ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತು ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಬುಧವಾರ ನಡೆಸಿದ ಕಾರ್ಯಚರಣೆಯಲ್ಲಿ ಮಾದಕ ವಸ್ತು ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.
ಮೂಲತಃ ಸಜಿಪ ಮುನ್ನೂರು ಗ್ರಾಮದ ಪ್ರಸ್ತುತ ಉಳ್ಳಾಲದ ಹಫೀಝ್ ಯಾನೆ ಅಪ್ಪಿ(35), ಸಜಿಪ ಮುನ್ನೂರಿನ ಅಮೀರ್ ಯಾನೆ ಅಮ್ಮಿ(34), ಸಜಿಪ ಮುನ್ನೂರಿನ ಜಾಕಿರ್ ಹುಸೇನ್ ಯಾನೆ ತಾಚ್ಚಿ (28) ಬಂಧಿತ ಆರೋಪಿಗಳು.
ಉಳ್ಳಾಲ ತಾಲೂಕಿನ ತಲಪಾಡಿ-ದೇವಿಪುರ ರಸ್ತೆಯಲ್ಲಿನ ತಚ್ಚಾಣಿ ಪರಿಸರದಲ್ಲಿ ಕಾರಿನಲ್ಲಿ ಮೂವರು ಮಾದಕ ವಸ್ತುವಾದ ಎಂಡಿಎಂಎಯನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದರಲ್ಲದೆ ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು, 200 ಗ್ರಾಂ ತೂಕದ 10,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 3 ಮೊಬೈಲ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.
ಇವುಗಳ ಮೌಲ್ಯ 15,70,500 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.
ಆರೋಪಿಗಳ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಹಫೀಝ್ ಯಾನೆ ಅಪ್ಪಿ ಎಂಬಾತನ ವಿರುದ್ಧ ಮುಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಹಾಗೂ ಇತರ 3 ದರೋಡೆ ಪ್ರಕರಣಗಳು, ಬಜ್ಪೆಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ, ಪಾಂಡೇಶ್ವರ ಠಾಣೆಯಲ್ಲಿ 2 ಬೈಕ್ ಕಳವು ಪ್ರಕರಣಗಳು, ಉಡುಪಿ ಜಿಲ್ಲೆಯ ಶಿರ್ವಾ ಹಾಗೂ ಪಡುಬಿದ್ರಿ ಠಾಣೆಯಲ್ಲಿ ಕಳವು ಪ್ರಕರಣಗಳ ಸಹಿತ 8 ಪ್ರಕರಣಗಳು ದಾಖಲಾಗಿವೆ.
ಈತನು ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದರೂ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೋರ್ವ ಆರೋಪಿ ಜಾಕಿರ್ ಹುಸೇನ್ ಯಾನೆ ತಾಚ್ಚಿ ವಿರುದ್ಧ ಬರ್ಕೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ, ಕದ್ರಿ ಠಾಣೆಯಲ್ಲಿ ಹಲ್ಲೆ, ಬೆದರಿಕೆ ಪ್ರಕರಣ, ಬಂಟ್ವಾಳ ನಗರ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಧರ್ಮಸ್ಥಳ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.
ಮಂಗಳೂರು : ಶ್ವೇತಾ ಜ್ಯುವೆಲರ್ಸ್‌ನ ಮಾಲಿಕರಾಗಿರುವ ಎಂ. ಅಶೋಕ್ ಶೇಟ್ ಇಂದು ಬೆಳಿಗ್ಗೆ (ಜ,22) ಸುಮಾರು 10 ಗಂಟೆಗೆ ಸ್ವ ಗೃಹದಲ್ಲಿ ನಿ*ಧನರಾಗಿದ್ದಾರೆ.
ಪಡೀಲ್ ಕಂಕನಾಡಿ ಲಯನ್ಸ್ ಕ್ಲಬ್‌ನ ಕ್ರಿಯಾಶೀಲ ವ್ಯಕ್ತಿ, ಸದಾ ಮುಖದಲ್ಲಿ ಮುಗುಳ್ನಗು ಹೊಂದಿದ್ದ ಮಂಗಳೂರಿನ ವಿ.ಟಿ. ರೋಡ್ ನಿವಾಸಿ 64 ವರ್ಷದ ಅಶೋಕ್ ಶೇಟ್ ಹೃ*ದಯಾಘಾತದಿಂದ ಮೃತಪಟ್ಟಿದ್ದಾರೆ.
ಪ್ರಸ್ತುತ ಮಂಗಳೂರು ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಹಾಲಿ ಅಧ್ಯಕ್ಷರಾಗಿದ್ದ ಅಶೋಕ್ ಶೇಟ್ ಈ ಹಿಂದೆ ಅನೇಕ ಸಂಘ- ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಮಂಗಳೂರು ದೈವಜ್ಞ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿಯ ಮುಖ್ಯ ಪ್ರವರ್ತಕರಾಗಿದ್ದ ಅವರು ದೈವಜ್ಞ ಸೌರಭ ಪತ್ರಿಕೆಯ ಸಂಸ್ಥಾಪಕ ಪ್ರಕಾಶಕರಾಗಿ ಸಮಾಜಕ್ಕಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯ.
ಮೃ*ತರು ಪತ್ನಿ ಸಂಧ್ಯಾ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ
ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಓರ್ವನಿಗೆ ಪೊಲೀಸರು ಹಾರಿಸಿದ ಗುಂಡು ಕಾಲಿಗೆ ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಜ.17ರಂದು ನಡೆದ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ರಾಜೇಂದ್ರನ್
ತಮಿಳುನಾಡು ಸಮೀಪದ ಪದ್ಮನೇರಿ ಗ್ರಾಮದಲ್ಲಿ ಬಂಧಿಸಿ ಕರೆತರಲಾಗಿದ್ದು ಇಂದು ಸ್ಥಳ ಮಹಜರು ನಡೆಸಲಾಗಿದೆ. ಸಿಸಿಬಿ ಪೊಲೀಸರು ಹಾಗೂ ಉಳ್ಳಾಲ ಪೊಲೀಸರು ಜಂಟಿಯಾಗಿ ಆರೋಪಿಗಳನ್ನು ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಣಿವಣ್ಣನ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸಿಸಿಬಿ ಇನ್‌ಸ್ಪೆಕ್ಟರ್ ರಫೀಕ್ ಅವರು ಆತನ ಕಾಲಿಗೆ ಗುಂಡು ಹಾರಿಸಿ ಮತ್ತೆ ವಶಕ್ಕೆ ಪಡೆದುಕೊಂಡರು ಎಂದು ತಿಳಿದು ಬಂದಿದೆ.
ಪ್ರಮುಖ ಆರೋಪಿ ಮುರಗಂಡಿ ತೇವರ್
ಗುಂಡೇಟಿನಿಂದ ಗಾಯಗೊಂಡಿದ್ದ ಆರೋಪಿಯನ್ನು ಪೊಲೀಸರು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಮಂಗಳೂರು : ಬೆಂಗಳೂರಿನ ಚಾಮರಾಜನಗರದಲ್ಲಿ ಹಿಂದುಗಳು ಆರಾಧಿಸುವ ಗೋಮಾತೆಯ ಕೆಚ್ಚಲನ್ನು ಕತ್ತರಿಸಿ ವಿ*ಕೃತಿ ಮೆರೆದಿರುವುದು ಹಾಗೂ ನಂಜನಗೂಡಿನಲ್ಲಿ ಭಕ್ತಾದಿಗಳು ದೇವಸ್ಥಾನಕ್ಕೆ ದಾನವಾಗಿ ನೀಡಿದ್ದ ಹಸುವಿನ ಮೇಲೆ ದುಷ್ಟರು ಮಾ*ರಕಾಸ್ತ್ರದಿಂದ ದಾ*ಳಿ ಮಾಡಿ ಹಸುವಿನ ಬಾಲವನ್ನು ಕತ್ತರಿಸಿ ಪೈಶಾಚಿಕ ಕೃ*ತ್ಯ ನಡೆಸಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಗೋ ಸಂರಕ್ಷಣಾ ಸಂವರ್ಧನಾ ಸಮಿತಿಯಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಗೆ ವಿಶ್ವ ಹಿಂದು ಪರಿಷತ್ ಸೇರಿದಂತೆ ಹಲವು ಹಿಂದು ಪರ ಸಂಘಟನೆಗಳು ಸಾಥ್ ನೀಡಿದ್ದವು. ಮೊದಲಿಗೆ ಗೋವಿಗೆ ವಿಶೇಷ ಪೂಜೆ ಮಾಡುವ ಮೂಲಕ ಗೋವನ್ನು ಪೂಜಿಸಲಾಯಿತು.
ಬಳಿಕ ನಡೆದ ಸಭೆಯಲ್ಲಿ ಸಂಸದ ಬ್ರಿಜೇಶ್ ಚೌಟ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದುಗಳು ಪವಿತ್ರ ಎಂದು ಪೂಜಿಸುವ ಗೋವಿನ ಮೇಲೆ ನಿರಂತರವಾಗಿ ದೌರ್ಜ*ನ್ಯ ದಬ್ಬಾಳಿಕೆ ನಡೆಯುತ್ತಿದೆ. ಯಾವುದೇ ಜನಪ್ರತಿನಿಧಿಗಳು ಕೂಡ ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಇಲ್ಲಿ ದೇವಸ್ಥಾನಕ್ಕೆ ಹೋಗಿ ಗಂಧಪ್ರಸಾದ ಸ್ವೀಕರಿಸುತ್ತಾರೆ. ಆದರೆ ಗೋವಿನ ಮೇಲೆ ದೌರ್ಜ*ನ್ಯ ನಡೆದಾಗ ತಮ್ಮ ಬಾಯಿ ಬಿಚ್ಚುತ್ತಿಲ್ಲ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ವಿಶ್ವ ಹಿಂದು ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಶರಣ್ ಪಂಪ್‌ವೆಲ್, ಶಿವಾನಂದ ಮೆಂಡನ್, ಗೋಪಾಲ್ ಕುತ್ತಾರ್ ಮೊದಲಾದವರು ಭಾಗಿಯಾಗಿದ್ದರು.