Friday, August 19, 2022

ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ..! ಆರ್‌ ಎಎಫ್ ಮತ್ತು ನಗರ ಪೊಲೀಸರಿಂದ ಪಥ ಸಂಚಲನ..!

ಕರಾವಳಿಯಲ್ಲಿ ತೀವ್ರ ಕಟ್ಟೆಚ್ಚರ..! ಆರ್‌ ಎಎಫ್ ಮತ್ತು ನಗರ ಪೊಲೀಸರಿಂದ ಪಥ ಸಂಚಲನ..!

ಮಂಗಳೂರು : ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಕ್ಷಿಪ್ರ ಕ್ರೀಯಾ ಪಡೆ (RAF) ಮತ್ತು ಮಂಗಳೂರು ನಗರ ಪೊಲೀಸರು ಪಥಸಂಚಲನೆ ನಡೆಸಿದ್ದಾರೆ.

ಬೆಂಗಳೂರು ಗಲಭೆ ಮತ್ತು ರಾಜ್ಯದ ಅಲ್ಲಲ್ಲಿ ಶಾಂತಿ ಕದಡುವ ಯತ್ನಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೋಮುಸೂಕ್ಷ್ಮಾ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಮುಂಜಾಗೃತೆಯಾಗಿ ಈ ಕ್ರಮ ಕೈಗೊಂಡು ಜನತೆಯಲ್ಲಿ ಧೈರ್ಯ ತುಂಬುವ ಕಾರ್ಯ ಮಾಡಲಾಯಿತು.

ಇನ್ನು ಮಂಗಳೂರು ನಗರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬರೆಯುವುದು, ಹಂಚಿಕೊಳ್ಳುವುದು ಕಂಡು ಬಂದಿದೆ. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ‌ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವುದು ಗಮನಕ್ಕೆ ಬಂದಿದ್ದು, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ.

 

ಈಗಾಗಲೇ ಅವರ ವಿರುದ್ದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದೆಹಲಿ ಉಪ ಮುಖ್ಯಮಂತ್ರಿ ಮನೆ ಮೇಲೆ CBI ದಾಳಿ: ಶೋಧ ಕಾರ್ಯ

ನವದೆಹಲಿ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೊಡಿಯಾ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಇಂದು ಬೆಳಗ್ಗೆ ದಾಳಿ ಮಾಡಿದ್ದು, ಶೋಧ ಕಾರ್ಯ ಮುಂದುವರಿಸಿದೆ. ದೆಹಲಿಯ ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿರುವ...

ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 3.50 ಕೋ.ರೂ ವಂಚಿಸಿದ ರಾಮ್‌ಪ್ರಸಾದ್‌ ಸೇರಿ ನಾಲ್ವರ ವಿರುದ್ಧ FIR

ಮಂಗಳೂರು: ಕೆಎಂಎಫ್‌ನಲ್ಲಿ ಕೆಲಸ ಕೊಡಿಸುತ್ತೇನೆಂದು 100ಕ್ಕೂ ಅಧಿಕ ಮಂದಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್‌ ಪ್ರಸಾದ್‌ ಸೇರಿ ಒಟ್ಟು ನಾಲ್ವರ ಮೇಲೆ ಮಂಗಳೂರು ನಗರ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಮ್‌ ಪ್ರಸಾದ್‌...

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...