Connect with us

DAKSHINA KANNADA

ಮಂಗಳೂರು : ಮೊಬೈಲ್ ಬಳಕೆಗೆ ಗದರಿದ ತಾಯಿ – ನೇಣಿಗೆ ಕೊರಳೊಡ್ಡಿದ ಬಾಲಕ..!

Published

on

ಮಂಗಳೂರು : ಮೊಬೈಲ್ ಬಳಕೆಯ ಬಗ್ಗೆ ತಾಯಿ ಗದರಿಸಿದರು ಎಂಬ ಕಾರಣಕ್ಕೆ ಬಾಲಕ ಜೀವಾಂತ್ಯ ಮಾಡಿದ ಘಟನೆ ಮಂಗಳೂರು ನಗರದ ಕುಲಶೇಖರ ಕೋಟಿಮುರ ಅಪಾರ್ಟ್ ಒಂದಲ್ಲಿ ನಡೆದಿದೆ.

ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ 14 ವರ್ಷದ ಜ್ಞಾನೇಶ್ ಮೃತ ಬಾಲಕನಾಗಿದ್ದಾನೆ.

ಬಾಲಕನು ತುಂಟನಾಗಿದ್ದು ಮೊಬೈಲ್ ಬಳಸುವ ವಿಚಾರವಾಗಿ ಮನೆಯಲ್ಲಿ ತಾಯಿಯವರು ಸ್ವಲ್ಪ ಗದರಿಸಿದರು ಎಂಬ ಕಾರಣಕ್ಕೆ ಬೇಸರದಲ್ಲಿದ್ದು ನಂತರ ತಾನು ಸ್ನಾನ ಮಾಡಿ ಬರುವುದಾಗಿ ಹೇಳಿ ರೂಮಿನೊಳಗೆ ಹೋದವನು ಬಾರದಿದ್ದಾಗ ತಂದೆಯವರಾದ ಜಗದೀಶ್ ರವರು ಬಾತ್ ರೂಂ ಬಳಿಯಿರುವ ಕಿಟಕಿಯ ಮೂಲಕ ರೂಮಿನೊಳಗೆ ಹೋಗಿ ನೋಡಿದಾಗ ಜ್ಞಾನೇಶ್ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದ ಸ್ಥೀತಿಯಲ್ಲಿದ್ದನು.

ಕೂಡಲೇ ಬಾಗಿಲು ಒಡೆದು ಒಳ ಪ್ರವೇಶಿಸಿ ನೇಣು ಬಿಗಿದ ವೇಲನ್ನು ಕತ್ತರಿಸಿ ಕೆಳಗೆ ಇಳಿಸಿದರೂ ಅದಾಗಲೇ ಜ್ಞಾನೇಶ ಮೃತಪಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ,

ಕಂಕನಾಡಿ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

1 Comment

1 Comment

  1. Y V Prasad

    31/01/2023 at 6:48 PM

    Mobile addiction is a very sensitive issue. Rather than scolding or admonishing kids, parents should seek help from psychologists and social workers.

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

DAKSHINA KANNADA

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ

Published

on

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಮೊದಲನೇ ಹಂತದ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದಲೇ ಆರಂಭಗೊಂಡಿದೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇದಾಗಿದ್ದು, ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನವಾಗಿದೆ. ಮತದಾರರು ತಮ್ಮ ತಮ್ಮ ಮತ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಶಾಂತಿಯುತವಾಗಿ ಮತದಾನ ಮಾಡುತ್ತಿದ್ದಾರೆ.

ಅದರಂತೆ ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

Continue Reading

LATEST NEWS

Trending