Friday, August 19, 2022

ನಾಳೆಯ ವಿಹೆಚ್‌ಪಿ ಪ್ರತಿಭಟನೆಗೆ ‘ನೋ ಪರ್ಮಿಷನ್‌’ ಎಂದ ಮಂಗಳೂರು ಪೊಲೀಸ್‌ ಕಮೀಷನರ್‌

ಮಂಗಳೂರು: ಪ್ರವಾದಿ ಅವಹೇಳನದ ವಿರುದ್ಧ ನಡೆದ ಹಿಂಸಾಚಾರ ಖಂಡಿಸಿ ನಾಳೆ ದೇಶಾದ್ಯಂತ ವಿಹೆಚ್‌ಪಿ ಪ್ರತಿಭಟನೆ ಹಮ್ಮಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಯೂ ವಿಹೆಚ್‌ಪಿ ಹಾಗೂ ಬಜರಂಗದಳದ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಗೆ ಮಂಗಳೂರು ನಗರ ಪೊಲೀಸ್‌ ಕಮೀಷನರ್‌ ಅನುಮತಿ ನಿರಾಕರಿಸಿದ್ದಾರೆ.


ಈ ಬಗ್ಗೆ ಆದೇಶ ಹೊರಡಿಸಿರುವ ನಗರ ಕಮೀಷನರೇಟ್‌ನ ಎಸಿಪಿ, ಪ್ರವಾದಿ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ

ದೇಶಾದ್ಯಂತ ಹಿಂಸೆ ನಡೆಸಿರುವುದನ್ನು ಖಂಡಿಸಿ ನಾಳೆ ಮಂಗಳೂರಿನ ಪಿವಿಎಸ್‌ ವೃತ್ತದ ಬಳಿ ವಿಹೆಚ್‌ಪಿ ಹಾಗೂ ಬಜರಂಗದಳ ನಡೆಸುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡುತ್ತಿದೆ.

ಪ್ರತಿಭಟನೆ ನಡೆಸುವ ಬಗ್ಗೆ ಅನುಮತಿ ಕೋರಿಲ್ಲ. ಅದಾಗ್ಯೂ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅನುಮತಿ ನಿರಾಕರಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸುರತ್ಕಲ್‌ನಲ್ಲಿ ಕತ್ತಿ ಬೀಸಿ ಹುಚ್ಚಾಟ: ಓರ್ವನ ಬಂಧನ

ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್‌ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ.ಅತಲ್ ಕುಲ್ಲು (30) ಬಂಧಿತ...

ಫಾಝಿಲ್ ಕೊಲೆ ಪ್ರಕರಣ: ಆರೋಪಿ ಹರ್ಷಿತ್‌ಗೆ 14 ದಿನ ನ್ಯಾಯಾಂಗ ಬಂಧನ

ಮಂಗಳೂರು: ನಗರ ಹೊರವಲಯದ ಸುರತ್ಕಲ್‌ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣದಲ್ಲಿ ಬುಧವಾರ ಬಂಧಿಸಲಾಗಿದ್ದ ಆರೋಪಿ ಹರ್ಷಿತ್‌ಗೆ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಆರೋಪಿ ಹರ್ಷಿತ್ ಮೇಲೆ ಫಾಝಿಲ್ ಅವರ...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...