Connect with us

DAKSHINA KANNADA

ಶತಮಾನೋತ್ಸವ ಸಂಭ್ರಮದಲ್ಲಿ ಈ ಬಾರಿ ಮಂಗಳೂರು ಶಾರದೆ..

Published

on

ಮಂಗಳೂರು: ದ.ಕ ಜಿಲ್ಲೆಯ ಹೆಸರಾಂತ ಉತ್ಸವಗಳಲ್ಲಿ ಅತೀ ಪ್ರಸಿದ್ಧ್ದವಾದ ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ 100ನೇ ವರ್ಷದ ಕಾರ್ಯಕ್ರಮಗಳನ್ನು ಎಂದಿನ೦ತೆ ಮಂಗಳೂರು ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ನೂತನ ವಸಂತ ಮಂಟಪದಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ನಡೆಸುವುದೆಂದು ನಿಶ್ಚಯಿಸಲಾಗಿದೆ.

ಎಲ್ಲಾ ಕಾರ್ಯಕ್ರಮಗಳಲ್ಲಿ ಭಗವತ್ ಭಕ್ತರು ತನು-ಮನ-ಧನಗಳಿಂದ ಪಾಲುಗೊಂಡು ಶ್ರೀ ದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ದೇಗುಲದ ಆಡಳಿತ ಮಂಡಳಿ ವಿನಂತಿಸಿಕೊಂಡಿದೆ.


ಮಂಗಳೂರು ಶ್ರೀ ಶಾರದಾ ಮಹೋತ್ಸವವು ನವರಾತ್ರಿಯ ಪರ್ವಕಾಲವು ಮಂಗಳೂರನ್ನು ಪ್ರವಾಸೋದ್ಯಮ ನಕ್ಷೆಯಲ್ಲಿ ಇರಿಸುವ ವಾರ್ಷಿಕ ಆಚರಣೆಯಾಗಿದ್ದು, ಈ ಉತ್ಸವವನ್ನು ಭವ್ಯ ಪರಂಪರೆಯ ಮೈಸೂರು ದಸರಾಕ್ಕೆ ಎರಡನೆಯದು ಎಂದು ಹೇಳಿದರೆ ಅತಿಶಯೋಕ್ತಿಯಾಗಲಾರದು.

ಅಲ್ಲದೇ ಏಕೀಕೃತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವಗಳಲ್ಲಿ ಹೆಗ್ಗುರುತಾಗಿರುವ ಈ ಉತ್ಸವದ ಪರಂಪರೆಯನ್ನು ಎಲ್ಲರೂ ಅನುಸರಿಸುವುದು ಹೆಮ್ಮೆಯ ವಿಷಯ.

ಸಾರ್ವಜನಿಕ ಮಂಗಳೂರು ಶ್ರೀ ಶಾರದಾ ಮಹೋತ್ಸವದ ಶತಮಾನೋತ್ಸವದ ಆಚರಣೆಯು ಇಂದಿನಿಂದ ಅ.6ರವರೆಗೆ ಶ್ರೀ ಆಚಾರ್ಯಮಠದ ವಸಂತ ಮಂಟಪದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.

ಶ್ರೀ ಸಹಸ್ರ ಚಂಡಿಕಾಯಾಗ, ಸೇವಾ ರೂಪದ ಕಾರ್ಯಕ್ರಮಗಳಲ್ಲಿ ಪ್ರಮುಖವಾಗಿ ವಿದ್ಯಾ ಸರಸ್ವತಿ, ಸಾಧನಾ ಸರಸ್ವತಿ, ಕಲಾ ಸರಸ್ವತಿ, ಆರೋಗ್ಯ ಸರಸ್ವತಿ ಮತ್ತು ಅನ್ನಪೂರ್ಣ ಸರಸ್ವತಿ ಸೇವೆಗಳು ನಡೆಯಲಿರುವುದು.

ಇಂದು ಬೆಳಿಗ್ಗೆ 10.30ಕ್ಕೆ ನೆಹರು ಮೈದಾನದಿಂದ ಬೃಹತ್ ಹೊರೆಕಾಣಿಕೆ ಹೊರಡಿದ್ದು ವಾಹನ ಜಾಥದಲ್ಲಿ ಶ್ರೀ ಶಾರದಾ ಮಾತೆಗೆ ಅರ್ಪಿಸುವ ರಜತ ಪೀಠ, ಪ್ರಭಾವಳಿ, ಸ್ವರ್ಣ ಆರತಿ, ಸ್ವರ್ಣ ನವಿಲು, ಸ್ವರ್ಣ ವೀಣೆ, ಸ್ವರ್ಣ ಕೈಬಳೆ, ಹಾಗೂ ಇತರ ಸ್ವರ್ಣಾಭರಣಗಳು ಮೆರವಣಿಗೆಯೊಂದಿಗೆ ಹೊರಡಲಿರುವುದು.

ಇಂದು ರಾತ್ರಿ 8ಗಂಟೆಗೆ ರಾಜಾಂಗಣದಿದ ಉಮಾಮಹೇಶ್ವರ ದೇವಳ ರಸ್ತೆ, ರಾಮಮಂದಿರ, ನಂದಾದೀಪ ರಸ್ತೆ, ಹೂ ಮಾರ್ಕೆಟ್ ಅಡ್ಡರಸ್ತೆ, ಹೂಮಾರ್ಕೆಟ್, ರಥಬೀದಿಯಾಗಿ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಉತ್ಸವಸ್ಥಾನಕ್ಕೆ ಪ್ರತಿಷ್ಠೆಗೆ ತರಲಾಗುವುದು.

ನಾಳೆ ಬೆಳಿಗ್ಗೆ 7.30 ಗಂಟೆಗೆ ಶ್ರೀ ಕಾಶೀಮಠಾಧಿಪತಿ ಶ್ರೀಮದ್ ಸಂಯಮೀ೦ದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ, ಸಹಸ್ರ ಚಂಡಿಕಾ ಯಾಗದ ಮಹಾ ಪೂರ್ಣಾಹುತಿ ನಡೆಯಲಿದ್ದು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ವಿಶೇಷ ದೀಪಾಲಂಕಾರ ಸೇವೆ ನಡೆಯಲಿದೆ.

ಇನ್ನು ನವರಾತ್ರಿಯ ಪ್ರತಿ ದಿನ ಸರಸ್ವತಿ ಕಲಾ ಮಂಟಪದಲ್ಲಿ ಸಾಯಂಕಾಲದಿಂದ ರಾತ್ರಿಯವರೆಗೆ ದೇಶದ ವಿವಿಧ ಭಾಗಗಳಿಂದ ಅನೇಕ ಹೆಸರಾಂತ ಕಲಾವಿಧರಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜರುಗಲಿದೆ.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನಾನುಕೂಲ ಇರುವ ಭಜಕರಿಗಾಗಿ ಸಮಿತಿಯ ಅಧಿಕೃತ ಯೌಟ್ಯೂಬ್ ಚಾನೆಲ್ ಹಾಗೂ ನಮ್ಮ ಕುಡ್ಲ ಚಾನೆಲ್ ನಲ್ಲಿ ನೇರ ಪ್ರಸಾರ ಕಾರ್ಯಕ್ರಮ ಸಂಯೋಜಿಸಲಾಗಿದೆ.

ಅ.5 ಬುಧವಾರದಂದು ಸ೦ಜೆ 4ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನಾ ಪೂಜೆ, ಸಾಯಂಕಾಲ ಗಂಟೆ 6ರಿಂದ ವಿಶೇಷ ದೀಪಾಲಂಕಾರ ಸೇವೆ, ರಾತ್ರಿ 10 ಗಂಟೆಗೆ ರಾತ್ರಿ ಪೂಜೆ ನೆರವೇರಲಿದೆ.
ಅ.6ರಂದು ಗುರುವಾರ ಸಂಜೆ ಗಂಟೆ 5ಕ್ಕೆ ಪೂರ್ಣಾಲಂಕಾರಗೊ೦ಡ ಶ್ರೀ ಶಾರದಾ ಮಾತೆಯ ದರ್ಶನವನ್ನು ಪಡೆಯಬಹುದು.

ರಾತ್ರಿ 10 ಗಂಟೆಗೆ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆಯು ಉತ್ಸವಸ್ಥಾನದಿಂದ ಹೊರಟು ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್, ಬಸವನ ಗುಡಿ, ಚಾಮರಗಲ್ಲಿ ರಥಬೀದಿಯಾಗಿ ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜನೆ. ಎಂದು ಶ್ರೀ ಶಾರದೋತ್ಸವ ಸಮಿತಿಯ ಕಾರ್ಯದರ್ಶಿಗಳಾದ ಅಡಿಗೆ ಬಾಲಕೃಷ್ಣ ಶೆಣೈ ಈ ಮೂಲಕ ತಿಳಿಸಿದ್ದಾರೆ.

ಈ ಬಾರಿ ಶತಮಾನೋತ್ಸವ ಸವಿನೆನಪಿಗಾಗಿ ಶ್ರೀ ಶಾರದಾ ಮಾತೆಗೆ ಭಜಕರಿಂದ ದೇಣಿಗೆ ರೂಪದಲ್ಲಿ ಸ್ವರ್ಣ ನವಿಲು ಸುಮಾರು 750 ಗ್ರಾಮ್ಸ್ ಚಿನ್ನದಿಂದ ತಯಾರಿಸಲಾಗಿದೆ,

ಸ್ವರ್ಣ ವೀಣೆ ಸುಮಾರು 6 ಕಿಲೋ ಬೆಳ್ಳಿ ಹಾಗು ೫೦೦ ಜಿಮ್ಸ್ ಚಿನ್ನದಿಂದ ತಯಾರಿಸಲಾಗಿದೆ, 16 ಪವನ್ ಚಿನ್ನದ ಕೈ ಕಡಗ ಶ್ರೀ ನಾಗರಾಜ್ ಪೈ ಕುಟುಂಬಸ್ಥರು ಸೇವೆ ಸಲ್ಲಿಸಿರುತ್ತಾರೆ,

ನೂತನ ರಜತ ಸಿಂಹಾಸನ ಹಾಗೂ ಪೀಠ ಪ್ರಭಾವಳಿ ಸುಮಾರು 35 ಕಿಲೋ ಬೆಳ್ಳಿಯಿಂದ ತಯಾರಿಸಲಾಗಿದ್ದು ಶ್ರೀ ಮಾತೆಗೆ ಸಮರ್ಪಣೆಗೊಳ್ಳಲಿದೆ.

ಸ್ವರ್ಣ ಆರತಿ 21 ಪವನ್ ಚಿನ್ನದಿಂದ ತಯಾರಿಸಲಾಗಿದ್ದು ಯಸ್ . ವಿ . ಟಿ ಮ್ಯಾಟ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಸಮರ್ಪಿಸಲಾಗುತ್ತಿದೆ.

ಈ ಬಾರಿ ವಿಶೇಷವಾಗಿ 8 ಲಕ್ಷ ಮೌಲ್ಯದ ಸ್ವರ್ಣ ಜರಿ ಹಾಗೂ 1800 ಸ್ವರ್ಣ ಹೂವಿನಿಂದ ಸೀರೆ ತಯಾರಿಸಲಾಗಿದ್ದು ಶೋಭಾಯಾತ್ರೆಯ ದಿನಂದಂದು ಶ್ರೀ ಮಾತೆಗೆ ಈ ಸೀರೆಯನ್ನು ಉಡಿಸಲಾಗುವುದು ಎಂದು ಶಾರದೋತ್ಸವ ಸಮಿತಿಯ ಮಾಧ್ಯಮ ಸಂಯೋಜಕ ಮಂಜು ನೀರೇಶ್ವಾಲ್ಯ ತಿಳಿಸಿರುತ್ತಾರೆ .

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending