಸ್ಟಾರ್ ನಟ , ನಿರ್ದೇಶಕ ಉಪೇಂದ್ರ ಹೇಳಿದರು.

    ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರದಂದು ಅವರು ಭೇಟಿ ನೀಡಿ ಡಿಸೆಂಬರ್ 20 ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ ಯುಐ ಸಿನೆಮಾದ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.

    ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪ್ರಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆಯು ನಮ್ಮ ಮೇಲಿರಲಿ ಎಂದರು.  ಚಿತ್ರದ ನಿರ್ಮಾಪಕರಾದ ಕೆ ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್ , ರಾಜೇಶ್ ಭಟ್ ಮೊದಲಾದವರಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನು  ಕ್ಷೇತ್ರದ ಪರವಾಗಿ ಅಭಿನಂದಿಸಿದರು.

    Continue Reading

    LATEST NEWS

    Trending