ಬಂಟ್ವಾಳ: ಕಣಜ ಹುಳುಗಳು ಕಡಿದು ಮೂವರು ಗಾಯಗೊಂಡ ಘಟನೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಪನೆ ಎಂಬಲ್ಲಿ ನಡೆದಿದೆ.
ಗಾಯಗೊಂಡಿರುವವರನ್ನು ಪೂವಪ್ಪ, ಮಹೇಶ್, ಗೋಪಾಲ್ ಎಂದು ಗುರುತಿಸಲಾಗಿದೆ.
ಘಟನೆ ವಿವರ
ಇಂದು ಬೆಳಗ್ಗೆ ಮೂವರು ಬಂಟ್ವಾಳದ ಕಲ್ಪನೆಯಲ್ಲಿ ಬಸ್ಸಿಗೆ ನಿಂತಿದ್ದ ವೇಳೆ ಏಕಾಏಕಿ ಹೆಜ್ಜೇನು ಕಡಿದಿದೆ. ಘಟನೆಯಲ್ಲಿ ಪೂವಪ್ಪ ಎಂಬುವವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಉಳಿದಂತೆ ಮಹೇಶ್ ಮತ್ತು ಗೋಪಾಲ್ ಇಬ್ಬರು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.