Sunday, December 5, 2021

ಶಾಸಕ ಲಾಲಾಜಿ ಮೆಂಡನ್ ಗೆ ಸಚಿವ ಸ್ಥಾನ ನೀಡುವಂತೆ ಮೀನುಗಾರರ ವೇದಿಕೆಯ‌ ಒತ್ತಾಯ

ಶಾಸಕ ಲಾಲಾಜಿ ಮೆಂಡನ್ ಗೆ ಸಚಿವ ಸ್ಥಾನ ನೀಡುವಂತೆ ಮೀನುಗಾರರ ವೇದಿಕೆಯ‌ ಒತ್ತಾಯ

ಮಂಗಳೂರು : ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಮಂಗಳೂರಿನ ಸಮಾನ ಮನಸ್ಕ ಮೀನುಗಾರರ ವೇದಿಕೆ ಆಗ್ರಹಿಸಿದೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ.ಕ ಮತ್ತು ಉಡುಪಿ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ಶರತ್ ಗುಡ್ಡೆಕೊಪ್ಲ ಅವರು ರಾಜ್ಯ ವಿಧಾನ ಸಭೆಯಲ್ಲಿ ಮೊಗವೀರ ಸಮುದಾಯಕ್ಕೆ ಸೇರಿದ ಮೀನುಗಾರ ಸಮುದಾಯದ ಆಡಳಿತ ಪಕ್ಷದ ಏಕೈಕ ಪ್ರತಿನಿಧಿಯಾಗಿರುವ ಮೂರು ಬಾರಿ ಶಾಸಕರಾಗಿ ಅನುಭವ ಹೊಂದಿರುವ ಅನುಭವಿ ಮತ್ತು ನಿಷ್ಕಳಂಕ ರಾಜಕಾರಣಿಯಾದ ಲಾಲಾಜಿ ಮೆಂಡನ್ ಅವರಿಗೆ ಸಚಿವ ಸ್ಥಾನ ದೊರೆಯಲೇಬೇಕೆಂದರು.

ಮೊಗವೀರ/ಗಂಗಾಮತ ಸಮುದಾಯಕ್ಕೆ ಸೇರಿದ 39 ವಿವಿಧ ಮೀನುಗಾರರ ಸಮುದಾಯದ ಕರ್ನಾಟಕದಲ್ಲಿ 80 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಮೊಗವೀರ ಸಮುದಾಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು. ಮೀನುಗಾರರ ಹಲವು ಬೇಡಿಕೆಗಳು ಇನ್ನೂ ಈಡೇರಿಲ್ಲ. ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕಾದರೆ ಲಾಲಾಜಿ ಮೆಂಡನ್ ಅವರು ಮಂತ್ರಿಯಾಗಬೇಕು. ಈ ಹಿಂದೆಯೂ ಲಾಲಾಜಿ ಮೆಂಡನ್ ಅವರಿಗೆ ಸ್ಥಾನ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದೆವು. ಆದರೆ ದೊರೆತಿರಲಿಲ್ಲ. ಈ ಬಾರಿಯಾದರೂ ಸಚಿವ ಸ್ಥಾನ ನೀಡಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮೊಗವೀರ ಸಮಾಜದ ಹಿರಿಯ ಮುಖಂಡ ನ್ಯಾಯವಾದಿ, ದಯಾನಾಥ್ ಕೋಟ್ಯಾನ್, ದ.ಕ ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷ ನ್ಯಾಯವಾದಿ ಗಂಗಾಧರ ಹೊಸಬೆಟ್ಟು, ಉಪಾಧ್ಯಕ್ಷ ದೇವದಾಸ್ ಬೋಳೂರು, ಮಂಗಳೂರು ಹದಿನಾಲ್ಕು ಪಟ್ನ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ರಾಜೀವ್ ಕಾಂಚನ್ , ಉರ್ವ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿಶ್ಚಂದ್ರ ಕರ್ಕೇರ ಉಪಸ್ಥಿತರಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...