Connect with us

    DAKSHINA KANNADA

    ಮಂಗಳೂರು : ಚರ್ಚ್ ಸಭಾಪಾಲನಾ ಖಜಾಂಚಿಯಿಂದ ಲೈಂಗಿಕ ದೌರ್ಜನ್ಯ- ಆರೋಪಿಗಳನ್ನು ಇನ್ನೂ ಬಂಧಿಸದ ಪೊಲೀಸರು..!

    Published

    on

    ತುಮಕೂರಿನಲ್ಲಿ ಸಿಎಸ್ ಐ ಚರ್ಚ್ ಸಭಾಪಾಲನಾ ಸದಸ್ಯನಿಂದ ಲೈಂಗಿಕ ದೌರ್ಜನ್ಯದಿಂದ ಯುವತಿ ಸಾವನ್ನಪ್ಪಿದ ಬೆನ್ನಲ್ಲೆ ಮಂಗಳೂರಿನಲ್ಲಿ ಸಿಎಸ್ ಐ ಚರ್ಚ್ ಸಭಾಪಾಲನಾ ಪದಾಧಿಕಾರಿಗಳು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ, ದೈಹಿಕ ಕಿರುಕಳ ನೀಡಿದ ಪ್ರಕರಣ ವರದಿಯಾಗಿದೆ.

    ಮಂಗಳೂರು : ತುಮಕೂರಿನಲ್ಲಿ ಸಿಎಸ್ ಐ ಚರ್ಚ್ ಸಭಾಪಾಲನಾ ಸದಸ್ಯನಿಂದ ಲೈಂಗಿಕ ದೌರ್ಜನ್ಯದಿಂದ ಯುವತಿ ಸಾವನ್ನಪ್ಪಿದ ಬೆನ್ನಲ್ಲೆ ಮಂಗಳೂರಿನಲ್ಲಿ ಸಿಎಸ್ ಐ ಚರ್ಚ್ ಸಭಾಪಾಲನಾ ಪದಾಧಿಕಾರಿಗಳು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ, ದೈಹಿಕ ಕಿರುಕಳ ನೀಡಿದ ಪ್ರಕರಣ ವರದಿಯಾಗಿದೆ.


    ನಗರದ ಬಲ್ಮಠ ಚರ್ಚ್ ಆಫ್ ಸೌತ್ ಇಂಡಿಯ(ಸಿಎಸ್ಐ) ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅವರ ವಿನ್ಸೆಂಟ್ ಪಾಲನ್ನ, ನೊಯೆಲ್ ಕರ್ಕಡ ಸಹಿತ ಆರು ಮಂದಿಯ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದರೂ, ಪೊಲೀಸರು ಇದುವರೆಗೆ ಆರೋಪಿಗಳನ್ನು ಬಂಧಿಸಿಲ್ಲ ಎಂದು ಸಿಎಸ್ ಐ ಚರ್ಚ್ ಸದಸ್ಯರು ಆಪಾದಿಸಿದ್ದಾರೆ.

    ಪ್ರಕರಣದ ಸಂತ್ರಸ್ತೆ ಬಿಷಪ್ ಕಚೇರಿಯ ಸಹಾಯಕಿ ಆಗಿರುವ ಯುವತಿಯು ಪೊಲೀಸರ ನಿಲುವಿನ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

    ಮಂಗಳೂರು ನಗರದ ಶಾಂತಿ ಚರ್ಚಿನಲ್ಲಿ ಗುರುವಾರ ಎಲ್ಲ ಆರೋಪಿಗಳು ಸೇರಿಕೊಂಡು ಸಭಾಪಾಲನಾ ಇನ್ನುಳಿದ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಯಲ್ಲಿ ಬಹಿರಂಗವಾಗಿ ತೊಡಗಿದ್ದರೂ ಪೊಲೀಸರು ಬಂಧಿಸದೇ ಇರುವುದು ಆಶ್ಚರ್ಯ ಉಂಟು ಮಾಡಿದೆ.

    ಸಂತ್ರಸ್ಥ ಮಹಿಳೆ ಕಳೆದ 10 ವರ್ಷಗಳಿಂದ ಕ್ರೈಸ್ತ ಧರ್ಮದ ಪ್ರತ್ಯೇಕ ಪಂಗಡವಾದ ಚರ್ಚ್ ಆಫ್ ಸೌತ್ ಇಂಡಿಯಾ (CSI) ಬಿಷಪ್ ಹೌಸ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು.

    ಇಂದು ಶಾಂತಿ ಚರ್ಚ್ ಸಮೀಪ ಮಾಧ್ಯಮವರೊಂದಿಗೆ ಮಾತನಾಡಿದ ಸಂತ್ರಸ್ತ ಮಹಿಳೆ, ಕಳೆದ 4 ವರ್ಷಗಳಿಂದ ಖಜಾಂಚಿ ವಿನ್ಸೆಂಟ್ ಪಾಲನ್ನ, ಕಾನೂನು ಸಲಹೆಗಾರ ಫಾದರ್ ನೋಯಲ್ ಕರ್ಕಡ ದೈಹಿಕ, ಮಾನಸಿಕ, ಲೈಂಗಿಕ ಕಿರುಕುಳ ನೀಡಿದ್ದಾರೆ.

    ಅಲ್ಲದೇ ಕೆಲಸದಿಂದ ತೆಗೆಯಲು ಯತ್ನಿಸಿರುವ ಬಗ್ಗೆ ಸಂತ್ರಸ್ಥ ಮಹಿಳೆ ಆರೋಪ ಮಾಡಿದ್ದಾರೆ.

    ಕೆಲವು ದಿನಗಳ ಹಿಂದೆ ಸಂತ್ರಸ್ಥ ಮಹಿಳೆ ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಪೊಲೀಸರಿಗೆ ದೂರು ನೀಡಿದ್ದಾರೆ.

    ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ ಸಂತ್ರಸ್ಥೆಯನ್ನು ಖುದ್ದು ಭೇಟಿಯಾಗಿ, ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ 1860(U/s-354(A), 354(D), 506, 34, 504, 354 ಕಲಂ ಅಡಿ ಪ್ರಕರಣ ದಾಖಲಿಸಿದ್ದಾರೆ.

    ಪೊಲೀಸರು ಪ್ರಕರಣದ ಸತ್ಯಾಸತ್ಯತೆ ತಿಳಿಯಲು ತನಿಖೆ ನಡೆಸಬೇಕಾಗಿದೆ ಎಂದಿದ್ದಾರೆ.

    ಚರ್ಚಿನ ಸದಸ್ಯರು ಅಲ್ಲದೆ, ಮಂಗಳೂರು ಧರ್ಮಪ್ರಾಂತ್ಯಕ್ಕೆ ಸೇರಿದ ಚಾಮರಾಜ ನಗರ, ಮೈಸೂರು, ಕೊಡಗು, ಉಡುಪಿ, ಹಾಸನ ಜಿಲ್ಲೆಗಳ ಸಿಎಸ್ಐ ಚರ್ಚಿನ ಸದಸ್ಯರು ಇಂದು ಚರ್ಚಿನ ಆವರಣದಲ್ಲಿ ಜಮಾಯಿಸಿದ್ದರು.

    ಆರೋಪಿಗಳು ಭಾಗವಹಿಸುತ್ತಿರುವ ಚುನಾವಣೆಯು ಕಾನೂನು ಬಾಹಿರ, ಅನೈತಿಕ ಮತ್ತು ಧರ್ಮವಿರೋಧಿ ಎಂದು ಚರ್ಚ್ ಸದಸ್ಯರು ಆರೋಪಿಸಿದ್ದಾರೆ.

    ಆರೋಪಿಗಳೊಂದಿಗೆ ಬಿಷಪರು ಶಾಮೀಲಾಗಿದ್ದಾರೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending