Connect with us

DAKSHINA KANNADA

ಮಂಗಳೂರು : ಜನಸಾಗರದ ನಡುವೆ ‘ಫುಡ್ ಫೆಸ್ಟಾ’ ಗೆ ಅದ್ದೂರಿ ಚಾಲನೆ..!

Published

on

ಮಂಗಳೂರಿನ ಪ್ರಥಮ ಹಾಗೂ ಅತೀ ದೊಡ್ಡ ಆಹಾರ ಪಥ ಉತ್ಸವಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ  ಅದ್ದೂರಿ ಚಾಲನೆ ನೀಡಲಾಯಿತು.

ಮಂಗಳೂರು : ಮಂಗಳೂರಿನ ಪ್ರಥಮ ಹಾಗೂ ಅತೀ ದೊಡ್ಡ ಆಹಾರ ಪಥ ಉತ್ಸವಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ  ಅದ್ದೂರಿ ಚಾಲನೆ ನೀಡಲಾಯಿತು.  

ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ  ಡಿ ವೇದವ್ಯಾಸ ಕಾಮತ್ ಅವರ ಮಾರ್ಗದರ್ಶನದಲ್ಲಿ ಕರಾವಳಿಯ ಜನರಿಗಾಗಿ 5 ದಿನಗಳ ಆಹಾರೋತ್ಸವವನ್ನು ನಗರದಲ್ಲಿ ಆಯೋಜಿಸಲಾಗಿದೆ.

ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ತುಳುನಾಡಿನ ವಿಶೇಷ ಖಾದ್ಯಗಳು ಮತ್ತು ಅಂತರಾಜ್ಯದ ತಿಂಡಿ ತಿನಿಸುಗಳು, ರಂಗುರಂಗಿನ ಸಾಂಸ್ಕೃತಿಕ ಸಂಭ್ರಮದ ಸ್ಪರ್ಶದೊಂದಿಗೆ ವಿಶಿಷ್ಟ ಅನುಭವ ಹಾಗೂ ಅನುಭೂತಿಯನ್ನು ನಾಗರಿಕರಿಗೆ 5 ದಿನಗಳ ಕಾಲ ಉಣ ಬಡಿಸಲಿದೆ.

ಮಂಗಳೂರು ಆಹಾರ ಪಥ ಉತ್ಸವ ಮಾರ್ಚ್ 22 ರಿಂದ 26 ರವರೆಗೆ ಸಂಜೆ 5 ರಿಂದ 11 ಗಂಟೆಯವರೆಗೆ ನಡೆಯಲಿದ್ದು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿರುವುದು ಖುಷಿ ತಂದಿದೆ.

ತುಳುನಾಡಿನ ಆಹಾರ ಸಮೃದ್ಧತೆಯನ್ನು ಈ ತಲೆಮಾರಿಗೆ ಪರಿಚಯಿಸುವ ಮತ್ತು ಸ್ವ ಉದ್ಯೋಗಕ್ಕೆ ವೇದಿಕೆ ಒದಗಿಸಿ ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಉತ್ಸವ ನಡೆಯಲಿದೆ.

ಸ್ವ ಉದ್ಯೋಗ, ವಿವಿಧ ವ್ಯವಹಾರ ಕ್ಷೇತ್ರಗಳಾದ ಆತಿಥ್ಯ, ಐಸ್ ಕ್ರೀಂ, ಗೃಹ ಉತ್ಪನ್ನಗಳು, ಕ್ಯಾಟರಿಂಗ್ ಉದ್ಯಮದವರಿಗೆ ವೇದಿಕೆ ಕಲ್ಪಿಸುವ ಸದುದ್ದೇಶ ಇದೆ.

ವಿಭಿನ್ನ ಸಾಂಸ್ಕೃತಿಕ, ಕರಾವಳಿಯ ಮನೋರಂಜನಾ ಕಾರ್ಯಕ್ರಮಗಳು ಉತ್ಸವದ ಮೆರಗು ಹೆಚ್ಚಿಸುತ್ತಿವೆ ಎಂದರು.
ಕರಾವಳಿ ಉತ್ಸವ ಮೈದಾನದ ಮುಂಭಾಗದಿಂದ ಬ್ರಹ್ಮಶ್ರೀ ಶ್ರೀ ನಾರಾಯಣ ಗುರು ವೃತ್ತ ಮುಖಾಂತರ ಮಣ್ಣಗುಡ್ಡೆ ಜಂಕ್ಷನ್ ತನಕ 200 ಮಿಕ್ಕಿ ಸ್ಟಾಲ್, ಸಾಂಸ್ಕೃತಿಕ ವೇದಿಕೆಗಳು, ರಸ್ತೆಗಳ ಉದ್ದಕ್ಕೂ ದೀಪಾಲಂಕಾರ, ಮಕ್ಕಳಿಗೆ ಆಡಲು ಪ್ರತ್ಯೇಕ ಕಿಡ್ಸ್ ಝೋನ್ ವಿಶೇಷ ಆಕರ್ಷಣೆಯಾಗಿದೆ. ನಿತ್ಯ ಸಾವಿರಾರು ಜನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್, ಮೂಡಾ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ ಪಾಂಡೇಶ್ವರ, ಪ್ರಮುಖರಾದ ರೂಪಾ ಡಿ ಬಂಗೇರ, ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಳ್ಳಾಲ್ ಭಾಗ್ , ಜಗದೀಶ್ ಕದ್ರಿ, ಲಲಿತ್ ರಾಜ್ ಮೆಂಡನ್ , ಅಶ್ವಿತ್ ಕೊಟ್ಟಾರಿ, ಹಾಗೂ ಗಣ್ಯರು ಉಪಸ್ಥಿತರಿದ್ದರು.

DAKSHINA KANNADA

ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..

Published

on

ಉಡುಪಿ: ಬಡಗುತಿಟ್ಟು ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67ವ) ಇಹಲೋಕ ತ್ಯಜಿಸಿದ್ದಾರೆ. ಅಲ್ಪಕಾಲದಿಂದ ಅಸೌಖ್ಯದಿಂದಿದ್ದ ಇವರು ಬೆಂಗಳೂರಿನಲ್ಲಿರುವ ಪುತ್ರನ  ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಮನೆಯಲ್ಲಿ ಇಂದು(ಎ.25) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ ಕೀರ್ತಿ ಅವರದ್ದಾಗಿತ್ತು.

bharadeshwara

ಭಾಗವತಿಕೆಯಲ್ಲಿ ಗಾನ ಕೋಗಿಲೆ ಎನಿಸಿಕೊಂಡ ಧಾರೇಶ್ವರ:

ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳದಲ್ಲಿ ನಿವೃತ್ತಿ ಹೊಂದಿದ್ದರು. ಆರಂಭದಲ್ಲಿ ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಭಾಗವತರಾಗಿ ಪ್ರಖ್ಯಾತಿಗೊಂಡಿದ್ದರು. ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ  ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು.

ಮುಂದೆ ಓದಿ..; ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು. ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗ, ಯಕ್ಷ ಅಭಿಮಾನಿಗಳನ್ನು ಅಗಲಿದ್ದಾರೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Continue Reading

DAKSHINA KANNADA

ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್‌ಗೆ ಗಡಿಪಾರು..!

Published

on

ಪುತ್ತೂರು:  ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್‌ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್‌ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

akshaya rajaputh

ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

ಅಕ್ಷಯ್‌ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.

Continue Reading

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

LATEST NEWS

Trending