Connect with us

LATEST NEWS

ನರೇಂದ್ರ ಮೋದಿ ಸಹಯೋಗದಲ್ಲಿ ನೃತ್ಯ ಪ್ರದರ್ಶನ ನೀಡಲಿರುವ ಮಂಗಳೂರಿನ ವಿಧುಷಿ ಪಲ್ಲವಿ ತಂಡ

Published

on

ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರಿನ ನೃತ್ಯ ತಂಡವು ಭಾಗವಹಿಸಲಿದೆ. 

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರಿನ ನೃತ್ಯ ತಂಡವು ಭಾಗವಹಿಸಲಿದೆ.

ಈ ಕಾರ್ಯಕ್ರಮವನ್ನು  20,000 ಕ್ಕೂ ಅಧಿಕ ಜನರು ವೀಕ್ಷಸಲಿದ್ದಾರೆ.

ಮೋದಿ ಎಕ್ಸ್‌ಪ್ರೆಸ್ ಎಂಬ ಚಾರ್ಟೆಡ್ ಫ್ಲೈಟ್ ಮೂಲಕ ಹಲವು ಯಾತ್ರಿಕರು ನೇರವಾಗಿ ವೀಕ್ಷಿಸಲು ಬರುತ್ತಾರೆ.

ಸಿಡ್ನಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರು ಮೂಲದ ವಿಧುಷಿ ಪಲ್ಲವಿ ಭಾಗವತ್ ಅವರು ತಮ್ಮ ನೃತ್ಯ ಸಂಸ್ಥೆ ನಾಟ್ಯೋಕ್ತಿ ಶಿಷ್ಯ ವೃಂದದೊಂದಿಗೆ ಕಾಂತಾರ ಸಿನೆಮಾದ ಹಾಡುಗಳ ಮೂಲಕ ಮನರಂಜಿಸಲು ಸಜ್ಜಾಗಿದ್ದಾರೆ.

ಕರ್ನಾಟಕದ ಹಳ್ಳಿಯ ಸೊಬಗನ್ನು ತೋರಿಸುವ ಜಾನಪದ ನೃತ್ಯ ಹಾಗೂ ಯಕ್ಷಗಾನದ ಸೊಬಗನ್ನು ಅಳವಡಿಸಿದ ಈ ನೃತ್ಯದಲ್ಲಿ ಉಡುಪಿ, ಮಂಗಳೂರು ಸೇರಿದಂತೆ ದೇಶ ಹಾಗೂ ಅಂತಾರಾಷ್ಟ್ರೀಯ ಶಿಷ್ಯ ವೃಂದರು ಪಾಲ್ಗೊಳ್ಳಲಿದ್ದಾರೆ.

ಶ್ರೀ ನಾಟ್ಯನಿಲಯಮ ಮಂಜೆಶ್ವರ್ ಹಾಗೂ ಕರ್ನಾಟಕ ಕಲಾಶ್ರೀ ವಿಧುಷಿ ಕಮಲಾ ಭಟ್ ಬಳಿ ತಮ್ಮ ಭರತನಾಟ್ಯ ವಿಧ್ವತ್ ಪೂರೈಸಿದ ಪಲ್ಲವಿ ಅವರು IT ಯಲ್ಲಿ ಕಾರ್ಯ ನಿರ್ವಹಿಸುತ್ತಾ ತಮ್ಮ ಭಾರತನಾಟ್ಯ ಸಂಸ್ಥೆಯನ್ನ ಹಲವು ವರ್ಷಗಳಿಂದ ಸಿಡ್ನಿಯಲ್ಲಿ ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

ಬೈಕ್‌ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!

Published

on

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.

ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

bengaluru

ನಟ ನಾಗಭೂಷಣ್ ಕಾರು ಅಪಘಾತ – ಮಹಿಳೆ ಸಾವು..!

Published

on

ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ವಸಂತಪುರದ ನಿವಾಸಿ ಪ್ರೇಮಾ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ನಾಗಭೂಷಣ್ ಶೂಟಿಂಗ್ ಮುಗಿಸಿಕೊಂಡು ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಹಿತಿ ಪಡೆಯುತ್ತಿದ್ದಾರೆ.

ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Continue Reading

LATEST NEWS

Trending