Connect with us

DAKSHINA KANNADA

ಮಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ- ಅಪರಾಧಿಗೆ ಮೂರು ವರ್ಷ ಜೈಲು ಶಿಕ್ಷೆ..!

Published

on

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ಮತ್ತು ಎಫ್ಟಿಎಸ್ಸಿ-1(ಪೊಕ್ಸೊ) ನ್ಯಾಯಾಲಯವು ಪೋಕ್ಸೊ ಸೇರಿ ವಿವಿಧ ಕಾಯಿದೆಗಳಡಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಮಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ಮತ್ತು ಎಫ್ಟಿಎಸ್ಸಿ-1(ಪೊಕ್ಸೊ) ನ್ಯಾಯಾಲಯವು ಪೋಕ್ಸೊ ಸೇರಿ ವಿವಿಧ ಕಾಯಿದೆಗಳಡಿ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ನಗರದ ಬಜಪೆ ನಿವಾಸಿ ಅಬ್ದುಲ್ ಹಮೀದ್ (50) ಶಿಕ್ಷೆಗೊಳಗಾದ ಅಪರಾಧಿ…

ಅಪರಾಧಿ ಅಬ್ದುಲ್ ಹಮೀದ್ 2021ರ ಜೂ.3ರಂದು ನೆರೆಮನೆ ಬಾಲಕಿ ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಿದ್ದ.

ಲೈಂಗಿಕ ಕಿರುಕುಳ ನೀಡಿದ ಬಳಿಕ ಈತ ಬಾಲಕಿಗೆ ಬೆದರಿಕೆಯೊಡ್ಡಿದ್ದ ಎಂದು ಆರೋಪಿಸಲಾಗಿತ್ತು.

ಈ ಬಗ್ಗೆ ಬಜಪೆ ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ಸಂಬಂಧ ತನಿಖೆ ನಡೆಸಿದ ಇನ್ಸ್​ಪೆಕ್ಟರ್​​ ರಾಘವೇಂದ್ರ ನಾಯ್ಕ ಅವರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಪ್ರಕರಣ ಸಂಬಂಧ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಅಪರಾಧಿ ಅಬ್ದುಲ್ ಹಮೀದ್​ಗೆ ಪೋಕ್ಸೊ ಕಾಯ್ದೆಯ ಕಲಂ 8ರಡಿ ಮೂರು ವರ್ಷ ಸಾದಾ ಸಜೆ ಮತ್ತು ಐದು ಸಾವಿರ ರೂ. ದಂಡ, ಐಪಿಸಿ ಸೆಕ್ಷನ್ 448ರಡಿ 6 ತಿಂಗಳ ಸಾದಾ ಸಜೆ, ಕಲಂ 354ರಡಿ 1 ವರ್ಷ ಸಾದಾ ಸಜೆ ಮತ್ತು 1,000 ರೂ. ದಂಡ, ಐಪಿಸಿ ಸೆಕ್ಷನ್ 323ರಡಿ 6 ತಿಂಗಳ ಸಾದಾ ಸಜೆ ಮತ್ತು 1,000 ರೂ. ದಂಡ, ಐಪಿಸಿ ಸೆಕ್ಷನ್ 506ರಡಿ 1 ವರ್ಷ ಸಾದಾ ಸಜೆ ಹಾಗೂ 1,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೇ ಸಂತ್ರಸ್ತ ಬಾಲಕಿಗೆ 1 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ವಾದ ಮಂಡಿಸಿದ್ದರು.

1 Comment

1 Comment

  1. Robert Franklin Rego

    02/03/2023 at 8:52 PM

    Very heartening. May the Lord bless our new Police Commissioner.
    Hope he is allowed to work sincerely.

    Thxs
    Robert Franklin Rego Bajpe Malavoor.

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending