Connect with us

DAKSHINA KANNADA

ಮಂಗಳೂರು: ಮದುವೆಯಾದ 6 ತಿಂಗಳಲ್ಲೆ ಪತ್ನಿಗೆ ಮಾರಾಣಾಂತಿಕ ಹಲ್ಲೆ ನಡೆಸಿ ತಲಾಖ್

Published

on

ತ್ರಿವಳಿ ತಲಾಖ್ ನಿಷೇಧಿಸಲ್ಪಟ್ಟಿದ್ದರೂ ಇದೀಗ ಮಂಗಳೂರಿನಲ್ಲಿ ಮತ್ತೇ ಬೆಳಕಿಗೆ ಬಂದಿದೆ.

ಮಂಗಳೂರು: ತ್ರಿವಳಿ ತಲಾಖ್ ನಿಷೇಧಿಸಲ್ಪಟ್ಟಿದ್ದರೂ ಇದೀಗ ಮಂಗಳೂರಿನಲ್ಲಿ ಮತ್ತೇ ಬೆಳಕಿಗೆ ಬಂದಿದೆ.

ಮಾರ್ನಮಿ ಕಟ್ಟೆಯ ಮಹಮ್ಮದ್ ಹುಸೇನ್​ ಎಂಬಾತನು ಮದುವೆಯಾಗಿ ಆರು ತಿಂಗಳು ಆದಗಲೇ ಆತನ ಪತ್ನಿಯ ಮೇಲೆ ಹಲ್ಲೆ ನಡೆಸಿ ತಲಾಖ್ ನೀಡಿ ಆಕೆಯನ್ನು ಮನೆಯಿಂದ ಹೊರದಬ್ಬಿದ್ದಾನೆ.

ಹಣ್ಣು ತರಕಾರಿ ವ್ಯಾಪಾರಿಯಾಗಿದ್ದ ಮಾರ್ನಮಿ ಕಟ್ಟೆಯ ಮಹಮ್ಮದ್ ಹುಸೇನ್​ 6 ತಿಂಗಳ ಹಿಂದೆ​ ಶಬನಾ ಎಂಬಾಕೆಯನ್ನು ಮದುವೆಯಾಗಿ ಆಕೆಯ ಮೇಲೆ ಹಲ್ಲೆ ನಡೆಸಿ ತಲಾಖ್ ಕೊಟ್ಟು ಆಕೆಯನ್ನು ಮನೆಯಿಂದ ಹೊರಹಾಕಿದ್ದಾನೆ ಎನ್ನಲಾಗಿದೆ.

ಹುಸೇನ್​ ನನು ಶಬಾನಾ ಎಂಬವರನ್ನು ಎರಡನೇ ಮದುವೆಯಾಗಿದ್ದು, ಮೊದಲ ಪತ್ನಿಗೆ 2 ಮಕ್ಕಳು ಇದ್ದು, ಆಕೆಯಿಂದ ಹಣ ಪಟಾಯಿಸಿ ತಲಾಕ್ ನೀಡಿದ್ದನು.

ಬಳಿಕ ಶಬಾನಾ ಅವರನ್ನು ಮದುವೆಯಾಗಿ 8 ದಿನದಲ್ಲಿ ಹಣ ಒಡವೆ ಸೇರಿ 10 ಲಕ್ಷ ರೂ. ಹಣ ಪಟಾಯಿಸಿದ್ದಾನೆ.

ಅಲ್ಲದೆ ಮತ್ತೆ ಹಣಕ್ಕಾಗಿ ಪೀಡಿಸಿ ಆಕೆಯ ಮೇಲೆ ಮಾರಣಾಂತಿಕ ಹಲ್ಲೆನಡೆಸಿದ್ದು, ಅಲ್ಲದೆ 3 ಬಾರಿ ತಲಾಖ್ ಹೇಳಿ ಮನೆಯಿಂದ ಹೊರದಬ್ಬಿದ್ದಾನೆ.

ಇದೀಗ ಗಾಯಗೊಂಡಿರುವ ಶಬಾನಾ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪತಿಯ ಅನ್ಯಾಯದಿಂದ ಪತ್ನಿ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಚುನಾವಣಾ ಆಯೋಗಕ್ಕೆ ದೂರು

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending