Connect with us

    DAKSHINA KANNADA

    ಮಂಗಳೂರಿನಲ್ಲೂ ಒಮಿಕ್ರಾನ್ ಭೀತಿ : ಘಾನದಿಂದ ಬಂದ ಪ್ರಯಾಣಿಕನಲ್ಲಿ ಪಾಸಿಟಿವ್- ಹೈ ಅಲರ್ಟ್..!

    Published

    on

    ಮಂಗಳೂರು : ಕರಾವಳಿ ನಗರಿ ಮಂಗಳೂರಿನಲ್ಲ್ಲೂ ಒಮಿಕ್ರಾನ್ ಭೀತಿ ತಲೆದೋರಿದೆ. ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾಗಿದೆ.
    ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು, ಏರ್ ಪೋರ್ಟ್ ಆರೋಗ್ಯಾಧಿಕಾರಿ (ಎ.ಪಿ.ಹೆಚ್.ಓ), ಜಿಲ್ಲಾ ಸರ್ವೇಕ್ಷಾಣಾಧಿಕಾರಿ (ಡಿ.ಎಸ್.ಓ), ಕೋವಿಡ್ ನೋಡಲ್ ಅಧಿಕಾರಿ ಹಾಗೂ ಅಪೋಲೋ ಲ್ಯಾಬ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.
    ಮಧ್ಯಾಹ್ನ ಏರ್ ಪೋರ್ಟ್‍ನ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಿ, ಘಾನ ದೇಶದಿಂದ ಬಂದ ಪ್ರಯಾಣಿಕರೊಬ್ಬರನ್ನು ನಿನ್ನೆ ರಾತ್ರಿಯೇ ವೆನ್‍ಲಾಕ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್‍ಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
    ಆ ಪ್ರಯಾಣಿಕರಲ್ಲಿ ಯಾವುದೇ ರೋಗ ಲಕ್ಷಣ ಕಂಡು ಬಂದಿರುವುದಿಲ್ಲ. ಆ ಪ್ರಯಾಣಿಕ ಆಸೀನವಾಗಿದ್ದ 3 ಸಾಲಿನ ಎದುರು ಹಾಗೂ 3 ಸಾಲಿನ ಹಿಂದಿನ ಪ್ರಯಾಣಿಕರು ಸೇರಿದಂತೆ ಒಟ್ಟು 27 ಪ್ರಯಾಣಿಕರನ್ನು ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಿ ಅವರನ್ನು ಆರೋಗ್ಯ ಇಲಾಖೆಯಿಂದ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್ ಮತ್ತು ರ್ಯಾಂಡಮೈಸ್ ಪರೀಕ್ಷೆಗೆ ಒಳಪಡಿಸಿ, ಅವರನ್ನು ಕ್ವಾರಂಟೈನ್ ಮಾಡಲಾಗಿದೆ.
    ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವ್ಯ ಮಾದರಿಯನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ಈಗಾಗಲೇ ಕಳುಹಿಸಿಕೊಡಲಾಗಿದೆ ಎಂಬ ಮಾಹಿತಿ ಪಡೆದುಕೊಂಡಿದ್ದಾರೆ.
    ಜಿಲ್ಲಾಧಿಕಾರಿಯವರು ವಿಮಾನ ನಿಲ್ದಾಣದ ಅಧಿಕಾರಿಯೊಂದಿಗೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ, ಇಮಿಗ್ರಿಯೇಶನ್, ಏರ್‍ಸುವಿಧಾ, ಚೆಕ್ಕಿಂಗ್ ಪಾಯಿಂಟ್, ಟ್ರಾನ್‍ಸಿಟ್ ಪ್ಯಾಸಿಂಜರ್ ಹಾಗೂ ರ್ಯಾಂಡಮೈಸ್ ಪರೀಕ್ಷೆಗಳ ಬಗ್ಗೆಯೂ ವಿವರವಾಗಿ ತಿಳಿದುಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
    ಸಭೆಯಲ್ಲಿ ಚೀಫ್ ಏರ್‍ಪೋರ್ಟ್ ಆಫೀಸರ್ ನೀರವ್ ಶಾ, ಕೋವಿಡ್ ನೋಡಲ್ ಅಧಿಕಾರಿ ಡಾ. ಎಚ್. ಅಶೋಕ್, ಏರ್‍ಲೈನ್ ಸ್ಟೇಷನ್ ಮ್ಯಾನೇಜರ್ಸ್, ಟರ್ಮಿನಲ್ ಮ್ಯಾನೇಜರ್, ಇಮಿಗ್ರಿಯೇಶನ್ ಆಫೀಸರ್ಸ್ ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಅಕ್ರಮ ಮರಳುಗಾರಿಕೆ ತಡೆ; ಕೇಸು ಹಾಕುವಂತೆ ಗ್ರಾಮಸ್ಥರಿಂದ ಒತ್ತಾಯ

    Published

    on

    ಕಡಬ: ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿರುವ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ.

    ಇದೀಗ ಬೋಟ್ ಕಟ್ಟಿ ಹಾಕಿದವರ ವಿರುದ್ದ ಕೇಸು ದಾಖಲಿಸುವ ಬಗ್ಗೆ ಬಂದ ಸುದ್ದಿಯ ಹಿನ್ನೆಲೆ ಶುಕ್ರವಾರ (ನ.29) ಸಂಜೆ ಭಾರೀ ಸಂಖ್ಯೆಯಲ್ಲಿ ಗ್ರಾಮಸ್ಥರು ಕಡಬ ಠಾಣೆಗೆ  ಆಗಮಿಸಿದ್ದಾರೆ.

    ಚಾರ್ವಾಕ ಕುಂಬ್ಲಾಡಿ ಕುಕ್ಕೆನಾಥ ಬಾಲಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖರು ಊರವರು ಸೇರಿ ಚಾರ್ವಾಕ ಗ್ರಾಮದ ಭಾಗದಲ್ಲಿ ಮರಳುಗಾರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಲ್ಲದೆ, ನಿರ್ಣಯವನ್ನೂ ಮಾಡಿದ್ದರು.ಮರಳುಗಾರಿಕೆಯಿಂದ ದೈವಸಾನಿಧ್ಯ ನಾಶ ಮತ್ತು ಪ್ರಕೃತಿ ನಾಶವಾದ ಕಾರಣ ಊರವರು ಮರಳುಗಾರಿಕೆಗೆ ವಿರೋಧ ವ್ಯಕ್ತಪಡಿಸಿ ಸಂಬಂಧಪಟ್ಟ ಕಾಣಿಯೂರು ಗ್ರಾಮ ಪಂಚಾಯತಿಗೂ ಮನವಿ ಸಲ್ಲಿಸಿ ಇಲಾಖೆಗಳಿಗೆಲ್ಲ ಮರಳುಗಾರಿಕೆ ನಡೆಸದಂತೆ ಪತ್ರ ಬರೆದಿದ್ದಾರೆ.

    ಎರಡು ದಿನದ ಹಿಂದೆ ಚಾರ್ವಾಕ ಭಾಗದಲ್ಲಿ ಮರಳುಗಾರಿಕೆಗೆ ಬಂದ ತಂಡಕ್ಕೆ ಊರವರು ಪ್ರತಿರೋಧ ವ್ಯಕ್ತಪಡಿಸಿದ್ದರು. ನ.29ರಂದು ಮತ್ತೆ ಬೋಟ್ ಮೂಲಕ ತಂಡ ಬಂದಾಗ ಬೋಟನ್ನು ಹಿಡಿದು ಚಾರ್ವಾಕ ಭಾಗದಲ್ಲಿ ಕಟ್ಟಿ ಹಾಕಲಾಗಿತ್ತು. ಬೋಟ್ ನಲ್ಲಿದ್ದ ಮರಳು ಕಾರ್ಮಿಕರು ಈಜಿ ಆಚೆ ಬದಿಗೆ ಪರಾರಿಯಾಗಿದ್ದರು. ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಕಡಬದ ತಹಶೀಲ್ದಾರ್ ಆಗಲಿ, ಕಂದಾಯ ನಿರೀಕ್ಷಕರೀಗಲೀ,ಕಡಬದ ಪೊಲೀಸರಾಗಲಿ ಯಾವುದೇ ಕ್ರಮ ಕೈಗೊಳ್ಳದೆ ಮೌನಕ್ಕೆ ಶರಣಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ .

    Continue Reading

    DAKSHINA KANNADA

    ಪುತ್ತೂರು: `50ರ ದಾಂಪತ್ಯಕ್ಕೊಂದು ಸನ್ಮಾನ’ ವಿಶಿಷ್ಠ ಕಾರ್ಯಕ್ರಮ

    Published

    on

    ಪುತ್ತೂರು: ಹಿಂದೂ ಸಮಾಜದಲ್ಲಿ ಕೌಟುಂಬಿಕ ಪರಂಪರೆಗಳು ಮರೆಯಾಗುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇದರ ಫಲವಾಗಿಯೇ ವೃದ್ದಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸ್ಥಿತಿ ಕೃಷಿ ಬದುಕನ್ನೇ ನಂಬಿಕೊಂಡು ಬಂದ ಗೌಡ ಸಮುದಾಯಕ್ಕೆ ಬರಬಾರದು.

    ನಮ್ಮ ಪಾರಂಪರಿಕ ಸಂಸ್ಕøತಿಗೆ ಬದುಕಿಗೆ ಅಗತ್ಯವಾಗಿದೆ ಎಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹೇಳಿದರು. ಶುಕ್ರವಾರ ನಡ್ಪ ಹೊಸಮನೆ ಗುಡ್ಡಪ್ಪ ಗೌಡ ಅವರ ಮನೆಯಲ್ಲಿ ನಡೆದ ಒಕ್ಕಲಿಗ ಸ್ವಸಹಾಯ ಸಂಘ ಟ್ರಸ್ಟ್ ಪುತ್ತೂರು ಇದರ ದಶಮಾನೋತ್ಸವ ಸಂಭ್ರಮದ ಹಿನ್ನಲೆಯಲ್ಲಿ ಬಜತ್ತೂರು ಗ್ರಾಮದ 50ರ ದಾಂಪತ್ಯದ ಬದುಕಿಗೊಂದು ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ದಶಮಾನೋತ್ಸವ ಸಂಭ್ರಮ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಮಾತನಾಡಿದರು. ಇದೆ ಸಂದರ್ಭದಲ್ಲಿ 13 ದಂಪತಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಗ್ರಾಮಸಮಿತಿ ಅಧ್ಯಕ್ಷ ದೇರಣ್ಣ ಗೌಡ ಓಮಂದೂರು ವಹಿಸಿದ್ದರು. ಮಾಜಿ ತಾಪಂ ಸದಸ್ಯ ಮುಕುಂದ ಗೌಡ ಬಜತ್ತೂರು, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ್ ಮೊದಲಾದವರಿದ್ದರು.

    Continue Reading

    DAKSHINA KANNADA

    ಮಂಗಳೂರು: ಕ್ಷುಲ್ಲಕ ಕಾರಣ ಮುಂದಿಟ್ಟು ಬೂತ್‌ ಅಧ್ಯಕ್ಷರಿಗೆ ಹಲ್ಲೆ

    Published

    on

    ಮಂಗಳೂರು: ಹರೇಕಳ ಬೂತ್‌ ಅಧ್ಯಕ್ಷ ಶರತ್‌ ಕುಮಾರ್‌ ಗಟ್ಟಿ ಎಂಬವರ ಮೇಲೆ ಗುಂಪೊಂದು ನಡೆಸಿರುವ ಹಲ್ಲೆ ಪ್ರಕರಣವನ್ನು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಪುತ್ತೂರು ಖಂಡಿಸಿದ್ದಾರೆ.

    ಗಾಯಾಳು ಶರತ್‌ ಕುಮಾರ್‌ ಭೇಟಿಯಾಗಿ ಧೈರ್ಯ ತುಂಬಿದ ಅವರು, ಮತಾಂಧ ಗುಂಪು ನಡೆಸಿರುವ ದಾಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ಗೃಹ ಇಲಾಖೆ ಆರೋಪಿಗಳನ್ನು ಬಂಧಿಸಲು ಪೊಲೀಸರಿಗೆ ಸೂಚನೆ ನೀಡಬೇಕು. ಇಲ್ಲದೇ ಹೋದಲ್ಲಿ ಹಿಂದೂ ಸಮಾಜಕ್ಕೆ ಇದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲಿದೆ ಎಂದು ಎಚ್ಚರಿಸಿದ್ದಾರೆ. ಸುಮಾರು 15-20 ಜನರಿದ್ದ ಗುಂಪೊಂದು ಶುಕ್ರವಾರ ಮಸೀದಿಯಿಂದ ನೇರವಾಗಿ ಶರತ್‌ ಕುಮಾರ್‌ ಗಟ್ಟಿ ಅವರ ಮನೆಗೆ ನುಗ್ಗಿ ಕ್ಷುಲ್ಲಕ ಕಾರಣ ಮುಂದಿಟ್ಟು ಹಲ್ಲೆ ನಡೆಸಿದೆ. ಈ ವೇಳೆ ತಡೆಯಲು ಬಂದ ಶರತ್‌ ಕುಮಾರ್‌ ಅವರ ಅಜ್ಜಿಯನ್ನು ದೂಡಿ ದಬ್ಬಾಳಿಕೆ ನಡೆಸಿದ್ದಾರೆ ಎಂದು ಕಿಶೋರ್‌ ಕುಮಾರ್‌ ಆರೋಪಿಸಿದ್ದಾರೆ.

    Continue Reading

    LATEST NEWS

    Trending