Sunday, November 27, 2022

ಮಂಗಳೂರು : ಒಂಟಿ ಮಹಿಳೆಯರೇ ಇವರ ಟಾರ್ಗೆಟ್ – ಮೂವರ ಬಂಧನ..!

ಮಂಗಳೂರು: ಮಂಗಳೂರು ನಗರದ ವಿವಿಧ ಕಡೆ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕುಲಶೇಖರ ಶಕ್ತಿನಗರ ನಿವಾಸಿ ಜಗದೀಶ್ ಶೆಟ್ಟಿ (39), ಉರ್ವಸ್ಟೋರ್ ನಿವಾಸಿ ಸುಜಿತ್ ಶೆಟ್ಟಿ (40), ಪುತ್ತೂರು ಪದವಿನಂಗಡಿ ನಿವಾಸಿ ಸುರೇಶ್ ರೈ (39) ಬಂಧಿತ ಆರೋಪಿಗಳಾಗಿದ್ದಾರೆ.‌.

ಆರೋಪಿಗಳಿಂದ ಸುಲಿಗೆ ಮಾಡಿದ್ದ 90 ಗ್ರಾಂ ತೂಕದ ಚಿನ್ನಾಭರಣ, 2 ಸ್ಕೂಟರ್ ಮತ್ತು 3 ಮೊಬೈಲ್ ಫೋನ್ ಸಹಿತ ಒಟ್ಟು 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಗಸ್ಟ್‌ನಲ್ಲಿ ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2 ಸರ ಸುಲಿಗೆ ಮತ್ತು ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 1 ಸರ ಸುಲಿಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿದ್ದ ಸಿಸಿಬಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ನಗರದ ಕಾರ್ ಸ್ಟ್ರೀಟ್ ಬಳಿ ಚಿನ್ನದ ಸರವನ್ನು ಮಾರಾಟ ಮಾಡಲು ಬಂದಾಗ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ‌.

ಆರೋಪಿಗಳ ಪೈಕಿ ಜಗದೀಶ್ ರಿಕ್ಷಾ ಮತ್ತು ಸುರೇಶ್ ರೈ ಟೆಂಪೋ ಚಾಲಕ ಹಾಗೂ ಸುಜಿತ್ ಶೆಟ್ಟಿ ಪೈನಾನ್ಸ್ ವ್ಯವಹಾರ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ
ಸುಜಿತ್ ಶೆಟ್ಟಿ ಮಂಗಳೂರಿನಲ್ಲಿ 2002ರಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ‌.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...