DAKSHINA KANNADA
ಮಂಗಳೂರು: ಗಾಂಜಾ ಮಾರಾಟ ಮಾಡುವ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿ…!
ಮಂಗಳೂರು: ಮಾದಕ ವಸ್ತು ಎಂಡಿಎಂಎಯನ್ನು ಕೇರಳ-ಕರ್ನಾಟಕದ ಗಡಿಭಾಗದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಡಿಪು ಕೈರಂಗಳ ಗ್ರಾಮದ ನಿವಾಸಿ ನವಾಝ್ ಯಾನೆ ನವ್ವಾ ಯಾನೆ ಮುಡಿಪು ನವಾಸ್(35) ಬಂಧಿತ ಆರೋಪಿ.
ಎಂಬಾತನನ್ನು ಈತನ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳಿವೆ.
ಕೇರಳದ ಗಡಿಭಾಗ ಹಾಗೂ ಮುಡಿಪು ಪರಿಸರದಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ರವರ ನೇತ್ರತ್ವದ ತಂಡ ಮುಡಿಪು ಪಂಚಾಯತ್ ಮೈದಾನ ಪರಿಸರದಲ್ಲಿ ಬೈಕ್ ನಲ್ಲಿ ಬಂದು ಮಾರಾಟ ಮಾಡುತ್ತಿದ್ದಾಗ ಬಂಧಿಸಿದೆ.
ಈತನಿಂದ ಒಟ್ಟು 15 ಗ್ರಾಂ ತೂಕದ 75,000 ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, ಮೊಬೈಲ್ ಫೋನ್ -2, ಡಿಜಿಟಲ್ ತೂಕ ಮಾಪನ, ನಗದು ರೂ. 3200 ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಬಜಾಜ್ ಅವೆಂಜರ್ ಬೈಕ್ ನ್ನು ವಶಪಡಿಸಿಕೊಳ್ಳಲಾಗಿದೆ. ಇವೆಲ್ಲದರ ಒಟ್ಟು ಮೌಲ್ಯ 1,13,700 ರೂಪಾಯಿ ಎಂದು ಅಂದಾಜಿಸಲಾಗಿದೆ.
ದೇರಳಕಟ್ಟೆ, ತಲಪಾಡಿ, ಉಳ್ಳಾಲ ಹಾಗೂ ಮಂಗಳೂರು ನಗರ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದು, ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ಆರೋಪಿ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆ ಯತ್ನ, ದರೋಡೆಗೆ ಸಂಬಂಧಪಟ್ಟಂತೆ ಒಟ್ಟು 8 ಪ್ರಕರಣಗಳು, ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ , ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಯತ್ನ ನಡೆಸಿದ ಪ್ರಕರಣ ಹೀಗೆ ಒಟ್ಟು 11 ಪ್ರಕರಣಗಳು ದಾಖಲಾಗಿರುತ್ತದೆ.
DAKSHINA KANNADA
Surathkal: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ- ವಿದ್ಯಾರ್ಥಿನಿಯರು ಗಂಭೀರ..!
ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್‌ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಗಾಯಗೊಂಡವರು ಎಂದು ತಿಳಿದು ಬಂದಿದೆ. ಇನ್ನೋರ್ವಳ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್