DAKSHINA KANNADA
ಮಂಗಳೂರು: ಬಜರಂಗದಳ ಕಾರ್ಯಕರ್ತನ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಆರೋಪಿಸಿ ಪ್ರತಿಭಟನೆ
ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದು ವೈದ್ಯರ ವೈದರ ನಿರ್ಲಕ್ಷ್ಯ ಎಂದು ಹಿಂದು ಸಂಘಟನೆಗಳು ಆರೋಪಿಸಿವೆ.
ಮಂಗಳೂರು: ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ್ಯ ಎಂದು ಹಿಂದು ಸಂಘಟನೆಗಳು ಆರೋಪಿಸಿವೆ.
ನಿತಿನ್ ಯಾನೆ ರೂಪೇಶ್ ಪೂಜಾರಿ 3 ದಿನಗಳ ಹಿಂದೆ ಹೊಟ್ಟೆನೋವಿನಿಂದ ವೆನ್ಲೋಕ್ ಆಸ್ಪತ್ರೆ ಗೆ ದಾಖಲಾಗಿದ್ದರು.
ಆದಿತ್ಯವಾರ ಅವರು ತೀರಿಕೊಂಡಿದ್ದು ವೈದ್ಯರು ಚಿಕಿತ್ಸೆ ನೀಡಿಲ್ಲ ನಿರ್ಲಕ್ಷ್ಯ ತೋರಿದರು ಎಂದು ಭಜರಂಗದಳದ ಕಾರ್ಯಕರ್ತರು ಆರೋಪಮಾಡಿದ್ದಾರೆ.
ಅಲ್ಲದೆ ಬಜರಂಗದಳ ಮತ್ತು ವೆನ್ಲಾಕ್ ವೈದ್ಯರ ನಡುವೆ ಮಾತಿನ ಚಕಮಕಿ ನಡೆದಿದೆ.
ಕಾರ್ಯಕರ್ತರು ವೈದ್ಯರನ್ನು ತರಾಟೆಗೆತ್ತಿಕೊಂಡಿದ್ದಾರೆ. ಪ್ರತಿಭಟನೆಗೆ ಮುಂದಾದರು. ಈ ವೇಳೆ ಪೊಲೀಸರು ಆಗಮಿಸಿ ಸಮಾಧಾನಪಡಿಸಿದ್ದಾರೆ.
ರೂಪೇಶ್ ನಿರ್ಲಕ್ಷದ ಸಾವಿಗೆ ಕಾರಣರಾದ ವೈದ್ಯರನ್ನು ಬಂಧಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದಾರೆ.
ಸುಮಾರು 50ಕ್ಕಿಂತ ಹೆಚ್ಚು ಭಜರಂಗದಳದ ಕಾರ್ಯಕರ್ತರು ಸೇರಿದ್ದರು.
DAKSHINA KANNADA
ಮಂಗಳೂರು : ಕೂಟ ಮಹಾ ಜಗತ್ತಿನಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವೇತನ ವಿತರಣೆ
ಮಂಗಳೂರು : ಕೂಟ ಮಹಾ ಜಗತ್ತು ಮಂಗಳೂರು ಅಂಗ ಸಂಸ್ಥೆಯ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಣಾ ಕಾರ್ಯಕ್ರಮವು ಜರುಗಿತು.
ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿಘ್ನೇಶ್ ಕಾರಂತ್, ಮೈಟ್ನ ಬಿ.ಇ ಹಾಗೂ ಸಂಜನಾ ಹೇರ್ಳೆ ಕೆ. ಅವರಿಗೆ ತಲಾ ೨೫ ಸಾವಿರ ಸ್ಕಾಲರ್ಶಿಪ್ ನೀಡಲಾಯಿತು.
“ಭವಿಷ್ಯದ ದಿನಗಳಲ್ಲಿ ಮತ್ತೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಲಾಗುವುದು. ಈ ನಿಟ್ಟಿನಲ್ಲಿ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲಾಗುವುದು” ಎಂದು ಕೂಟ ಜಗತ್ತು ಮಂಗಳೂರು ಅಂಗ ಸಂಸ್ಥೆಯ ಅಧ್ಯಕ್ಷ ಶ್ರೀಧರ ಹೊಳ್ಳ ಹೇಳಿದರು.
“ಕೂಟ ಜಗತ್ತು ಮಂಗಳೂರು ಅಂಗ ಸಂಸ್ಥೆಯನ್ನು ಬಲಪಡಿಸುವ ದೃಷ್ಟಿಯಿಂದ ಸದಸ್ಯತ್ವ ಅಭಿಮಾನ ಆಗಬೇಕಿದೆ. ವ್ಯಾಪ್ತಿಯ ಎಲ್ಲರೂ ಸದಸ್ಯರಾಗುವ ಮೂಲಕ ಸಂಘಟನೆಯನ್ನು ಬಲಪಡಿಸುವ ಕೆಲಸ ಆಗಬೇಕು” ಎಂದು ಕಾರ್ಯದರ್ಶಿ ಗೋಪಾಲಕೃಷ್ಣ ಮಯ್ಯ ಹೇಳಿದರು.
ಸಂಘಟನಾ ಕಾರ್ಯದರ್ಶಿ ಕೃಷ್ಣಮಯ್ಯ, ಶಿವರಾಮಯ್ಯ, ಪದ್ಮನಾಭ ಮಯ್ಯ, ಮಹಿಳಾ ವೇದಿಕೆಯ ಪ್ರಭಾರಾವ್, ಲಲಿತಾ ಆರ್.ಉಪಾಧ್ಯಾಯ, ಶಶಿಪ್ರಭಾ ಐತಾಳ್, ಸುಮತಿ ಕೋರಿಯಾ, ಅನುರಾಧ, ಅನುಪಮಾ ಮೊದಲಾದವರು ಉಪಸ್ಥಿತರಿದ್ದರು.
DAKSHINA KANNADA
ಮಂಗಳೂರು : ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು
ಮಂಗಳೂರು: ದೇವಾಲಯದ ಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿದ ಕಳ್ಳರ ದಂಡು, ನೂರಾರು ವರ್ಷಗಳ ಇತಿಹಾಸವಿದ್ದ ದೇವರಿಗೆ ಸಂಬಂಧಿಸಿದ ಲಕ್ಷಾಂತರ ರೂ ಮೌಲ್ಯ ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ದೋಚಿಕೊಂಡು ಹೋದ ಘಟನೆ ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಸೋಮವಾರ (ನ.04) ಮುಂಜಾನೆ ನಡೆದಿದೆ.
ದೇವಳಕ್ಕೆ ಸಂಬಂಧಿಸಿದಂತೆ ಅನಾದಿ ಕಾಲದ ನೂರಾರು ವರ್ಷಗಳ ಹಳೆಯದಾದ ಹಿರಿಯರು ಮಾಡಿಸಿದಂತ ಸುಮಾರು ಒಂದುವರೆ ಕೆ.ಜಿ ತೂಕದ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ದೇವರ ಮೂಗುತಿ ದೇವರ ಕೊಡೆ ಸೇರಿದಂತೆ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ ಹಾಗೂ 3 ಪವನ್ ಚಿನ್ನ ಕಳವಾಗಿದೆ. ಇದರ ಜೊತೆಗೆ ಕಾಣಿಕೆ ಹುಂಡಿಯಲ್ಲಿರುವ ನಗದನ್ನು ಕೊಂಡುಹೋಗಿದ್ದಾರೆ.
ಆದಿತ್ಯವಾರ ಮಂದಿರದಲ್ಲಿ ವಿಶೇಷವಾದ ಪೂಜಾ ಕಾರ್ಯಕ್ರಮವಿದ್ದ ಕಾರಣ ಕಾಣಿಕೆ ಹುಂಡಿಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಹಣವಿರಬಹುದು ಎಂದು ಹೇಳಲಾಗುತ್ತಿದೆ.
ಸಿ.ಸಿ.ಕ್ಯಾಮರಾದಲ್ಲಿ ದೃಶ್ಯ ಸೆರೆ :
ಸುಮಾರು 5 ಜನರ ತಂಡ ಈ ಕಳ್ಳತನದಲ್ಲಿ ಭಾಗಿಯಾಗಿರುವುದು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಹನದ ಮೂಲಕ ಬಂದ ಕಳ್ಳರ ತಂಡ ಸುಮಾರು 3.30 ರ ಸಮಯದಲ್ಲಿ ದೇವಸ್ಥಾನದ ಹಿಂಬದಿಯ ಬಾಗಿಲಿನ ಚಿಲಕ ಮುರಿದು ಒಳಪ್ರವೇಶ ಮಾಡಿದ್ದಾರೆ. ಬಳಿಕ ದೇವಸ್ಥಾನದ ಸುತ್ತಲೂ ತಿರುಗಾಡಿ ಮಾಹಿತಿ ಪಡೆದುಕೊಂಡು, ಗರ್ಭಗುಡಿಯ ಒಳಗೆ ಪ್ರವೇಶ ಮಾಡಿದ್ದಾರೆ. ಅಲ್ಲಿ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ವಸ್ತುಗಳನ್ನು ಗೋಣಿಯಲ್ಲಿ ತುಂಬಿಸಿಕೊಂಡು ದೇವಳದ ಗೋಪುರಕ್ಕೆ ಬಂದು, ಕಳ್ಳತನ ಮಾಡಿದ ಎಲ್ಲಾ ಬೆಳೆಬಾಳುವ ವಸ್ತುಗಳನ್ನು ಒಂದೇ ಚೀಲದಲ್ಲಿ ಭದ್ರಗೊಳಿಸಿ ವಾಪಸು ಹೋಗುವ ದೃಶ್ಯ ಕಂಡು ಬಂದಿದೆ.
ನಾಯಿ ನೀಡಿದ ಸುಳಿವು :
ದೇವಸ್ಥಾನದ ಕಂಪೌಂಡ್ ನ ಒಳಗಡೆಯೇ ಅರ್ಚಕರ ಮನೆಯಿದೆ. ಆದರೂ ಕಳ್ಳರು ಕಳ್ಳತನ ಧೈರ್ಯದಿಂದ ಕಳ್ಳತನ ಮಾಡಿದ್ದಾರೆ. ಕಳ್ಳರು ದೇವಸ್ಥಾನದ ಒಳಗೆ ಪ್ರವೇಶ ಮಾಡುವುದನ್ನು ಇವರ ಸಾಕು ನಾಯಿ ಗಮನಿಸಿ ಜೋರಾಗಿ ಬೊಗಳಲು ಆರಂಭಿಸಿದೆ. ನಾಯಿ ಬೊಗಳಿದ್ದರಿಂದ ಅರ್ಚಕರಿಗೆ ಎಚ್ಚರವಾಗಿದೆ. ನಾಯಿ ಯಾಕೆ ಬೊಗಳುತ್ತಿದೆ ಎಂದು ಸಿ.ಸಿ.ಕ್ಯಾಮರಾವನ್ನು ನೋಡಿದಾಗ ದೇವಸ್ಥಾನದ ಒಳಗೆ ಮೂವರು ಕಂಡುಬಂದಿದ್ದಾರೆ. ಕೂಡಲೇ ಅರ್ಚಕರು ದೇವಸ್ಥಾನದ ಮ್ಯಾನೇಜರ್ ಅವರಿಗೆ ವಿಚಾರ ತಿಳಿಸಿದ್ದಾರೆ. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಮೂವರು ದೇವಸ್ಥಾನದ ಒಳಗೆ ಇದ್ದು, ನನಗೆ ಒಬ್ಬನಿಗೆ ಹೋಗಲು ಹೆದರಿಕೆ ಆಗುತ್ತಿದ್ದು ಅವರನ್ನು ಬರುವಂತೆ ತಿಳಿಸಿದ್ದಾರೆ. ಕೂಡಲೇ ಅವರು ಇಲ್ಲಿಗೆ ಬಂದರಾದರೂ ಅದಾಗಲೇ ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.
ಪ್ರಕರಣ ದಾಕಲು :
ಸಿ.ಸಿ.ಕ್ಯಾಮರಾ ಪರಿಶೀಲಿಸಿದಾಗ ಕಳ್ಳರು ಚಪ್ಪಲಿ ಧರಿಸದೆ ಗರ್ಭಗುಡಿಯೊಳಗೆ ಪ್ರವೇಶ ಮಾಡಿ, ಅಲ್ಲಿಂದ ಚಿನ್ನಾಭರಣಗಳನ್ನು ಕಳವು ಮಾಡುವ ದೃಶ್ಯ ಕಂಡು ಬಂತು. ಇದನ್ನು ಖಚಿತಪಡಿಸಿಕೊಂಡ ಬಳಿಕ ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಗಳಾದ ಹರೀಶ್ ಮತ್ತು ಮೂರ್ತಿ ಭೇಟಿ ನೀಡಿದ್ದಾರೆ. ಜೊತೆಗೆ ಶ್ವಾನದಳ ಮತ್ತು ಬೆರಳಚ್ಚುತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರಾಟ ; ಆರೋಪಿಗಳು ಬಂಧನ !
ಬಜಪೆ: ನಗರದ ಹೊರವಲಯದ ಪೆರ್ಮುದೆ ಪಂಚಾಯತ್ ಕ್ರಾಸ್ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಫಾರೂಕ್ ಮತ್ತು ಅಬ್ದುಲ್ ಜುನೈದ್ ಬಂಧಿತ ಆರೋಪಿಗಳು.
ಮಂಗಳೂರಿನ ತೆಂಕ ಎಕ್ಕಾರು ಗ್ರಾಮದ ನಿವಾಸಿಗಳು ಎಮದು ಗುರುತಿಸಲಾಗಿದೆ.
ಬಜ್ಪೆಯಿಂದ ಕಟೀಲು ಕಡೆಗೆ ಹೋಗುವ ಪೆರ್ಮುದೆ ಪಂಚಾಯತ್ ಕ್ರಾಸ್ನಿಂದ ಅನತಿ ದೂರದಲ್ಲಿ ಆರೋಪಿಗಳು ಮಾದಕದ್ರವ್ಯ ಎಂಡಿಎಂಎ ಮಾರಾಟ ಮಾಡುತ್ತಿದ್ದರು. ಬಜ್ಪೆ ಠಾಣೆಯ ಪಿಎಸ್ಐ ರೇವಣಸಿದ್ದಪ್ಪರವರು ಸಿಬ್ಬಂದಿಯೊಂದಿಗೆ ದಾಳಿನಡೆಸಿ ಬಂಧಿಸಿದ್ದಾರೆ.
ಬಂಧಿತರಿಂದ 50,000 ರೂ. ಮೌಲ್ಯದ 9.11 ಗ್ರಾಂ ತೂಕದ ಮಾದಕದ್ರವ್ಯ ಎಂಡಿಎಂಎ ಸೇರಿದಂತೆ 2 ಮೊಬೈಲ್ ಪೋನ್ಗಳು, ಒಂದು ಬೈಕ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರ ವಿರುದ್ಧ ಮಾದಕವಸ್ತು ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುತ್ತಾರೆ.
ಬಜಪೆ ಪೊಲೀಸ್ ಠಾನೆಯಲ್ಲಿ ಪ್ರಕರನ ದಾಖಲಾಗಿದೆ.
- LATEST NEWS5 days ago
ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಅಕ್ಕಿಯ ಜೊತೆಗೆ ಉಚಿತವಾಗಿ ಸಿಗಲಿವೆ ಈ 9 ವಸ್ತುಗಳು.!
- DAKSHINA KANNADA2 days ago
ಮಂಗಳೂರು: ನೇತ್ರಾವತಿ ಸೇತುವೆ ಬಳಿ ಭೀಕರ ಅ*ಪಘಾತ; ಓರ್ವ ಮೃ*ತ್ಯು, ಮತ್ತೋರ್ವ ಗಂಭೀರ
- kerala5 days ago
ಕಾಸರಗೋಡು : ‘ಮಗು’ ವನ್ನು ರಕ್ಷಿಸಿದ ‘ದೈವ’ನರ್ತಕ ; ವಿರೋಚಿತ ಕಥೆ !!
- LATEST NEWS6 days ago
ಮಹಿಳೆಯರೇ.. ನೀವು ಈ ಪಾನೀಯ ಕುಡಿದ್ರೆ 10 ವರ್ಷ ಸಣ್ಣ ಕಾಣೋದು ಗ್ಯಾರಂಟಿ.. !!