Connect with us

    LATEST NEWS

    ಮಂಗಳೂರು: ಹೊಸ ವರ್ಷದ ಪ್ರಯುಕ್ತ ವಾಹನ ಸವಾರ/ಚಾಲಕರ ಹಿತದೃಷ್ಟಿಯಿಂದ ಮಾರ್ಗಸೂಚಿ ಪ್ರಕಟ

    Published

    on

    ಮಂಗಳೂರು: ಹೊಸ ವರ್ಷದ ಪ್ರಯುಕ್ತ ಸಾರ್ವಜನಿಕರ, ಪಾದಚಾರಿಗಳ ಮತ್ತು ವಾಹನ ಸವಾರ/ಚಾಲಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಈ ಕೆಳಗಿನ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಪ್ರಕಟಣೆ ಹೊರಡಿಸಿದ್ದಾರೆ.

    ಮಾರ್ಗಸೂಚಿಗಳು ಈ ಕೆಳಗಿನಂತಿವೆ:

    • ಅತೀವೇಗ ಮತ್ತು ಅಜಾಗರೂಕತೆಯಿಂದ ವೀಲಿಂಗ್/ಡ್ರಾಗ್ ರೇಸ್ ಗಳಲ್ಲಿ ಭಾಗಿಯಾಗಿ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
    • ಅಮಲು ಪದಾರ್ಥವನ್ನು ಸೇವಿಸಿ ವಾಹನ ಚಾಲನೆ ಮಾಡಬಾರದು.
    • ದ್ವಿಚಕ್ರ ವಾಹನಗಳಲ್ಲಿ ಎರಡಕ್ಕಿಂತ ಹೆಚ್ಚು ಜನರು ಸವಾರಿ ಮಾಡಬಾರದು.
    • ದ್ವಿಚಕ್ರ ವಾಹನಗಳಲ್ಲಿ ಸವಾರಿ ಮಾಡುವ ಸವಾರ ಮತ್ತು ಸಹಸವಾರ ಕಡ್ಡಾಯವಾಗಿ ಹೆಲೈಟ್ ಧರಿಸಬೇಕು.
    • ಸೀಟ್ ಬೆಲ್ಸ್ ಕಡ್ಡಾಯವಾಗಿ ಧರಿಸಬೇಕು.
    • ಸಾರ್ವಜನಿಕರು ತಮ್ಮ ವಾಹನಗಳನ್ನು ಪಾರ್ಕಿಂಗ್ ಸ್ಥಳಗಳಲ್ಲಿ/ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಪಾರ್ಕ್ ಮಾಡುವುದು.
    • ಮಂಗಳೂರು ನಗರಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ ರಸ್ತೆಗಳಲ್ಲಿ ವೃತ್ತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಪೊಲೀಸರನ್ನು ನಿಯೋಜಿಸಿ ತಪಾಸಣೆ ನಡೆಸಲಾಗುವುದು. ಸಂಚಾರ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
    • ನಗರದ ಪ್ರಮುಖ ಜಂಕ್ಷನ್/ರಸ್ತೆಗಳಲ್ಲಿ ಸಿಸಿಟಿವಿಗಳನ್ನು ಆಳವಡಿಸಲಾಗಿದ್ದು, ಕಮಾಂಡ್ & ಕಂಟ್ರೋಲ್ ಸೆಂಟರ್ ಮೂಲಕ ನಿಗವಹಿಸಲಾಗುವುದು.
    • ಸಾರ್ವಜನಿಕರಿಗೆ ತೊಂದರೆಯಾಗುವಂತಹ/ಮೇಲಿನ ಘಟನೆಗಳು ಕಂಡು ಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಮಾಹಿತಿ ನೀಡಲು ಕೋರಲಾಗಿದೆ.

    ಮಂಗಳೂರು ನಗರದ ಎಲ್ಲಾ ನಾಗರೀಕರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರುತ್ತಾ ಶೂನ್ಯ ರಸ್ತೆ ಅಪಘಾತ ಹಾಗೂ ಸುರಕ್ಷಿತ ಹೊಸ ವರ್ಷವನ್ನು ಆಚರಿಸೋಣವೆಂದು ಆಶಿಸುತ್ತೇವೆ. ಸಂಚಾರ ನಿಯಮಗಳನ್ನು ಪಾಲಿಸಿ, ಸುರಕ್ಷಿತವಾಗಿರಿ ಎಂದು ಅವರು ಮನವಿ ಮಾಡಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಟೆಕ್ಸಾಸ್ ಮಾಲ್ ನಲ್ಲಿ ಬೆಂಕಿ: 500ಕ್ಕೂ ಹೆಚ್ಚು ಪ್ರಾಣಿಗಳ ಸಾವು

    Published

    on

    ಟೆಕ್ಸಾಸ್: ಡಲ್ಲಾಸ್ ಶಾಪಿಂಗ್ ಮಾಲ್ನಲ್ಲಿ ಸಂಭವಿಸಿದ ಬೆಂಕಿಯಲ್ಲಿ 500 ಕ್ಕೂ ಹೆಚ್ಚು ಪ್ರಾಣಿಗಳು, ಹೆಚ್ಚಾಗಿ ಸಣ್ಣ ಪಕ್ಷಿಗಳು ಸಾವನ್ನಪ್ಪಿವೆ.

    ವರದಿಗಳ ಪ್ರಕಾರ, ಬೆಂಕಿಯಿಂದ ಯಾವುದೇ ಮನುಷ್ಯನಿಗೆ ಗಾಯಗಳಾಗಿಲ್ಲ ಮತ್ತು ಬೆಂಕಿಯ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪ್ಲಾಜಾ ಲ್ಯಾಟಿನಾ ಶಾಪಿಂಗ್ ಸೆಂಟರ್ನ ಸಾಕುಪ್ರಾಣಿಗಳ ಅಂಗಡಿಯಲ್ಲಿ 579 ಪ್ರಾಣಿಗಳಿದ್ದವು. ಹೆಚ್ಚಾಗಿ ಸಣ್ಣ ಪಕ್ಷಿಗಳು ಹೊಗೆ ಉಸಿರಾಟದಿಂದಾಗಿ ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪುವ ಹೊತ್ತಿಗೆ ಕಟ್ಟಡವು ಬೆಂಕಿಗೆ ಆಹುತಿಯಾಗಿದ್ದು, ದಟ್ಟವಾದ ಹೊಗೆ ಗೋಚರಿಸುತ್ತಿದೆ ಎಂದು ಡಲ್ಲಾಸ್ ಅಗ್ನಿಶಾಮಕ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.

    ಡಲ್ಲಾಸ್ ಅಗ್ನಿಶಾಮಕ ದಳದ ವಕ್ತಾರ ಜೇಸನ್ ಇವಾನ್ಸ್, “ಸಾಕುಪ್ರಾಣಿಗಳ ಅಂಗಡಿಗೆ ಬೆಂಕಿ ತಲುಪದಿದ್ದರೂ, ಹೆಚ್ಚಿನ ಪ್ರಮಾಣದ ಹೊಗೆ ಪ್ರವೇಶಿಸಿತು. ಡಿಎಫ್ಆರ್ ಸಿಬ್ಬಂದಿ ಶೋಧ ಮತ್ತು ರಕ್ಷಣೆಗೆ ಪ್ರಯತ್ನಿಸಿದರೆ, ದುರದೃಷ್ಟವಶಾತ್ ಅಂಗಡಿಯಲ್ಲಿದ್ದ ಎಲ್ಲಾ ಪ್ರಾಣಿಗಳು ಹೊಗೆ ಉಸಿರಾಟದಿಂದಾಗಿ ನಾಶವಾದವು” ಎಂದು ಎನ್ಬಿಸಿ ನ್ಯೂಸ್ ವರದಿ ಮಾಡಿದೆ.

    ಬೆಂಕಿ ಪ್ರಾರಂಭವಾದಾಗ ಪ್ಲಾಜಾ ಲ್ಯಾಟಿನಾ ಶಾಪಿಂಗ್ ಸೆಂಟರ್ ಕಟ್ಟಡದಲ್ಲಿ ಮೂವರು ಇದ್ದರು. ಆದರೆ ಅಗ್ನಿಶಾಮಕ ದಳ ಎಚ್ಚರಿಕೆ ನೀಡಿದ ನಂತರ ಅವರೆಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಇವಾನ್ಸ್ ಹೇಳಿದ್ದಾರೆ.

    Continue Reading

    LATEST NEWS

    ಗುಜರಾತ್ ನಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ

    Published

    on

    ಭಾರತೀಯ ಕೋಸ್ಟ್ ಗಾರ್ಡ್‌ಗೆ ಸೇರಿದ ಅಡ್ವಾನ್ಸ್ಡ್‌ ಲೈಟ್ ಹೆಲಿಕಾಪ್ಟರ್ (ALH) ಧ್ರುವ್ ಭಾನುವಾರ ಅಪಘಾತಕ್ಕೀಡಾಗಿದೆ. ಗುಜರಾತ್‌ನ ಪೋರಬಂದರ್‌ನಲ್ಲಿ ತರಬೇತಿ ಸಮಯದಲ್ಲಿ ಈ ಹೆಲಿಕಾಪ್ಟರ್ ಪತನಗೊಂಡಿದ್ದು, ಹಲಿಕಾಪ್ಟರ್‌ನಲ್ಲಿ ತರಬೇತಿ ಪಡೆಯುತ್ತಿದ್ದ ಮೂವರು ಯೋಧರ ಸಹಿತ ಐವರು ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದರಲ್ಲಿ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.

    ಹೆಲಿಕಾಪ್ಟರ್ ಪತನದ ಬಗ್ಗೆ ANI ವರದಿ ಮಾಡಿದ್ದು, ಪೋರಬಂದರ್‌ನ ಕೋಸ್ಟ್ ಗಾರ್ಡ್‌ ಏರ್ ಎನ್‌ಕ್ಲೇವ್‌ನಲ್ಲಿ ಈ ಘಟನೆ ನಡೆದಿ ಎಂದು ಹೇಳಿದೆ. ಅಧಿಕಾರಿಗಳ ಪ್ರಕಾರ ಹೆಲಿಕಾಪ್ಟರ್‌ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಪತನವಾಗಿದೆ.

    ಭಾರತೀಯ ಕೋಸ್ಟ್ ಗಾರ್ಡ್‌ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಈ ಹಿಂದೆ ಕೂಡ ಸೆಪ್ಟೆಂಬರ್‌ನಲ್ಲಿ ಇದೇ ಮಾದರಿಯ ಹೆಲಿಕಾಫ್ಟರ್‌ ಒಂದು ಕೋರಬಂದರ್‌ನ ಸಮುದ್ರಕ್ಕೆ ಬಿದ್ದಿತ್ತು. ಇದು ಬೆಂಗಳೂರಿನ ಹೆಚ್‌ಎಲ್‌ಎ ಅಲ್ಲಿ ವಿನ್ಯಾಸಗೊಳಿಸಿದ ಹೆಲಿಕಾಫ್ಟರ್‌ ಆಗಿದೆ.

    Continue Reading

    BIG BOSS

    BBK 11: ಬಿಗ್ ಬಾಸ್ ಫಿನಾಲೆಗೆ ಇನ್ನೆಷ್ಟು ದಿನಗಳಿವೆ?- ಅನೌನ್ಸ್ ಮಾಡಿದ ಕಿಚ್ಚ

    Published

    on

    ಕನ್ನಡ ‘ಬಿಗ್ ಬಾಸ್’ ಸೀಸನ್ 11ರ ಆಟ ಇನ್ನೇನು ಕೆಲವೇ ದಿನಗಳಲ್ಲಿ ಮುಗಿಯಲಿದೆ. 97 ದಿನಗಳು ಪೂರೈಸಿರುವ ಬಿಗ್ ಬಾಸ್ ಆಟ ಇನ್ನೆಷ್ಟು ದಿನಗಳು ಇರಲಿದೆ ಎಂಬುದನ್ನು ಸುದೀಪ್ ದೊಡ್ಮನೆ ವೇದಿಕೆಯಲ್ಲಿ ತಿಳಿಸಿದ್ದಾರೆ. ಫಿನಾಲೆ ಬಗ್ಗೆ ಸುದೀಪ್ ಕ್ಲ್ಯಾರಿಟಿ ಕೊಟ್ಟಿದ್ದಾರೆ.

    2024ರಲ್ಲಿ ಸೆ.29ರಂದು ‘ಬಿಗ್ ಬಾಸ್ ಕನ್ನಡ 11’ಕ್ಕೆ ಅದ್ಧೂರಿ ಚಾಲನೆ ನೀಡಲಾಗಿತ್ತು. 17 ಸ್ಪರ್ಧಿಗಳು ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಿದ್ದರು. ಒಬ್ಬೊಬ್ಬರೇ ಎಲಿಮಿನೇಟ್ ಆಗಿ ಪ್ರಸ್ತುತ 9 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. 97 ದಿನಗಳು ಪೂರೈಸಿರುವ ಈ ಆಟಕ್ಕೆ ಅಂತ್ಯ ಯಾವಾಗ? ಎಂಬುದಕ್ಕೆ ಈಗ ಉತ್ತರ ಸಿಕ್ಕಿದೆ.

    ಸುದೀಪ್ ವೇದಿಕೆಯಲ್ಲಿ ಹೇಳಿರುವಂತೆ ಇನ್ನೂ ಫಿನಾಲೆಗೆ ಇನ್ನು ಮೂರು ವಾರ ಇದೆ. ಅಂದರೆ ಇನ್ನು 21 ದಿನದಲ್ಲಿ ಫಿನಾಲೆ ನಡೆದು ಈ ಬಾರಿ ವಿನ್ನರ್ ಯಾರು ಎಂಬುದು ಖಾತ್ರಿ ಆಗಲಿದೆ. ಶೋ ಅಂತ್ಯವಾಗಲಿದೆ. ಈ ಸೀಸನ್ ಮೂಲಕ ಬಿಗ್ ಬಾಸ್ ಜೊತೆ ಸುದೀಪ್ ಅವರ ಪಯಣವೂ ಅಂತ್ಯವಾಗಲಿದೆ.

    ಅಂದಹಾಗೆ, ಈ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆಯಲ್ಲ. ಫ್ಯಾಮಿಲಿ ರೌಂಡ್ ಆಗಿದ್ದ ಹಿನ್ನೆಲೆ ವೋಟಿಂಗ್ ಲೈನ್ ಕ್ಲೋಸ್ ಇತ್ತು. ಹಾಗಾಗಿ ಮುಂದಿನ ವಾರ ಡಬಲ್ ಎಲಿಮಿನೇಷನ್ ಅಥವಾ ಮಿಡ್ ವೀಕ್ ಎಲಿಮಿನೇಷನ್ ನಡೆಯುವ ಸಾಧ್ಯತೆ ಇದೆ. 9 ಸ್ಪರ್ಧಿಗಳಿರುವ ಮನೆಯಲ್ಲಿ ಫಿನಾಲೆಗೆ 5 ಮಂದಿಯಷ್ಟೇ ಆಯ್ಕೆಯಾಗಲಿದ್ದಾರೆ. ಉಗ್ರಂ ಮಂಜು, ಗೌತಮಿ, ಭವ್ಯಾ, ತ್ರಿವಿಕ್ರಮ್, ಚೈತ್ರಾ, ಮೋಕ್ಷಿತಾ, ರಜತ್, ಧನರಾಜ್, ಹನುಮಂತ ಸ್ಪರ್ಧಿಗಳಿದ್ದಾರೆ. ಇವರಲ್ಲಿ ಯಾವ 5 ಸ್ಪರ್ಧಿಗಳಿಗೆ ಫಿನಾಲೆ ಟಿಕೆಟ್ ಸಿಗಲಿದೆ. ಯಾರು ಬಿಗ್ ಬಾಸ್ ವಿನ್ನರ್ ಪಟ್ಟ ಗೆಲ್ತಾರೆ? ಎಂಬ ಕುತೂಹಲ ವೀಕ್ಷಕರಲ್ಲಿ ಮೂಡಿದೆ.

    Continue Reading

    LATEST NEWS

    Trending