Connect with us

DAKSHINA KANNADA

ಮಂಗಳೂರು : ಪಾಪಿ ಉಗ್ರರ ದಾಳಿಯಿಂದಾಗಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ..!

Published

on

ಮಂಗಳೂರಿನ ಕದ್ರಿಯಲ್ಲಿರುವ ಸೈನಿಕ ಸ್ಮಾರಕದಲ್ಲಿ ನಗರದ ಪ್ರಮುಖರು ಸೇರಿ ರಾಷ್ಟ್ರಸೇವೆಗಾಗಿ ಬಲಿದಾನ ಗೈದು ಹುತಾತ್ಮರಾದ ರಾಷ್ಟ್ರೀಯ ರೈಫಲ್ಸ್‌ನ ಸೈನಿಕರಾದ ಹವಾಲ್ದಾರ್ ಮನ್‌ದೀಪ್ ಸಿಂಗ್, ಲ್ಯಾನ್ಸ್ ನಾಯಕ್ ಕುಲವಂತ್ ಸಿಂಗ್‌, ಲ್ಯಾನ್ಸ್ ನಾಯಕ್ ದೇಬಶೀಷ್, ಸಿಪಾಯಿ ಸೇವಕ್ ಸಿಂಗ್ ಮತ್ತು ಸಿಪಾಯಿ ಹರ್‌ ಕಿಶನ್ ಸಿಂಗ್ ರವರ ಬಲಿದಾನವನ್ನು ಸ್ಮರಿಸಿ,
ಪುಷ್ಪಾಂಜಲಿ ಮತ್ತು ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು.

ಮಂಗಳೂರು: ಮಂಗಳೂರಿನ ಕದ್ರಿಯಲ್ಲಿರುವ ಸೈನಿಕ ಸ್ಮಾರಕದಲ್ಲಿ ನಗರದ ಪ್ರಮುಖರು ಸೇರಿ ರಾಷ್ಟ್ರಸೇವೆಗಾಗಿ ಬಲಿದಾನ ಗೈದು ಹುತಾತ್ಮರಾದ ರಾಷ್ಟ್ರೀಯ ರೈಫಲ್ಸ್‌ನ ಸೈನಿಕರಾದ ಹವಾಲ್ದಾರ್ ಮನ್‌ದೀಪ್ ಸಿಂಗ್, ಲ್ಯಾನ್ಸ್ ನಾಯಕ್ ಕುಲವಂತ್ ಸಿಂಗ್‌, ಲ್ಯಾನ್ಸ್ ನಾಯಕ್ ದೇಬಶೀಷ್, ಸಿಪಾಯಿ ಸೇವಕ್ ಸಿಂಗ್ ಮತ್ತು ಸಿಪಾಯಿ ಹರ್‌ ಕಿಶನ್ ಸಿಂಗ್ ರವರ ಬಲಿದಾನವನ್ನು ಸ್ಮರಿಸಿ,
ಪುಷ್ಪಾಂಜಲಿ ಮತ್ತು ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು.

ಸೇನೆಯ ರಾಷ್ಟ್ರೀಯ ರೈಫಲ್ಸ್‌ ತುಕಡಿಗೆ ಸೇರಿದ ಜಮ್ಮುವಿನ ಪೂಂಚ್-ರಜೌರಿ ವಿಭಾಗದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯದಲ್ಲಿ ತೊಡಗಿದ್ದ ಸೇನಾ ವಾಹನವೊಂದರ ಮೇಲೆ ಭಯೋತ್ಪಾದಕರು ಗ್ರೆನೇಡ್ ಹಾಗೂ ಅತ್ಯಾಧುನಿಕ ವಿದೇಶಿ ಶಸ್ತ್ರಾಸ್ತ್ರಗಳ ಮೂಲಕ ನಡೆಸಿದ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದು, ಓರ್ವ ಸೈನಿಕ ತೀವ್ರ ಗಾಯಗೊಂಡಿರುತ್ತಾನೆ.

ಸೇನಾ ವಾಹನ ಹೊತ್ತಿ ಉರಿದು ನಾಶವಾಗಿರುತ್ತದೆ.

ಇಂದು ಸಂಜೆ ಮಂಗಳೂರಿನ ಕದ್ರಿಯಲ್ಲಿರುವ ಸೈನಿಕ ಸ್ಮಾರಕದಲ್ಲಿ ನಗರದ ಪ್ರಮುಖರು ಸೇರಿ ರಾಷ್ಟ್ರಸೇವೆಗಾಗಿ ಬಲಿದಾನ ಗೈದು ಹುತಾತ್ಮರಾದ ರಾಷ್ಟ್ರೀಯ ರೈಫಲ್ಸ್‌ನ ಸೈನಿಕರಾದ ಹವಾಲ್ದಾರ್ ಮನ್‌ದೀಪ್ ಸಿಂಗ್, ಲ್ಯಾನ್ಸ್ ನಾಯಕ್ ಕುಲವಂತ್ ಸಿಂಗ್‌, ಲ್ಯಾನ್ಸ್ ನಾಯಕ್ ದೇಬಶೀಷ್, ಸಿಪಾಯಿ ಸೇವಕ್ ಸಿಂಗ್ ಮತ್ತು ಸಿಪಾಯಿ ಹರ್‌ ಕಿಶನ್ ಸಿಂಗ್ ರವರ ಬಲಿದಾನವನ್ನು ಸ್ಮರಿಸಿ,
ಪುಷ್ಪಾಂಜಲಿ ಮತ್ತು ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಮರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಹುತಾತ್ಮರಾದ ಸೈನಿಕರ ರಾಷ್ಟ್ರ ಸಮರ್ಪಿತ ಬದುಕು ನಮ್ಮೆಲ್ಲರಿಗೂ ಪ್ರೇರಣೆ ನೀಡುವಂತಾಗಲಿ ಹಾಗೂ ದೇಶವಾಸಿಗಳಾದ ನಾವು ಮಾಡುವ ಎಲ್ಲ ಕೆಲಸಗಳಲ್ಲಿ ರಾಷ್ಟ್ರ ಮೊದಲು ಎನ್ನುವ ದೇಶಾಭಿಮಾನವನ್ನು ಜಾಗೃತಗೊಳಿಸಲಿ ಎಂದು ವಿಧಾನ ಪರಿಷತ್‌ನ ಮಾಜಿ ಸದಸ್ಯ ಹಾಗೂ ಮಾಜಿ ಯೋಧ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸುತ್ತಾ, ಪಾಪಿ ಉಗ್ರರ ಈ ದುಷ್ಕೃತ್ಯವನ್ನು ದೇಶವಾಸಿಗಳ ಪರವಾಗಿ ತೀವ್ರವಾಗಿ ಖಂಡಿಸಿದರು.

ಭಾಜಪಾದ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮನಪಾ ಸದಸ್ಯ ಮನೋಹರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಭಾಜಪಾದ ಜಿಲ್ಲಾ ಕಾರ್ಯದರ್ಶಿ ಪೂಜಾ ಪೈ, ಹಿರಿಯ ವಕೀಲರು ಹಾಗೂ ಭಾಜಪಾ ಜಿಲ್ಲಾ ವಕ್ತಾರ ಜಗದೀಶ್ ಶೇಣವ ಮತ್ತು ಪ್ರಮುಖರಾದ ಕೃಷ್ಣಪ್ಪ ಪೂಜಾರಿ, ಸಂತೋಷ್ ನಾಯಕ್ ಮತ್ತಿತರ ಗಣ್ಯರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

DAKSHINA KANNADA

ಪುತ್ತೂರಿನಲ್ಲಿ ಭೀ*ಕರ ಅಪಘಾ*ತ; ರಿಕ್ಷಾ ಚಾಲಕ ಸಾ*ವು

Published

on

ಪುತ್ತೂರು : ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃ*ತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.

ಆಟೋ ರಿಕ್ಷಾ ಚಾಲಕ 30 ವರ್ಷದ ಜೈಸನ್ ಮೃ*ತಪಟ್ಟವರು. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿದೆ.

ಇದನ್ನೂ ಓದಿ : ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ

ಅಪಘಾತದ ತೀವ್ರತೆಗೆ ರಿಕ್ಷಾ ನಜ್ಜುಗುಜ್ಜಾಗಿದೆ. ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್‌ ಅವರನ್ನು ಹೊರತೆಗೆದಿದ್ದಾರೆ. ಆದರೆ, ಜೈಸನ್ ಆಗಲೇ ಇಹಲೋಕ ತ್ಯಜಿಸಿದ್ದರು.

Continue Reading

DAKSHINA KANNADA

ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ

Published

on

ಉಪ್ಪಿನಂಗಡಿ: ಇತ್ತೀಚಿನ ದಿನಗಳಲ್ಲಿ ಕಡೆ ಕ್ಷಣದಲ್ಲಿ ಅದೆಷ್ಟೋ ಮದುವೆಗಳು ಮುರಿದು ಬಿದ್ದ ಘಟನೆ ನಡೆದಿದೆ. ಹಾಗೆಯೇ ಇಲ್ಲೊಂದು ಮದುವೆ ಮಂಟಪದಲ್ಲಿ ಕೊನೆಯ ಕ್ಷಣ ವರನಿಂದ ತಾಳಿ ಕಟ್ಟಲು ವಧು ನಿರಾಕರಸಿದ ಕಾರಣ ಮದುಮೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ.

ಕೊಣಾಲು ಗ್ರಾಮದ ಕೋಲ್ಪೆ ದಿ। ಬಾಬು ಗೌಡ ಅವರ ಪುತ್ರ ಉಮೇಶ ಅವರ ಮದುವೆಯು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ। ಕೊರಗಪ್ಪ ಗೌಡ ಅವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಎ.26 ರಂದು ಬೆಳಗ್ಗೆ 11.35ರ ಮೂಹೂರ್ತದಲ್ಲಿ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಮದುವೆ ನಿಗದಿಯಾಗಿತ್ತು. ಅದರಂತೆ ವರ ಹಾಗೂ ವಧುವಿನ ಕಡೆಯವರು ಮದುವೆಯ ದಿಬ್ಬಣದಲ್ಲಿ ಬಂದಿದ್ದರು. ವಧು ದಾರೆ ಸೀರೆ ಹಾಕಿ ಪರಸ್ಪರ ಹೂಮಾಲೆ ಕೂಡ ಹಾಕಿದ್ದರು. ಆದರೆ ತಾಳಿ ಕಟ್ಟಲು ಮುಂದಾದಗ ನನಗೆ ಈ ಮದುವೆ ಇಷ್ಟ ವಿಲ್ಲ ಎಂದು ವಧು ಹೇಳಿದ್ದಾಳೆ.

ಇದರಿಂದ ಎರಡೂ ಕಡೆಯವರು ಕಂಗಾಲಾಗಿ ವಧುವಿನ ಮನವೊಲಿಕೆಗೆ ಮುಂದಾದರು. ಆದರೆ ವಧು ಒಪ್ಪಲಿಲ್ಲ. ಬಳಿಕ ಎರಡೂ ಕಡೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದರು.

ಔತಣ ಕೂಟಕ್ಕೆ ಸಿದ್ಧತೆ:

ವರನ ಮನೆಯಲ್ಲಿ ಮಧ್ಯಾಹ್ನದ ಔತಣ ಕೂಟಕ್ಕೆ ಸುಮಾರು 500 ಜನರಿಗೆ ಮಾಂಸಾಹಾರಿ ಊಟ ತಯಾರಾಗಿತ್ತು. 1 ಸಾವಿರದಷ್ಟು ಐಸ್‌ಕ್ರೀಮ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಮದುವೆ ಮುರಿದು ಬಿದ್ದ ಕಾರಣ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಮತ್ತೆ ಮದುವೆಯಾಗಲು ಒಪ್ಪಿದ ವಧು:

ಪೊಲೀಸ್ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಮತ್ತೆ ಮದುವೆ ಆಗಲು ಒಪ್ಪಿದ್ದರು. ಆದರೆ ಆಗ ವರ ಉಮೇಶ್ ಅವರು ಮದುವೆ ಆಗಲು ನಿರಾಕರಿಸಿದರು. ಇದರಿಂದಾಗಿ ಎರಡೂ ಕಡೆಯವರು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಯಿಸಿಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.

Continue Reading

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

LATEST NEWS

Trending