Connect with us

DAKSHINA KANNADA

ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋರೊನಾಕ್ಕೆ ಪ್ಲಾಸ್ಮಾ ಚಿಕಿತ್ಸೆ ಆರಂಭ : ಪ್ಲಾಸ್ಮಾ ದಾನದ ಮೂಲಕ ಜೀವದಾನ ಮಾಡಿದ ಮಂಗಳೂರು ಪೊಲೀಸರು..

Published

on

ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋರೊನಾಕ್ಕೆ ಪ್ಲಾಸ್ಮಾ ಚಿಕಿತ್ಸೆ ಆರಂಭ : ಪ್ಲಾಸ್ಮಾ ದಾನದ ಮೂಲಕ ಜೀವದಾನ ಮಾಡಿದ ಮಂಗಳೂರು ಪೊಲೀಸರು..!

ಮಂಗಳೂರು : ವಿಶ್ವದಾದ್ಯಂತ ಸಾವಿನ ಸುನಾಮೀಯನ್ನೇ ಸೃಷ್ಟಿಸಿದ ಮಹಾಮಾರಿ ಕೊವೀಡ್ 19 ನ್ನು ನಿಯಂತ್ರಿಸಲು ದೇಶ ವಿದೇಶಗಳಲ್ಲಿ ಔಷಧ- ಲಸಿಕೆಗಳು ಕಂಡು ಹಿಡಿಯುವ ಪ್ರಯತ್ನ ತೀವ್ರಗೊಂಡಿವೆ.

ಆದರಲ್ಲಿ ಕೆಲವು ಅಂತಿಮ ಹಂತದಲ್ಲಿದ್ದರೆ ಮತ್ತೆ ಕೆಲವು ವಿಫಲವಾಗಿವೆ. ಈ ಮಧ್ಯೆ ಕೊರೊನಾ ಗುಣಪಡಿಸಲು ಕೊರೊನಾ ಪ್ಲಾಸ್ಮಾ ಚಿಕಿತ್ಸೆ ಆಶಾದಾಯಕವಾಗಿದೆ ಎಂಬ ಅಂಶ ವೈದ್ಯಲೋಕದದಿಂದ ದೃಢ ಪಟ್ಟಿದೆ .

ಭಾರತ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಕೋವಿಡ್ 19 ವೈರಸ್ ಸೋಂಕಿತ ರೋಗಿಗಳಿಗೆ ಪ್ಲಾಸ್ಮಾ ತೆರಪಿ ಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಗುತ್ತಿದ್ದು. ತೀವ್ರ ನಿಗಾ ಘಟಕದಲ್ಲಿದ್ದ ಶೇಕಡ 60 ರಷ್ಟು ರೋಗಿಗಳು ಸಂಪೂರ್ಣ ಗುಣಮುಖರಾಗಿದ್ದಾರೆ.

ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇದೀಗ ಕೊರೋನಾ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಅನುಮತಿ ನೀಡಿದ್ದಾರೆ, ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಕಾರ್ಯಾರಂಭ ಮಾಡಿದೆ.

ಮಂಗಳೂರಿನ ಕೊರೋನಾ ವಾರಿಯಾರ್ಸ್‌ ಗಳಾದ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಪ್ರಪ್ರಥಮವಾಗಿ ಪ್ಲಾಸ್ಮಾ ದಾನ ಮಾಡುವ ಮೂಲಕ ಆದರ್ಶ ಮೆರೆದಿದ್ದಾರೆ.

ಮಂಗಳೂರು ನಗರದ  ಪೊಲೀಸ್ ಸಿಬಂದಿಗಳಾದ  ಮಣಿ, ಸುಧೀರ್, ರಂಜಿತ್  ಪ್ಲಾಸ್ಮಾ ನೀಡುವ ಮೂಲಕ ಇನ್ನೊಬ್ಬರ ಬದುಕಿಗೆ ಜೀವದಾನಿಯಾಗಿದ್ದಾರೆ. ಪೊಲೀಸ್ ಸಿಬಂದಿಗಳ ಈ ಜೀವದಾನದ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಪ್ರಶಂಸಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 ಏನಿದು ಪ್ಲಾಸ್ಮಾ ಚಿಕಿತ್ಸೆ: ಇದನ್ನು ಕಾನ್ವಲ್‍ಸೆಂಟ್ ಪ್ಲಾಸ್ಮಾ ಥೆರಪಿ (ಸಿಪಿಟಿ) ಎಂದು ಕರೆಯುತ್ತಾರೆ. ಇದು ಅತ್ಯಂತ ಸರಳ ವಿಧಾನ. ಸೋಂಕು ಪೀಡಿತ ರೋಗಿಯನ್ನು ಈ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಆತ ಚೇತರಿಸಿಕೊಂಡ ಅಥವಾ ಗುಣಮುಖನಾದ ನಂತರ ಆತನ ರಕ್ತದಲ್ಲಿರುವ ರೋಗ ಪ್ರತಿರೋಧಕ ಕಣಗಳನ್ನು ಮತ್ತೋರ್ವ ಸೋಂಕಿತ ವ್ಯಕ್ತಿಯ ದೇಹದೊಳಗೆ ಸೇರಿಸಲಾಗುತ್ತದೆ.

ರೋಗಿಯ ದೇಹ ಪ್ರವೇಶಿಸಿದ ರೋಗ ಪ್ರತಿರೋಧಕ ಕಣಗಳು ಆತನ ರಕ್ತದಲ್ಲಿರುವ ವೈರಾಣುಗಳ ವಿರುದ್ಧ ಹೋರಾಡುತ್ತದೆ. ಅಲ್ಲದೆ ಆತನಲ್ಲಿರುವ ಸ್ವಾಭಾವಿಕ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಲಾಗುತ್ತದೆ. ಇದನ್ನು ಸರಳವಾಗಿ ಹೇಳುವುದಾದರೆ ಈ ಚಿಕಿತ್ಸೆಯನ್ನು ಮುಳ್ಳಿನಿಂದ ಮುಳ್ಳನ್ನು ತೆಗೆಯುವ ವಿಧಾನಕ್ಕೆ ಹೋಲಿಸಬಹುದು.

ರೋಗ ಪೀಡಿತ ವ್ಯಕ್ತಿ ಗುಣಮುಖನಾದ ನಂತರ ಆತನಿಗೆ ನೀಡಲಾಗಿದ್ದ ಪ್ಲಾಸ್ಮಾ ಚಿಕಿತ್ಸೆಯ ರೋಗ ಪ್ರತಿರೋಧಕ ಕಣಗಳನ್ನು ಮತ್ತೊಬ್ಬ ರೋಗಿಗೆ ಬಳಸಿ ಆತನಲ್ಲಿನ ರೋಗಕಾರಕ ವೈರಸ್‍ಗಳನ್ನು ನಿರ್ಮೂಲನೆ ಮಾಡಲಾಗುತ್ತದೆ. ಚೀನಾ, ಅಮೆರಿಕಾ ನಂತರ ಇದೀಗ ಭಾರತದಲ್ಲಿ ನಡೆಸಲಾದ ಕ್ಲಿನಿಕಲ್ ಟ್ರಯಲ್  ಯಶಸ್ವಿಯಾದ ಕಾರಣ ಕೇಂದ್ರ ಆರೋಗ್ಯ ಇಲಾಖೆ ರೋಗಿಗಳ ಮೇಲೆ ಪ್ರಯೋಗಿಸಲು ಅನುಮತಿ ನೀಡಿದ್ದಾರೆ.

ಆದರೆ ಈ ವಿಧಾನವನ್ನು ಅತ್ಯಂತ ಎಚ್ಚರಿಕೆಯಿಂದ ಬಳಸುವಂತೆ ಹಸಿರು ನಿಶಾನೆ ತೋರಿದೆ. ರೋಗಿಗೆ ಪ್ಲಾಸ್ಮಾ ಚಿಕಿತ್ಸೆ (ರಕ್ತದಲ್ಲಿನ ದ್ರವ ರೂಪದಲ್ಲಿನ ರೋಗ ಪ್ರತಿರೋಧಕ ಕಣಗಳು)ಗೆ ಒಳಪಡಿಸುವ ಮುನ್ನ ಇದನ್ನು ಹೆಪಟೈಟಿಸ್ ಬಿ , ಎಚ್‍ಐವಿ ಮೊದಲಾದ ರೋಗಗಳ ಪರೀಕ್ಷೆಗೆ ಒಳಪಡಿಸಿದ ನಂತರವಷ್ಟೇ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ.

 

Click to comment

Leave a Reply

Your email address will not be published. Required fields are marked *

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending