Saturday, February 4, 2023

ಮಂಗಳೂರು: 2014ರ ಮೆಡಿಕಲ್ ವಿದ್ಯಾರ್ಥಿ ಸಾವು ಪ್ರಕರಣ-CBI ತನಿಖೆಗೆ ಸುಪ್ರೀಂ ಆದೇಶ

ಮಂಗಳೂರು: 2014ರಲ್ಲಿ ಶಿರಚ್ಛೇದಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೆಡಿಕಲ್ ವಿದ್ಯಾರ್ಥಿಯೊಬ್ಬನ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಮಂಗಳೂರು ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಕೇರಳ ಮೂಲದ ರೋಹಿತ್ ರಾಧಾಕೃಷ್ಣನ್ ಅವರ ಮೃತದೇಹ 2014ರ ಮಾ.23ರಂದು ತಣ್ಣೀರುಬಾವಿ ಬೀಚ್‌ನ ರಸ್ತೆ ಬದಿ ಪೊದೆಗಳ ಬಳಿ ತಲೆ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇದು ಅಪಘಾತ ಪ್ರಕರಣವೆಂದು ದಾಖಲಾಗಿತ್ತು.


ವಕೀಲರಾಗಿರುವ ರೋಹಿತ್ ಅವರ ತಂದೆ ಕೇರಳ ನಿವಾಸಿ ಎಂ.ಎಸ್.ರಾಧಾಕೃಷ್ಣನ್ ಅವರು ಪ್ರಕರಣದ ಬಗ್ಗೆ ಸಂದೇಹ ವ್ಯಕ್ತಪಡಿಸಿ ಹೆಚ್ಚಿನ ತನಿಖೆಗೆ ಒತ್ತಾಯಿಸಿದ್ದರು.

ಬಳಿಕ ಈ ಬಗ್ಗೆ ಸಿಐಡಿ ತನಿಖೆ ನಡೆಸಿತ್ತು. ಸಿಐಡಿ ತನಿಖೆಯ ಬಗ್ಗೆಯೂ ರಾಧಾಕೃಷ್ಣನ್ ಅವರು ಅಸಮಾಧಾನ ವ್ಯಕ್ತಪಡಿಸಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಿದೆ.

ಸಿಐಡಿ ಸಮರ್ಪಕವಾಗಿ ತನಿಖೆ ನಡೆಸಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ಅರ್ಜಿದಾರ ರಾಧಾಕೃಷ್ಣನ್ ಅವರಿಗೆ ನ್ಯಾಯಾಲಯ ವೆಚ್ಚವಾಗಿ 1 ಲಕ್ಷ ರೂ. ನಾಲ್ಕು ವಾರದೊಳಗೆ ಪಾವತಿಸಬೇಕು ಎಂದು ಸಿಐಡಿಗೆ ಆದೇಶ ಮಾಡಿದೆ.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಅಮೇರಿಕದಲ್ಲಿ ಭಾರಿ ಬೆಂಕಿ ದುರಂತ : ಕಾಡ್ಗಿಚ್ಚಿಗೆ 13 ಬಲಿ – ಸಾವಿರಾರು ಎಕರೆ ಅರಣ್ಯ ಬೆಂಕಿಗೆ ಆಹುತಿ..!

ಚಿಲಿ : ದಕ್ಷಿಣ ಅಮೇರಿಕದ ಚಿಲಿ ರಾಜಧಾನಿಯ ಸ್ಯಾಂಟಿಯಾಗೋ ಸಮೀಪ ಭಾರಿ ಬೆಂಕಿ ಅನಾಹುತ ಸಂಭವಿಸಿದ್ದು, ಕಾಡ್ಗಿಚ್ಚಿನ ಕಾರಣದಿಂದ ಸಾವಿರಾರು ಎಕರೆ ಅರಣ್ಯ ಹೊತ್ತಿ ಉರಿದು, 13ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 35,000 ಎಕರೆ ಪ್ರದೇಶ...

ಮಂಗಳೂರು ಮುಸ್ಲಿಂ ಯುವಕನನ್ನು ವರಿಸಿದ ನೆದರ್ಲೆಂಡ್ ಕ್ರೈಸ್ತ ಕನ್ಯೆ..!

ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು, ಯಾರಿಗೆ, ಯಾವಾಗ, ಯಾರಮೇಲಾದರೂ ಎಲ್ಲಿ ಬೇಕಾದರೂ ಪ್ರೀತಿ ಹುಟ್ಟಬಹುದು. ಮಂಗಳೂರು: ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ,ಜಾತಿ - ಪಂಗಡವಿಲ್ಲ,...

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಆಟೋ- ಮಹಿಳೆ ಸಾವು..!

ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಮುಂಡಾಜೆ ಸಮೀಪ ನಡೆದಿದೆ.ಬೆಳ್ತಂಗಡಿ: ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ...