Connect with us

DAKSHINA KANNADA

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

Published

on

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ ಸದಸ್ಯ ಅಲ್ತಾಫ್ ಉಳ್ಳಾಲ್ ವಿದೇಶದಲ್ಲಿ ಹೃದಯಾಘಾತದಲ್ಲಿ ಸಾವನ್ನಪ್ಪಿದ್ದಾನೆ.

ಕಾಂಚನ ಮೆನೇಜರ್ ಕೊಲೆ ಪ್ರಕರಣ, ಕೊಲೆಯತ್ನ , ದರೋಡೆ ಸಹಿತ ಉಳ್ಳಾಲದಲ್ಲಿ ನಡೆದ ಜುಬೈರ್ ಹತ್ಯೆ ಪ್ರಕರಣದಲ್ಲಿ ಪ್ರಮುಖನೆಂದು ಗುರುತಿಸಲ್ಪಟ್ಟ ಅಲ್ತಾಫ್ , 2017ರಲ್ಲಿ ನಕಲಿ ಪಾಸ್‍ಪೋರ್ಟ್ ಬಳಸಿ ವಿದೇಶಕ್ಕೆ ಪಲಾಯನ ನಡೆಸಿದ್ದ ಅಲ್ತಾಫ್ ಮಂಗಳೂರು ಪೊಲೀಸರಿಂದ ತಪ್ಪಿಸಿ ಅಲ್ಲೇ ಉಳಿದಿದ್ದನು.

ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಮುಕ್ಕಚ್ಚೇರಿ ನಿವಾಸಿ ಬಿಜೆಪಿ ಮುಖಂಡ ಜುಬೈರ್ ಎಂಬವರು 2016ರಲ್ಲಿ ಅಲ್ತಾಫ್ ವಿರುದ್ಧ ದೂರು ನೀಡಿದ್ದರು.

ಆ ಬಳಿಕ ಅಲ್ತಾಫ್ ಮೇಲೆ ಗೂಂಡಾ ಕಾಯ್ದೆಯನ್ನು ಪೊಲೀಸ್ ಇಲಾಖೆ ಹಾಕಿತ್ತು.

ಇದೇ ದ್ವೇಷವನ್ನು ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಗೊಂಡ ಅಲ್ತಾಫ್ , ದೂರು ನೀಡಿದ ಜುಬೈರ್ ನನ್ನು ಕೊಲೆ ನಡೆಸುವ ಮುಖೇನ ತೀರಿಸಿದ್ದನು ಎಂದು ಆಗಿನ ನಗರ ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ತಿಳಿಸಿದ್ದರು.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending