ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಕೋರೊನಾಕ್ಕೆ ಪ್ಲಾಸ್ಮಾ ಚಿಕಿತ್ಸೆ ಆರಂಭ : ಪ್ಲಾಸ್ಮಾ ದಾನದ ಮೂಲಕ ಜೀವದಾನ ಮಾಡಿದ ಮಂಗಳೂರು ಪೊಲೀಸರು..!
ಮಂಗಳೂರು : ವಿಶ್ವದಾದ್ಯಂತ ಸಾವಿನ ಸುನಾಮೀಯನ್ನೇ ಸೃಷ್ಟಿಸಿದ ಮಹಾಮಾರಿ ಕೊವೀಡ್ 19 ನ್ನು ನಿಯಂತ್ರಿಸಲು ದೇಶ ವಿದೇಶಗಳಲ್ಲಿ ಔಷಧ- ಲಸಿಕೆಗಳು ಕಂಡು ಹಿಡಿಯುವ ಪ್ರಯತ್ನ ತೀವ್ರಗೊಂಡಿವೆ.
ಆದರಲ್ಲಿ ಕೆಲವು ಅಂತಿಮ ಹಂತದಲ್ಲಿದ್ದರೆ ಮತ್ತೆ ಕೆಲವು ವಿಫಲವಾಗಿವೆ. ಈ ಮಧ್ಯೆ ಕೊರೊನಾ ಗುಣಪಡಿಸಲು ಕೊರೊನಾ ಪ್ಲಾಸ್ಮಾ ಚಿಕಿತ್ಸೆ ಆಶಾದಾಯಕವಾಗಿದೆ ಎಂಬ ಅಂಶ ವೈದ್ಯಲೋಕದದಿಂದ ದೃಢ ಪಟ್ಟಿದೆ .
ಭಾರತ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಕೋವಿಡ್ 19 ವೈರಸ್ ಸೋಂಕಿತ ರೋಗಿಗಳಿಗೆ ಪ್ಲಾಸ್ಮಾ ತೆರಪಿ ಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಗುತ್ತಿದ್ದು. ತೀವ್ರ ನಿಗಾ ಘಟಕದಲ್ಲಿದ್ದ ಶೇಕಡ 60 ರಷ್ಟು ರೋಗಿಗಳು ಸಂಪೂರ್ಣ ಗುಣಮುಖರಾಗಿದ್ದಾರೆ.
ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇದೀಗ ಕೊರೋನಾ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಅನುಮತಿ ನೀಡಿದ್ದಾರೆ, ಮಂಗಳೂರಿನ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಕಾರ್ಯಾರಂಭ ಮಾಡಿದೆ.
ಮಂಗಳೂರಿನ ಕೊರೋನಾ ವಾರಿಯಾರ್ಸ್ ಗಳಾದ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಪ್ರಪ್ರಥಮವಾಗಿ ಪ್ಲಾಸ್ಮಾ ದಾನ ಮಾಡುವ ಮೂಲಕ ಆದರ್ಶ ಮೆರೆದಿದ್ದಾರೆ.
ಮಂಗಳೂರು ನಗರದ ಪೊಲೀಸ್ ಸಿಬಂದಿಗಳಾದ ಮಣಿ, ಸುಧೀರ್, ರಂಜಿತ್ ಪ್ಲಾಸ್ಮಾ ನೀಡುವ ಮೂಲಕ ಇನ್ನೊಬ್ಬರ ಬದುಕಿಗೆ ಜೀವದಾನಿಯಾಗಿದ್ದಾರೆ. ಪೊಲೀಸ್ ಸಿಬಂದಿಗಳ ಈ ಜೀವದಾನದ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಪ್ರಶಂಸಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಏನಿದು ಪ್ಲಾಸ್ಮಾ ಚಿಕಿತ್ಸೆ: ಇದನ್ನು ಕಾನ್ವಲ್‍ಸೆಂಟ್ ಪ್ಲಾಸ್ಮಾ ಥೆರಪಿ (ಸಿಪಿಟಿ) ಎಂದು ಕರೆಯುತ್ತಾರೆ. ಇದು ಅತ್ಯಂತ ಸರಳ ವಿಧಾನ. ಸೋಂಕು ಪೀಡಿತ ರೋಗಿಯನ್ನು ಈ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಆತ ಚೇತರಿಸಿಕೊಂಡ ಅಥವಾ ಗುಣಮುಖನಾದ ನಂತರ ಆತನ ರಕ್ತದಲ್ಲಿರುವ ರೋಗ ಪ್ರತಿರೋಧಕ ಕಣಗಳನ್ನು ಮತ್ತೋರ್ವ ಸೋಂಕಿತ ವ್ಯಕ್ತಿಯ ದೇಹದೊಳಗೆ ಸೇರಿಸಲಾಗುತ್ತದೆ.
ರೋಗಿಯ ದೇಹ ಪ್ರವೇಶಿಸಿದ ರೋಗ ಪ್ರತಿರೋಧಕ ಕಣಗಳು ಆತನ ರಕ್ತದಲ್ಲಿರುವ ವೈರಾಣುಗಳ ವಿರುದ್ಧ ಹೋರಾಡುತ್ತದೆ. ಅಲ್ಲದೆ ಆತನಲ್ಲಿರುವ ಸ್ವಾಭಾವಿಕ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಲಾಗುತ್ತದೆ. ಇದನ್ನು ಸರಳವಾಗಿ ಹೇಳುವುದಾದರೆ ಈ ಚಿಕಿತ್ಸೆಯನ್ನು ಮುಳ್ಳಿನಿಂದ ಮುಳ್ಳನ್ನು ತೆಗೆಯುವ ವಿಧಾನಕ್ಕೆ ಹೋಲಿಸಬಹುದು.
ರೋಗ ಪೀಡಿತ ವ್ಯಕ್ತಿ ಗುಣಮುಖನಾದ ನಂತರ ಆತನಿಗೆ ನೀಡಲಾಗಿದ್ದ ಪ್ಲಾಸ್ಮಾ ಚಿಕಿತ್ಸೆಯ ರೋಗ ಪ್ರತಿರೋಧಕ ಕಣಗಳನ್ನು ಮತ್ತೊಬ್ಬ ರೋಗಿಗೆ ಬಳಸಿ ಆತನಲ್ಲಿನ ರೋಗಕಾರಕ ವೈರಸ್‍ಗಳನ್ನು ನಿರ್ಮೂಲನೆ ಮಾಡಲಾಗುತ್ತದೆ. ಚೀನಾ, ಅಮೆರಿಕಾ ನಂತರ ಇದೀಗ ಭಾರತದಲ್ಲಿ ನಡೆಸಲಾದ ಕ್ಲಿನಿಕಲ್ ಟ್ರಯಲ್ ಯಶಸ್ವಿಯಾದ ಕಾರಣ ಕೇಂದ್ರ ಆರೋಗ್ಯ ಇಲಾಖೆ ರೋಗಿಗಳ ಮೇಲೆ ಪ್ರಯೋಗಿಸಲು ಅನುಮತಿ ನೀಡಿದ್ದಾರೆ.
ಆದರೆ ಈ ವಿಧಾನವನ್ನು ಅತ್ಯಂತ ಎಚ್ಚರಿಕೆಯಿಂದ ಬಳಸುವಂತೆ ಹಸಿರು ನಿಶಾನೆ ತೋರಿದೆ. ರೋಗಿಗೆ ಪ್ಲಾಸ್ಮಾ ಚಿಕಿತ್ಸೆ (ರಕ್ತದಲ್ಲಿನ ದ್ರವ ರೂಪದಲ್ಲಿನ ರೋಗ ಪ್ರತಿರೋಧಕ ಕಣಗಳು)ಗೆ ಒಳಪಡಿಸುವ ಮುನ್ನ ಇದನ್ನು ಹೆಪಟೈಟಿಸ್ ಬಿ , ಎಚ್‍ಐವಿ ಮೊದಲಾದ ರೋಗಗಳ ಪರೀಕ್ಷೆಗೆ ಒಳಪಡಿಸಿದ ನಂತರವಷ್ಟೇ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ.
ಪುತ್ತೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜ. 8 ಮತ್ತು 9 ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ, ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ H ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಕಾರಣೀಭೂತರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿಯನ್ನು ನೀಡಿದ್ದಾರೆ. ತಂಡದ ವ್ಯವಸ್ಥಾಪಕಿಯಾಗಿ ಅನಿತಾಸಿಯ ಗೋನ್ಸಲ್ವಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿಣಿ ಸೆಲಿನ್ ಪೇತ್ರ ಮಾಹಿತಿ ನೀಡಿದ್ದಾರೆ.
ಮಂಗಳೂರು : ಮೆದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ಮಹಿಳೆಯ ಅಂಗಾಂಗ ದಾನ ಪ್ರಕ್ರಿಯೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯಿತು.
ಮೈಸೂರಿನ ಅಪೋಲೋ ಆಸ್ಪತ್ರೆಗೆ ರೇಖಾ ಯಕೃತ್, ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಣ್ಣುಗಳ ಕಾರ್ನಿಯಾವನ್ನು ಝೀರೋ ಟ್ರಾಫಿಕ್ ಮೂಲಕ ಕೊಂಡೊಯ್ಯಲಾಯಿತು.
ಶಿವಮೊಗ್ಗ ರಾಗಿಗುಡ್ಡ ನಿವಾಸಿ, ರೇಖಾ (41) ಅಂಗಾಂಗ ದಾನ ಮಾಡಿರುವ ಮಹಿಳೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೇಖಾ ಅಸ್ವಸ್ಥಗೊಂಡಿದ್ದರು. ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಜ.6 ರಂದು ದಾಖಲಿಸಲಾಗಿತ್ತು. ಆದರೆ, ಬ್ರೈನ್ ಡೆಡ್ ಆದ ಹಿನ್ನೆಲೆ ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡಲು ನಿರ್ಧರಿಸಿದರು.
ಮಂಗಳೂರು : ನಗರದ ತಣ್ಣೀರು ಬಾವಿ ಬೀಚ್ ಅಭಿವೃದ್ಧಿ ಕೆಲಸಗಳು ‘ಒನ್ ನೇಷನ್ ಒನ್ ಡೆಸ್ಟಿನೇಷನ್’ ಯೋಜನೆಯಡಿ ಪೂರ್ಣಗೊಳಿಸಲಾಗಿದೆ. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ತಣ್ಣೀರು ಬಾವಿ ಬೀಚ್‌ನಲ್ಲಿ 7.59 ಕೋಟಿ ರೂ. ಅನುದಾನವನ್ನು ವಿವಿಧ ಕಾಮಗಾರಿಗೆ ನೀಡಿತ್ತು. ಅಂತೆಯೇ ಪುಣೆ ಮೂಲದ ಬಿವಿಜಿ ಇಂಡಿಯಾ ಲಿಮಿಟೆಡ್ ಎಂಬ ಕಂಪನಿಯು 7.56 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಂಡಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ ಎಂದು, ದಕ್ಷಿಣ ಕನ್ನಡ ಡಿಸಿ ಮುಲ್ಲೈ ಮುಹಿಲನ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಲಭ್ಯವಿರುವ ಸೌಲಭ್ಯಗಳ ಪಟ್ಟಿ :
ತಣ್ಣೀರು ಬಾವಿ ಬೀಚ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಬೀಚ್‌ಗೆ ಬರುವ ಪ್ರವಾಸಿಗರಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಗದಿ ಮಾಡುವ ಪ್ರವೇಶ ಶುಲ್ಕವನ್ನು ವಸೂಲಿ ಮಾಡುವ ಅವಕಾಶವನ್ನು ಟೆಂಡರ್ ಪಡೆದವರಿಗೆ ನೀಡಲಾಗುತ್ತದೆ. ಸದ್ಯ ಬೀಚ್ ನಿರ್ವಹಣೆ ಮಾಡುವ ಗುತ್ತಿಗೆ ಅವಧಿ ಅಂತ್ಯವಾಗಿದೆ. ಆದ್ದರಿಂದ ಹೊಸ ಟೆಂಡರ್ ಆಹ್ವಾನಿಸಲಾಗುತ್ತದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇಷ್ಟು ದಿನ ತಣ್ಣೀರು ಬಾವಿ ಬೀಚ್‌ಗೆ ತೆರಳುವ ಪ್ರವಾಸಿಗರಿಗೆ ಮರ ಗಿಡಗಳ ಉದ್ಯಾನವನ ಪ್ರಮುಖ ಆಕರ್ಷಣೆಯಾಗಿತ್ತು. ಸಸಿಹಿತ್ಲು, ಪಣಂಬೂರು ಬೀಚ್‌ಗೆ ಹೋಲಿಕೆ ಮಾಡಿದರೆ ಇಲ್ಲಿ ಹೆಚ್ಚಿನ ಆಕರ್ಷಣೆಗಳು, ಸೌಲಭ್ಯಗಳು ಇಲ್ಲ ಎಂಬ ಆರೋಪವಿತ್ತು. ಆದ್ದರಿಂದ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆಯಲು ಬೇಕಾದ ಸೌಲಭ್ಯಗಳನ್ನು ಕೈಗೊಳ್ಳಲಾಗಿದೆ.
ಬೀಚ್ ಆವರಣದಲ್ಲಿ ಆಹಾರ ಮಳಿಗೆಗಳು, ಸಮುದ್ರ ವೀಕ್ಷಣೆ ಮಾಡಲು ಫ್ರೇಮ್ ಮುಂತಾದ ಕಾಮಗಾರಿಗಳನ್ನು ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಡಿ ಮಾಡಲಾಗುತ್ತಿದೆ. ಬೀಚ್‌ನಲ್ಲಿ ಬಿದಿರು ಮನೆಗಳು ನಿರ್ಮಾಣವಾಗಿದ್ದು, ಪ್ರವಾಸಿಗರಿಗೆ ವಿಶೇಷ ಅನುಭವವನ್ನು ನೀಡಲಿವೆ. ಬೀಚ್‌ನಲ್ಲಿ ಹುಲ್ಲಿನ ಕೊಡೆಗಳ ಕೆಳಗೆ ಕುಳಿತು ಸಮುದ್ರ ವೀಕ್ಷಣೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಇನ್ನು ಬೀಚ್ ಕಸ ನಿರ್ವಹಣೆಗೆ ಘನತ್ಯಾಜ್ಯ ನಿರ್ವಹಣೆ ಘಟಕ, ಶೌಚಾಲಯಗಳ ನಿರ್ವಹಣೆ, ಬಟ್ಟೆ ಬದಲಾಯಿಸುವ ಕೊಠಡಿ, ಬಿದಿರಿನ ತಾತ್ಕಾಲಿಕ ಮನೆಗಳು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಬೀಚ್‌ನಲ್ಲಿ ಒದಗಿಸಲಾಗಿದೆ. ಜೊತೆಗೆ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಥಮ ಚಿಕಿತ್ಸೆ ಕೊಠಡಿ, ಸಿಸಿಟಿವಿ ಕ್ಯಾಮರಾ ನಿಯಂತ್ರಣ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಬೀಚ್ ಸ್ವಚ್ಛತಾ ಕಾರ್ಯಕ್ಕೆ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.