ಮಂಗಳೂರು : ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಗಳೂರಿನ ಸರ್ಕಾರಿ ಅಭಿಯೋಜಕರ ಹುದ್ದೆಗೆ ರಾಜು ಪೂಜಾರಿಯವರನ್ನು ವರ್ಗಾವಣೆ ಮಾಡಲಾಗಿರುತ್ತದೆ.
ಶ್ರೀ ರಾಜು ಪೂಜಾರಿಯವರು ಈ ಮೊದಲು ಹೊಳೆನರಸಿಪುರ ಬಂಟ್ವಾಳ, ಕಾರ್ಕಳದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಹಾಗೂ ಉಡುಪಿ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಎ.ಡಿ.ಪಿ ಯಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
ಆ ನಂತರ ಮಂಗಳೂರಿನ ಮಾನ್ಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.
ಮಾರ್ಚ್ 15, 2021 ರಂದು ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಮಂಗಳೂರಿನ ಸರ್ಕಾರಿ ಅಭಿಯೋಜಕರ ಹುದ್ದೆಯ ಪ್ರಭಾರವನ್ನು ಶ್ರೀ ರಾಜು ಪೂಜಾರಿಯವರು ಪಡೆದಿರುತ್ತಾರೆ.