Sunday, May 22, 2022

‘ಅದಾನಿ’ ಹೆಸರು ಕೈ ಬಿಟ್ಟು ಮೊದಲಿನಂತೆ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರು ನಾಮಫಲಕ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ನಾಮಫಲಕದಿಂದ ‘ಅದಾನಿ’ ಹೆಸರು ಕೈ ಬಿಟ್ಟು ಮೊದಲಿನಂತೆ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರು ನಾಮಫಲಕ ಅಳವಡಿಸಿದೆ.

ಇದು ನಮ್ಮ ಕಾನೂನು ಹೋರಾಟಕ್ಕೆ ಸಂದ ಜಯ ಎಂದು ಸಾಮಾಜಿಕ ಹೋರಾಟಗಾರ ದಿಲ್ ರಾಜ್ ಆಳ್ವ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ ಬಳಿಕ ಅಲ್ಲಿನ ನಾಮಫಲಕವನ್ನು ಕಂಪೆನಿಯು ಬದಲಾಯಿಸಿತ್ತು.

ಆದರೆ ಮಂಗಳೂರು ವಿಮಾನ ನಿಲ್ದಾಣ ಮತ್ತು ಅದಾನಿ ಕಂಪೆನಿ ನಡುವೆ ನಡೆದ ಒಡಂಬಡಿಕೆಯಲ್ಲಿ ಹೆಸರು ಬದಲಾವಣೆಗೆ ಅವಕಾಶ ಇರಲಿಲ್ಲ ಎನ್ನುವುದು ಮಾಹಿತಿ ಹಕ್ಕಿನಿಂದ ತಿಳಿದುಬಂದಿತ್ತು.

ಇದರ ಆಧಾರದಲ್ಲಿ ನಡೆಸಿದ ಕಾನೂನು ಹೋರಾಟದ ಫಲವಾಗಿ ಶುಕ್ರವಾರ ಕಂಪೆನಿಯು ವಿಮಾನ ನಿಲ್ದಾಣದ ನಾಮಫಲಕದಿಂದ ಅದಾನಿ ಹೆಸರು ಕೈ ಬಿಟ್ಟು ಮೊದಲಿನಂತೆ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರು ನಾಮಫಲಕ ಅಳವಡಿಸಿದೆ ಎಂದರು.

LEAVE A REPLY

Please enter your comment!
Please enter your name here

Hot Topics

ವಿಟ್ಲ: ಮನೆಯ ಹೆಂಚು ತೆಗೆದು ಒಳನುಗ್ಗಿ ಲಕ್ಷಾಂತರ ಸೊತ್ತು ಕಳವು

ಬಂಟ್ವಾಳ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೆಂಚು ತೆಗೆದು ಮನೆಯೊಳಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕಟ್ಟೆ ಮನೆಯ...

ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿತ: ಸಂಕಷ್ಟದಲ್ಲಿ 10 ಸಾವಿರ ಯಾತ್ರಿಕರು

ಬಂದಾರ್: ಹಿಂದೂಗಳ ನಾಲ್ಕು ಪ್ರಮುಖ ಯಾತ್ರಾಸ್ಥಳಗಳಲ್ಲೊಂದಾದ ಉತ್ತರಾಖಂಡ್‌ನ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ಹೆದ್ದಾರಿಯ ಭದ್ರತಾ ಗೋಡೆ ಕುಸಿದಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರಿಂದ 10,000 ಜನರು ಹೆದ್ದಾರಿಯ ವಿವಿಧೆಡೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.ಮೂಲಗಳ...

ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ನಾಳೆ ‘ಟೆಡೆಕ್ಸ್‌’ ಭಾಷಣ ಸರಣಿ

ಮಂಗಳೂರು: ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಟೆಡೆಕ್ಸ್‌ನ ಭಾಷಣ ಸರಣಿ ಕಾರ್ಯಕ್ರಮವು ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಮೇ 22ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ ಪ್ರವೀಣ್‌ ಮಾರ್ಟಿಸ್‌ ಅವರು ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ...