DAKSHINA KANNADA
ಉಳ್ಳಾಲ: ಮೆಹಂದಿ ಶಾಸ್ತ್ರ ದಿನವೇ ನಾಪತ್ತೆಯಾದ ಯುವಕ- ಬಳ್ಳಾರಿಯಲ್ಲಿ ಪತ್ತೆ
ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಮದುಮಗ, ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್ ಶೆಟ್ಟಿ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ.
ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಮದುಮಗ, ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್ ಶೆಟ್ಟಿ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ.
ಭಾನುವಾರ ಮಧ್ಯಾಹ್ನ ತನ್ನ ತಂಗಿಗೆ ಮೊಬೈಲ್ ಸಂದೇಶ ಕಳುಹಿಸಿರುವ ಕಿಶನ್ ಶೆಟ್ಟಿ ನಾನು ಬಳ್ಳಾರಿಯಲ್ಲಿದ್ದೇನೆ.
ಇನ್ನುಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.
ಈ ಮೂಲಕ ಪುತ್ರನ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ತಿಳಿದು ಬಂದಿದೆ.
ಮೇ 31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್ ಶೆಟ್ಟಿ ನಾಪತ್ತೆಯಾಗಿದ್ದರು.
ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಈತ ಭಾನುವಾರ ಮಧ್ಯಾಹ್ನ ಸಹೋದರಿ ಮೊಬೈಲ್‌ಗೆ ಸಂದೇಶ ಕಳುಹಿಸಿದ್ದಾನೆ.
ನಾನು ಬಳ್ಳಾರಿಯಲ್ಲಿ ಇದ್ದೇನೆ. ಸ್ಕೂಟರ್ ಮೆಲ್ಕಾರ್ ಆರ್‌ಟಿಒ ಕಚೇರಿ ಮುಂದೆ ಇಟ್ಟಿದ್ದೇನೆ.
ಆದರೆ ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಹೇಳಿದ್ದಾನೆ. ತಂಗಿ ಕರೆ ಮಾಡಲು ಯತ್ನಿಸಿದ್ದಾರೆ.
ಆದರೆ ಕಿಶನ್ ಶೆಟ್ಟಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾನೆ.
ತಂಗಿ ತಂದೆಗೆ ಮಾಹಿತಿ ನೀಡಿದ್ದು, ಐತಪ್ಪ ಶೆಟ್ಟಿ ಅವರು ಕೊಣಾಜೆ ಠಾಣೆಗೆ ಹೋಗಿ ಕರೆ ಬಂದ ಬಗ್ಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಟವರ್ ಲೊಕೇಶನ್ ಸರ್ಚ್ ಮಾಡಿದಾಗ ಬಳ್ಳಾರಿಯ ಗ್ರಾಮಾಂತರ ಭಾಗವೊಂದರ ಟವರ್ ಲೊಕೇಶನ್ ತೋರಿಸಿದೆ.
ಅರ್ಧಗಂಟೆಗೊಮ್ಮೆ ಕೆಲವು ಕಿಲೋಮೀಟರ್ ಅಂತರ ಲೊಕೇಶನ್ ತೋರಿಸುತ್ತಿದ್ದು, ಪೊಲೀಸರು ಆತನ ಪತ್ತೆಗೆ ನಿರಂತರ ಯತ್ನ ಮುಂದುವರಿಸಿದದ್ದಾರೆ.
bangalore
ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!
ಬೆಂಗಳೂರು: ತುಳುನಾಡಿನ ದೈವರಾಧನೆಯನ್ನು ಇದೀಗ ಬೆಂಗಳೂರಿನ ಟೂರ್ ಪ್ಯಾಕೇಜ್ ಸಂಸ್ಥೆಯೊಂದು ವ್ಯವಹಾರ ಮಾಡಲು ಹೊರಟಿದೆ. ತುಳುನಡಿನ ಜನರ ನಂಬಿಕೆಯಿಂದ ದೈವರಾಧನೆ, ಭೂತಕೋಲಗಳನ್ನು ಉಳಿಸಿ ಬೆಳೆಸಿಕೊಂಡು ಬಂದರೆ ಇತ್ತ ಇದರ ಬ್ಯುಸಿನೆಸ್ ಶುರುವಾಗಿದೆ. ಇದರ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತ್ತಿದ್ದು, ತುಳುನಾಡ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭೂತಕೋಲ ಎಂಬ ಪೋಸ್ಟರ್ ರೆಡಿ ಮಾಡಿ ಅದನ್ನು ಫೇಸ್ಬುಕ್, ಇನ್ಸ್ಟಾಗ್ರಾಮ್ ಗಳಲ್ಲಿ ಶೇರ್ ಮಾಡಿದ್ದಾರೆ. ಟ್ರಾವೆಲ್ ಸಂಸ್ಥೆಯೊಂದು 2024ರ ಫೆ. 10 ಹಾಗೂ 11ರಂದು ಎರಡು ದಿನದ ಟೂರ್ ಪ್ಯಾಕೇಜ್ ಅನ್ನು ಹಮ್ಮಿಕೊಂಡಿದೆ. ಅದರಲ್ಲಿ ನದಿ ಬೋಟಿಂಗ್, ಉಪ್ಪಿನಂಗಡಿ ಕಂಬಳ, ಬೊಳ್ಳಾಡಿ ಫಾರ್ಮ್ ಪಾರ್ಟಿ, ಬೊಳ್ಳಾಡಿ ಮನೆಯಲ್ಲಲಿ ಭೂತಕೋಲ, ಬೀರಮಲೆ ಬೆಟ್ಟ ಟ್ರಕ್ಕಿಂಗ್ ಇರಲಿದೆ ಎಂದು ಬರೆದುಕೊಂಡಿದ್ದಾರೆ. ಟೂರ್ ಪ್ಯಾಕೇಜ್ ನ ಮೊತ್ತ ಒಬ್ಬನಿಗೆ 2899 ರೂ. ಆಗಿರುತ್ತದೆ. ಅಲ್ಲದೆ ಆ ಪೋಸ್ಟರ್ ನಲ್ಲಿ ಬುಕ್ ಶೋ ನಲ್ಲಿ ಬುಕ್ ಮಾಡಿ ಎಂದು ಹಾಕಲಾಗಿದೆ. ಈಗಾಗಲೇ ಹಲವರು ಬುಕ್ ಮಾಡಿದರೆನ್ನಲಾಗಿದೆ. ಈ ಪೋಸ್ಟರ್ ನೋಡಿದ ಹಲವು ನೆಟ್ಟಿಗರು ಕಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ತುಳುನಾಡಿನ ಭೂತರಾಧನೆ ಟೂರ್ ಪ್ಯಾಕೇಜ್ ಆಗಬಾರದು, ದೈವದ ಮೇಲೆ ಇರುವ ನಂಬಿಕೆಗೆ ಬೆಲೆ ಇಲ್ಲದಂತಾಗುತ್ತದೆ ಎಂದು ಕಮೆಂಟ್ ಮಾಡಿದ್ದಾರೆ.
BANTWAL
Bnatwala: ಡಿ.3ರಂದು ಅಕ್ಷಯ ಪಾತ್ರ ಪ್ರತಿಷ್ಠಾನದ ಕೇಂದ್ರೀಕೃತ ಅಡುಗೆ ಮನೆ ಉದ್ಘಾಟನೆ
ಬಂಟ್ವಾಳ: ಅಕ್ಷಯ ಪಾತ್ರ ಫೌಂಡೇಶನ್ ಇದರ ಅಡುಗೆ ಮನೆಯ ಉದ್ಘಾಟನಾ ಸಮಾರಂಭವು ಡಿ. 3 ರಂದು ಬೆಂಜನಪದವು ಕೆನರಾ ಇಂಜಿನಿಯರಿಂಗ್ ಕಾಲೇಜು ಸಮೀಪ ನಡೆಯಲಿದೆ.
ಅಕ್ಷಯ ಫೌಂಡೇಶನ್ ಮಕ್ಕಳ ಹಸಿವನ್ನು ಹೋಗಲಾಡಿಸುವ ತನ್ನ ಅಚಲವಾದ ಕಾರ್ಯಕ್ಕೆ ಹೆಸರುವಾಸಿಯಾಗಿದ್ದು, ಮಂಗಳೂರಿನಲ್ಲಿ ತನ್ನ ಕೇಂದ್ರೀಕೃತ ಅಡುಗೆ ಮನೆಯ ಉದ್ಘಾಟನೆಯೊಂದಿಗೆ ಮಹತ್ವದ ಮೈಲಿಗಲ್ಲು ತಲುಪಿದೆ. ದಾನಿಗಳಾದ ಜಿಟಿ ಫೌಂಡೇಶನ್ ಮತ್ತು ದಿಯಾ ಸಿಸ್ಟಮ್ಸ್ (ಮಂಗಳೂರು) ಪ್ರೈ.ಲಿ. ಲಿಮಿಟೆಡ್‌ನ ವಿಜಯ್ ಮತ್ತು ಶಾಮ ಕೇಡಿಯಾ, ದಿವಂಗತ ಡಾ. ವಿ ರವಿಚಂದ್ರನ್ ಅವರ ನಿರಂತರ ಬೆಂಬಲ ಮತ್ತು ದೂರದೃಷ್ಟಿ ಕೊಡುಗೆಯೇ ಈ ಅಡುಗೆ ಮನೆಯಾಗಿದೆ. ಈ ಸಮಾರಂಭವು ಉಡುಪಿಯ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಲಿದೆ.
ಈ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಗ್ರೂಪ್‌ನ ಅಧ್ಯಕ್ಷ ಡಾ. ಪಿ ದಯಾನಂದ ಪೈ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ.ಮುಲ್ಲೈ ಮುಹಿಲನ್, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ. ಆನಂದ ಕೆ, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಕ್ಷಯ ಪಾತ್ರ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ ಮತ್ತು ಅಕ್ಷಯ ಪಾತ್ರ ಫೌಂಡೇಶನ್‌ನ ಉಪಾಧ್ಯಕ್ಷ ಚಂಚಲಪತಿ ದಾಸ ಅವರು ಉಪಸ್ಥಿತರಿರುವರು.
124 ಸರ್ಕಾರಿ ಮತ್ತು 41 ಸರ್ಕಾರಿ ಅನುದಾನಿತ ಸಂಸ್ಥೆಗಳು ಸೇರಿದಂತೆ 165 ಕ್ಕೂ ಹೆಚ್ಚು ಶಾಲೆಗಗಳಿಗೆ ಅಗತ್ಯ ಪೌಷ್ಟಿಕಯುತವಾದ 25,000 ಊಟವನ್ನು ಉತ್ಪಾದಿಸುವ ಸಾಮರ್ಥ್ಯದೊಂದಿಗೆ ಈ ಅಡುಗೆಕೋಣೆ ರೂಪುಗೊಂಡಿದೆ. ಅಡುಗೆಮನೆಯ ವೈವಿಧ್ಯಮಯ ಮೆನುವು ಸಮತೋಲಿತ ಪೋಷಣೆಯನ್ನು ಖಾತ್ರಿಗೊಳಿಸುತ್ತದೆ. ಸೌರಶಕ್ತಿ ಮತ್ತು ಸ್ವಚ್ಛ ಎಲ್ಪಿಜಿ ಯೊಂದಿಗೆ ಪರಿಸರಸ್ನೇಹಿ ಅಡುಗೆಮನೆ ಇದಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ