Connect with us

DAKSHINA KANNADA

ಮಂಗಳೂರು : ಇನ್‌ಸ್ಟಾಗ್ರಾಂ ಸ್ನೇಹ ದುರ್ಬಳಕೆ ಮಾಡಿ ಬಾಲಕಿಗೆ ಲೈಂಗಿಕ ಕಿರುಕುಳ – ಆರೋಪಿಗೆ 20 ವರ್ಷದ ಕಠಿಣ ಶಿಕ್ಷೆ..!

Published

on

ಇನ್‌ಸ್ಟಾಗ್ರಾಂ ಸ್ನೇಹ ದುರ್ಬಳಕೆ ಮಾಡಿಕೊಂಡು 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಂಗಳೂರು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಮಂಗಳೂರು : ಇನ್‌ಸ್ಟಾಗ್ರಾಂ ಸ್ನೇಹ ದುರ್ಬಳಕೆ ಮಾಡಿಕೊಂಡು 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ಚಾಲಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಂಗಳೂರು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಪೋಕ್ಸೊ ನ್ಯಾಯಾಧೀಶ ಕೆ. ಎಂ. ರಾಧಾಕೃಷ್ಣ  ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಕಾವೂರು ಮರಕಡ ನಿವಾಸಿ ದಯಾನಂದ ದಾನಣ್ಣವರ್ ಅಲಿಯಾಸ್ ದಯಾನಂದ (30) ಎಂಬಾತ ಅಪರಾಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ.
ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟರಮಣ ಸ್ವಾಮಿ ಈ ಪ್ರಕರಣದಲ್ಲಿ ಬಾಲಕಿ ಪರವಾಗಿ ವಾದಿಸಿದ್ದಾರೆ.
ಪ್ರಕರಣದ ಹಿನ್ನೆಲೆ :
ಆರೋಪಿ 13 ವರ್ಷದ ಬಾಲಕಿಯೊಂದಿಗೆ Instagram ಮೂಲಕ ಸ್ನೇಹ ಬೆಳೆಸಿದ್ದ. ಪರಸ್ಪರ ಚಾಟ್ ಮಾಡುತ್ತಿದ್ದರು.

ಜನವರಿ 27, 2022 ರಂದು, ಅವಳಿಗೆ ಕರೆ ಮಾಡಿ ತನ್ನೊಂದಿಗೆ ಬರುವಂತೆ ಆಹ್ವಾನಿಸಿದ್ದಾನೆ. ಆದರೆ, ಬಾಲಕಿ ನಿರಾಕರಿಸಿದ್ದಾಳೆ.

ಮರುದಿನ ತನ್ನೊಂದಿಗೆ ಬರುವಂತೆ ಅವಳನ್ನು ಒಪ್ಪಿಸಲು ಅವನು ಯಶಸ್ವಿಯಾದ. ಅವಳು ಬಸ್ ನಿಲ್ದಾಣದ ಬಳಿ ಬಂದಾಗ ಆಟೋರಿಕ್ಷಾದಲ್ಲಿ ಹಂಪನಕಟ್ಟೆಯ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಅವಳನ್ನು ಅವಳ ಮನೆಯ ಬಳಿ ಬಿಟ್ಟು ಹೋಗಿ ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ.
ಘಟನೆ ಬಗ್ಗೆ ತಿಳಿದ ಬಾಲಕಿಯ ಪೋಷಕರು ಮರುದಿನ ಪೊಲೀಸರಿಗೆ ದೂರು ನೀಡಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending