Connect with us

    LATEST NEWS

    ಮಂಗಳೂರು: AK ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ನಿ*ಧನ

    Published

    on

    ಮಂಗಳೂರು: ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ (76) ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿ*ಧನರಾಗಿದ್ದಾರೆ.

    ಹೈಲ್ಯಾಂಡ್ ನ ಇಹ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರಾಗಿದ್ದರು. ಎ ಕೆ ಗ್ರೂಪ್ ಅನ್ನು ಪ್ರಾರಂಭಿಸಿ ಯಶಸ್ಸಿನ ಉತ್ತುಂಗಕ್ಕೆ ಒಯ್ದು ಪ್ರತಿಷ್ಠಿತ ಬ್ರ್ಯಾಂಡ್ ಆಗಿ ಪರಿವರ್ತಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.

    ಅವರು ಪತ್ನಿ,ನಾಲ್ಕು ಗಂಡು ಮಕ್ಕಳು ಹಾಗು ಮೂರು ಹೆಣ್ಣು ಮಕ್ಕಳು ಹಾಗು ಅಪಾರ ಬಂಧು ಬಳಗವನ್ನು ಅ*ಗಲಿದ್ದಾರೆ.

    LATEST NEWS

    ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮ*ಹತ್ಯೆ

    Published

    on

    ಮಂಗಳೂರು/ಕೊಲಾರ: ಪತಿ ಮತ್ತು ಆತನ ಕುಟುಂಬಸ್ಥರಿ0ದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ ಬೇಸತ್ತು ಮಹಿಳೆ ಕೆರೆಗೆ ಹಾರಿ ಆತ್ಮ*ಹತ್ಯೆಗೆ ಶರಣಾದ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ.

    ಆತ್ಮ*ಹತ್ಯೆಗೆ ಶರಣಾದ ಮಹಿಳೆಯನ್ನು ಕೊಲಾರದ ಕೆಜಿಎಫ್‌ನ ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ಗುರುತಿಸಲಾಗಿದೆ.
    ಅ. 6ರ ಭಾನುವಾರ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿರುವ ತಾಯಿಯ ಮನೆಗೆ ಬಂದಿದ್ದ ಸೌಮ್ಯ, ರಾತ್ರಿ ಮನೆಯಿಂದ ಹೊರ ಬಂದು ಕೆರೆಗೆ ಹಾರಿ ಆತ್ಮ*ಹತ್ಯೆಗೆ ಶರಣಾಗಿದ್ದಾರೆ. ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಎಂಬಾತನ ಜೊತೆ ಸೌಮ್ಯ ಮದುವೆಯಾಗಿದ್ದರು.
    ಮೃ*ತ ಮಹಿಳೆಯ ಪೋಷಕರು ಆಕೆಯ ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಸೌಮ್ಯ ಆತ್ಮ*ಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    Continue Reading

    LATEST NEWS

    ವಿದ್ಯುತ್ ತಂತಿ ಸ್ಪರ್ಶಿಸಿ ಮಗು ಸಹಿತ ಎರಡು ಕರಡಿ ಮೃ*ತ್ಯು

    Published

    on

    ಮಂಗಳೂರು/ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ 3 ಕರಡಿಗಳು ಮೃ*ತಪಟ್ಟ ಘಟನೆ ಅರಸೀಕೆರೆ ತಾಲೂಕಿನ ಕಲ್ಲುಸಾಗರಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ತಡವಾಗಿ ಸ್ಥಳೀಯರ ಗುರುತಿಸಿದ್ದಾರೆ.


    ಹಾಸನದ ಗುಡ್ಡಗಾಡು ಪ್ರದೇಶಗಳಲ್ಲಿ ಕರಡಿಗಳು ಹೆಚ್ಚಾಗಿದ್ದು, ಕಳೆದ 6 ತಿಂಗಳಲ್ಲಿ ಸುಮಾರು ಐದಾರು ಮಂದಿ ದಾಳಿ ಮಾಡಿ ಗಾಯ**ಗೊಳಿಸಿದ್ದವು.


    ಅರಣ್ಯ ಪ್ರದೇಶದ ಬಳಿ ವಿದ್ಯುತ್ ಕಂಬದಿಂದ ತಂಡಾಗಿ ಬಿದ್ದಿದ್ದ ತಂತಿ ತುಳಿದ ಹಿನ್ನಲೆ ತಾಯಿ ಮತ್ತು ಮರಿ ಕರಡಿಯ ಜೊತೆ ಗಂಡು ಕರಡಿ ಸಾವಿಗೀಡಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.

    Continue Reading

    LATEST NEWS

    ಕೇಕ್‌ಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆ – ಎಫ್‌ಎಸ್‌ಎಸ್‌ಎಐ ಎಚ್ಚರಿಕೆ

    Published

    on

    ಬೆಂಗಳೂರು: ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ ನೀಡಿದೆ.

    ರೆಡ್ ವೆಲ್ವೆಟ್ ಮತ್ತು ಬ್ಲ್ಯಾಕ್ ಫಾರೆಸ್ಟ್ ಸೇರಿದಂತೆ ಜನಪ್ರಿಯ ಕೇಕ್ ಪ್ರಭೇದಗಳಲ್ಲಿ ಹಾನಿಕಾರಕ ಪದಾರ್ಥಗಳು ಪತ್ತೆಯಾಗಿವೆ ಎಂದು FSSAI ಬಹಿರಂಗಪಡಿಸಿದೆ.ಬೇಕರಿ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್ ಕೆ, ಕ್ಯಾನ್ಸರ್ ಗೆ ಕಾರಣವಾಗುವ ಯಾವುದೇ ರಾಸಾಯನಿಕ ಅಥವಾ ಬಣ್ಣಗಳನ್ನು ಕೇಕ್ ಗಳಲ್ಲಿ ಬಳಸಬಾರದು. ರಾಜ್ಯಾದ್ಯಂತ ಕೇಕ್‌ಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ಪದಾರ್ಥಗಳನ್ನು ಬಳಸಲಾಗುತ್ತಿದೆ ಎಂಬ ಶಂಕೆಯಿಂದಾಗಿ 235 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇವುಗಳಲ್ಲಿ 12 ಮಾದರಿಗಳಲ್ಲಿ ಅಲೂನಾ ರೆಡ್, ಸನ್‌ಸೆಟ್ ಯೆಲ್ಲೋ, ಪೊನ್ಸೆಯು 4ಆರ್ ಮತ್ತು ಕಾರ್ಮೋಸಿನ್‌ನಂತಹ ಹಾನಿಕಾರಕ ಅಂಶಗಳು ಕಂಡುಬಂದಿವೆ.

    ಈ ಹಿಂದೆ ಆಹಾರ ಸುರಕ್ಷತಾ ಇಲಾಖೆಯು ಗೋಬಿ ಮಂಚೂರಿಯನ್, ಕಬಾಬ್, ಪಾನಿ ಪುರಿಯಂತಹ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಿತ್ತು. ಕೇಕ್ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಹೆಚ್ಚಾಗಿ ಬಳಸುವುದರಿಂದ, ಇಲಾಖೆಯು ಈಗ ರೆಡ್ ವೆಲ್ವೆಟ್ ಮತ್ತು ಬ್ಲ್ಯಾಕ್ ಫಾರೆಸ್ಟ್ ಕೇಕ್‌ಗಳಲ್ಲಿ ಅವುಗಳ ಬಳಕೆಯನ್ನು ನಿಷೇಧಿಸಿದೆ. ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇಕ್ ತಯಾರಕರಿಗೆ ಎಚ್ಚರಿಕೆ ನೀಡಲಾಗಿದೆ.

    Continue Reading

    LATEST NEWS

    Trending